ಒಳಮೀಸಲಾತಿ ಹೋರಾಟಕ್ಕೆ ಖಾಕಿ ತಡೆ; ಪ್ರತಿ ಜಿಲ್ಲೆಯಲ್ಲಿ ಸಚಿವರಿಗೆ ಘೇರಾವ್‌ ಹಾಕಲು ನಿರ್ಧಾರ

Date:

ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಅನುಸರಿಸಲಾಗುತ್ತಿರುವ ಅವೈಜ್ಞಾನಿಕ ನಡೆ, ತಾರತಮ್ಯ ಖಂಡಿಸಿ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ’ ಇಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ‘ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ.ಮಹದೇವಪ್ಪನವರ ಮನೆ ಮುತ್ತಿಗೆ’ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಪೊಲೀಸರು ಹೋರಾಟಗಾರರನ್ನು ಬಂಧಿಸಿದರು.

ನೊಂದ ಸಮುದಾಯಗಳ ಕೂಗಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು, “ನಮ್ಮ ಎಲ್ಲ ಹಕ್ಕೊತ್ತಾಯಗಳಿಗೆ ಸಂಬಂಧಿಸಿದಂತೆ ಸರ್ಕಾರ ತೀರ್ಮಾನ ತೆಗೆದುಕೊಳ್ಳದಿದ್ದರೆ ಹೋರಾಟವನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸಲಾಗುವುದು, ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಲಾಗುವುದು” ಎಂದು ಎಚ್ಚರಿಸಿದ್ದಾರೆ.

“ಬಡ್ತಿ, ಬ್ಯಾಕ್ಲಾಗ್‌ ಹುದ್ದೆಗಳ ನೇಮಕಾತಿಗೆ ಒಳಮೀಸಲಾತಿಯನ್ನು ಅನ್ವಯಿಸಿ ಕೂಡಲೇ ಆದೇಶ ಹೊರಡಿಸಬೇಕು. ಎಕೆ, ಎಡಿ, ಎಎ ಕುರಿತು ಈಗಾಗಲೇ ಹೊರಡಿಸಿರುವ ಆದೇಶದಲ್ಲಿ ಹಲವು ಗೊಂದಲಗಳಿರುವುದರಿಂದ ಪರಿಷ್ಕರಿಸಿ ಮರು ಆದೇಶವನ್ನು ತಕ್ಷಣವೇ ಹೊರಡಿಸಬೇಕು. ಜಸ್ಟಿಸ್ ಎಚ್‌.ಎನ್‌. ನಾಗಮೋಹನ ದಾಸ್‌ ವರದಿಯಲ್ಲಿ ಸೂಚಿಸಿರುವ 4 ಲಕ್ಷ 73 ಸಾವಿರ ಜನರಲ್ಲಿ ನಕಲಿ ಜನರಿರುವ ಸಂಶಯ ಒಳಮೀಸಲಾತಿ ಹೋರಾಟಗಾರರಲ್ಲಿದೆ. ಹಾಗಾಗಿ ಕೂಡಲೇ ಈ 4 ಲಕ್ಷ 73 ಸಾವಿರ ಜನರ ಮಾಹಿತಿಯನ್ನು ಬಹಿರಂಗಗೊಳಿಸಬೇಕು” ಎಂಬ ಆಗ್ರಹಗಳು ಸೇರಿದಂತೆ ಒಟ್ಟು ಎಂಟು ಬೇಡಿಕೆಗಳನ್ನು ಇಟ್ಟಿದ್ದಾರೆ. ಜೊತೆಗೆ, “ಒಳಮೀಸಲಾತಿ ಜಾರಿಯಲ್ಲಿ ಆಗುತ್ತಿರುವ ಗೊಂದಲಗಳಿಗೆ ಸಚಿವ ಎಚ್‌.ಸಿ. ಮಹದೇವಪ್ಪನವರೇ ನೇರ ಹೊಣೆ. ಅವರು ತಕ್ಷಣ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಚ್‌.ಸಿ. ಮಹದೇವಪ್ಪನವರ ಮನೆ ಮುತ್ತಿಗೆ ಹಾಕುವ ಹೋರಾಟದ ಸಲುವಾಗಿ ಒಳಮೀಸಲಾತಿ ಹೋರಾಟಗಾರರ ಒಂದು ತಂಡ ಮಹದೇವಪ್ಪನವರ ನಿವಾಸದ ಬಳಿ ಬೆಳಿಗ್ಗೆಯೇ ತೆರಳಿತ್ತು. ಮತ್ತಷ್ಟು ಹಿರಿಯ ಹೋರಾಟಗಾರರು ಫ್ರೀಡಂಪಾರ್ಕ್‌ನಲ್ಲಿ ಜಮಾಯಿಸಿ, ಅಲ್ಲಿಂದ ಪಾದಯಾತ್ರೆ ಮೂಲಕ ಸಚಿವರ ಮನೆಗೆ ತೆರಳಲು ಸಜ್ಜಾಗಿದ್ದರು. ಆದರೆ ಇದಕ್ಕೆ ಪೊಲೀಸರು ಅವಕಾಶ ಕೊಡಲಿಲ್ಲ. ಮಹದೇವಪ್ಪನವರ ಮನೆಯ ಮುಂದೆ ಸೇರಿದ್ದ ಹೋರಾಟಗಾರರನ್ನೆಲ್ಲ ಬಲವಂತವಾಗಿ ಬಸ್ಸಿಗೆ ತುಂಬಿಕೊಂಡ ಪೊಲೀಸರು, ಸೀದಾ ಫ್ರೀಡಂಪಾರ್ಕ್‌ಗೆ ಕರೆತಂದರು.

WhatsApp Image 2025 10 10 at 15.28.30

ಫ್ರೀಡಂಪಾರ್ಕ್‌ನಿಂದ ಹೊರಟಿದ್ದ ಹೋರಾಟಗಾರರನ್ನು ಹೊರಗೆ ಹೋಗದಂತೆ ಬ್ಯಾರಿಕೇಡ್‌ಗಳನ್ನು ಹಾಕಿ ತಡೆದು ನಿಲ್ಲಿಸಿದರು. ಸರ್ಕಾರದ ವರ್ತನೆಯ ವಿರುದ್ಧ ಆಕ್ರೋಶ ಭುಗಿಲೆದ್ದಿತು. ಹೋರಾಟಗಾರರು ಎಚ್‌.ಸಿ.ಮಹದೇವ ಮತ್ತು ಸರ್ಕಾರಕ್ಕೆ ಧಿಕ್ಕಾರ ಕೂಗಿದರು. ಒಳಮೀಸಲಾತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದರು. ಬಳಿಕ ನಾಲ್ಕು ಬಸ್‌ಗಳಲ್ಲಿ ಎಲ್ಲ ಹೋರಾಟಗಾರರನ್ನು ತುಂಬಿಸಿಕೊಂಡು ಮೈಸೂರು ರಸ್ತೆಯಲ್ಲಿರುವ ಸಿಟಿ ಆರ್ಮ್ಡ್‌ ರಿಸರ್ವ್ ಮೈದಾನಕ್ಕೆ ಕರೆದೊಯ್ಯಲಾಯಿತು. ಸಂಜೆ ಐದು ಗಂಟೆಯವರೆಗೂ ಅವರನ್ನು ಅಲ್ಲಿಯೇ ಉಳಿಸಿಕೊಳ್ಳಲಾಗಿತ್ತು. ಆನಂತರ ಮಹದೇವಪ್ಪನವರ ನಿವಾಸಕ್ಕೆ ಹೋರಾಟಗಾರರನ್ನು ಮಾತುಕತೆಗೆ ಕರೆದೊಯ್ಯುವ ಪ್ರಕ್ರಿಯೆಗಳು ನಡೆದವು.  

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿಗಾಗಿ ಆಗ್ರಹಿಸಿ ಕಳೆದ 35 ವರ್ಷಗಳಿಂದ ನಿರಂತರವಾಗಿ ಬೀದಿ ಹೋರಾಟ ಹಾಗೂ ಕಾನೂನು ಹೋರಾಟದಿಂದಾಗಿ ಆಗಸ್ಟ್‌ 1, 2024ರಂದು ಸರ್ವೋಚ್ಚ ನ್ಯಾಯಾಲಯದ 7 ಜನ ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಒಳಮೀಸಲಾತಿಯ ಪರವಾಗಿ ತೀರ್ಪು ನೀಡಿ ರಾಜ್ಯ ಸರ್ಕಾರಗಳ ಹೆಗಲಿಗೆ ಒಳಮೀಸಲಾತಿ ಜಾರಿ ಮಾಡುವ ಅಧಿಕಾರ ನೀಡಿ 14 ತಿಂಗಳುಗಳು ಗತಿತಿಸಿದರೂ ಒಳಮೀಸಲಾತಿ ಕುರಿತಂತೆ ತಾರ್ಕಿಕ ಅಂತ್ಯ ಕಂಡಿಲ್ಲ. ತಡವಾಗಿ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿ ಮಾಡಲು ನಿವೃತ್ತ ನ್ಯಾಯಮೂರ್ತಿ ಎಚ್‌. ಎನ್‌ ನಾಗಮೋಹನ ದಾಸ್‌ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸಂಗ್ರಹ ಮಾಡಿ, ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಯ ಕುರಿತು ನಿರ್ಣಯ ಮಾಡಲಾಯಿತು. ಇದು ಒಳಮೀಸಲಾತಿ ಹೋರಾಟಕ್ಕೆ ತಾತ್ವಿಕ ಗೆಲುವು ಸಿಕ್ಕಂತಾಗಿದೆ. ಆದರೆ ಒಳಮೀಸಲಾತಿಯನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಕಳೆದ 2 ತಿಂಗಳಿನಿಂದ ರಾಜ್ಯ ಸರ್ಕಾರ ಮತ್ತು ಸಮಾಜ ಕಲ್ಯಾಣ ಇಲಾಖೆಯು ವಿಳಂಬ ಧೋರಣೆ ಅನುಸರಿಸುತ್ತಿರುವುದು ಒಳಮೀಸಲಾತಿ ಹೋರಾಟಗಾರರಲ್ಲಿ ರಾಜ್ಯ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಮೇಲೆ ಹಾಗೂ ಕರ್ನಾಟಕ ಸರ್ಕಾರದ ಮೇಲೆ ವಿಶ್ವಾಸವಿಲ್ಲದಾಗಿದೆ. ಅಲ್ಲದೆ ಸಮಾಜ ಕಲ್ಯಾಣ ಇಲಾಖೆಯಲ್ಲಿರುವ ಕೆಲವು ಅಧಿಕಾರಿಗಳು ಬೇಕಂತಲೇ ಪ್ರಮಾದ ಎಸಗುತ್ತಿದ್ದಾರೆಂಬ ಆಕ್ರೋಶ ಒಳಮೀಸಲಾತಿ ಹೋರಾಟಗಾರರಲ್ಲಿ ಮುಡುಗಟ್ಟಿತ್ತು.

WhatsApp Image 2025 10 10 at 15.28.24

ಈ ಕಾರಣಕ್ಕೆ ಸಮಾಜ ಕಲ್ಯಾಣ ಇಲಾಖೆಯ ಸಚಿವ ಮಹದೇವಪ್ಪನವರ ಮನೆಗೆ  ಒಳಮೀಸಲಾತಿ ಹೋರಾಟಗಾರರು ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಹೋರಾಟಗಾರರನ್ನು ಬಂಧಿಸಿದರು.

ಹೋರಾಟಗಾರರ ಹಕ್ಕೋತ್ತಾಯಗಳು

1. ಬಡ್ತಿ, ಬ್ಯಾಕ್ಲಾಗ್‌ ಹುದ್ದೆಗಳ ನೇಮಕಾತಿಗೆ ಒಳಮೀಸಲಾತಿಯನ್ನು ಅನ್ವಯಿಸಿ ಕೂಡಲೇ ಆದೇಶ ಹೊರಡಿಸಬೇಕು.

2. ಎಕೆ, ಎಡಿ, ಎಎ ಕುರಿತು ಈಗಾಗಲೇ ಹೊರಡಿಸಿರುವ ಆದೇಶದಲ್ಲಿ ಹಲವು ಗೊಂದಲಗಳಿರುವುದರಿಂದ ಪರಿಷ್ಕರಿಸಿ ಮರು ಆದೇಶವನ್ನು ತಕ್ಷಣವೇ ಹೊರಡಿಸಬೇಕು.

3. ಜಸ್ಟಿಸ್ ಎಚ್‌.ಎನ್‌.ನಾಗಮೋಹನ್‌ ದಾಸ್‌ ವರದಿಯಲ್ಲಿರುವ 4 ಲಕ್ಷ 73 ಸಾವಿರ ಜನರಲ್ಲಿ ನಕಲಿ ಜನರಿರುವ ಸಂಶಯ ಒಳಮೀಸಲಾತಿ ಹೋರಾಟಗಾರರಲ್ಲಿದೆ. ಹಾಗಾಗಿ ಕೂಡಲೇ ಈ 4 ಲಕ್ಷ 73 ಸಾವಿರ ಜನರ ಮಾಹಿತಿಯನ್ನು ಬಹಿರಂಗಗೊಳಿಸಬೇಕು.

4. ತೆಲಂಗಾಣ ಮಾದರಿಯಂತೆ ಸ್ಥಳೀಯ ಸಂಸ್ಥೆಗಳಿಗೂ ಒಳಮೀಸಲಾತಿಯನ್ನು ಅನ್ವಯಿಸಬೇಕು.

5. ಆರ್ಥಿಕ ಕ್ಷೇತ್ರಗಳಿಗೂ ಒಳಮೀಸಲಾತಿಯನ್ನು ಅನ್ವಯಿಸಿ ಆದೇಶ ಹೊರಡಿಸಬೇಕು.

6. ಶಾಶ್ವತ ಆಯೋಗ ರಚಿಸಿ ಅಲೆಮಾರಿ ಸಮುದಾಯಗಳಿಗೆ ಶೇ.1 ಮೀಸಲಾತಿಯನ್ನು ನೀಡಬೇಕು.

7. SCSP/TSP ಸಲಹೆಗಾರರ ಹುದ್ದೆಯನ್ನು ಕೂಡಲೇ ರದ್ದುಪಡಿಸಬೇಕು ಹಾಗೂ ಹಲವು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡಬೇಕು.

8. ⁠ಒಳಮೀಸಲಾತಿ ಜಾರಿ ಕವಲು ಸಮಿತಿಯನ್ನು ರಚಿಸಬೇಕು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...