ಹಾಲಿನ ದರ ಹೆಚ್ಚಳ ಬೆನ್ನಲ್ಲೇ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸಿದ ಕೆಎಮ್‌ಎಫ್‌

Date:

ಹಾಲು ಉತ್ಪಾದಿಸುವ ಪ್ರಮುಖ ರಾಜ್ಯವಾಗಿ ಕರ್ನಾಟಕ ತನ್ನ ಛಾಪು ಮುಂದುವರಿಸಿದ್ದು, ಕರ್ನಾಟಕ ಹಾಲು ಒಕ್ಕೂಟ (ಕೆಎಮ್‌ಎಫ್‌) ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.

ಮೇ 22ರಂದು ಈ ದಾಖಲೆ ಸಾಧ್ಯವಾಗಿದ್ದು, ಅನುಕೂಲಕರವಾದ ಪೂರ್ವ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣದಿಂದ ದಾಖಲೆ ಸಾಧ್ಯವಾಗಿದೆ.

ಕರ್ನಾಟಕ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ಬಿ ಶಿವಸ್ವಾಮಿ ಈ ಕುರಿತು ಈ ದಿನ.ಕಾಮ್‌ ಜೊತೆ ಮಾಹಿತಿ ಹಂಚಿಕೊಂಡಿದ್ದು, “ಕೆಎಂಎಫ್ ಪ್ರಕಾರ, ಇದು ಕಳೆದ ವರ್ಷ ದಿನವೊಂದರಲ್ಲಿ ಸಂಗ್ರಹಿಸಿದ ಗರಿಷ್ಠ ಹಾಲಿಗಿಂತಲೂ ಹೆಚ್ಚು. ಕಳೆದ ವರ್ಷ ಜೂನ್ 28 ರಂದು 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗಿತ್ತು. ಆನಂತರ ದೈನಂದಿನ ಸರಾಸರಿ ಸಂಗ್ರಹ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ಕಂಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆ ಚೆನ್ನಾಗಿ ಆದ ಕಾರಣ ಹಸಿರು ಮೇವು ಲಭ್ಯತೆಯಿಂದ ಈ ಹಾಲು ಹೆಚ್ಚಾಗಿದೆ. ಅಲ್ಲದೇ ರಾಜ್ಯ ಸರ್ಕಾರ ರೈತರಿಗೆ ನೇರವಾಗಿ ಲಭಿಸುವ ಹಾಗೇ ಹಾಲಿನ ದರ ಏರಿಸಿದ್ದರಿಂದ ಖಾಸಗಿಯಾಗಿ ಹಾಲು ಹಾಕುವುದು ಬಿಟ್ಟು ಕೆಎಮ್‌ಎಫ್‌ಗೆ ಹಾಕುತ್ತಿದ್ದಾರೆ. 5 ರೂ. ಪ್ರೋತ್ಸಾಹ ಧನ ಸೇರಿ ಒಟ್ಟು ರೈತರಿಗೆ ಪ್ರತಿ ಲೀಟರ್‌ ಹಾಲಿಗೆ 40 ರೂ. ವರೆಗೂ ಸಿಗುತ್ತಿದೆ. ಇದರಿಂದ ಹಾಲಿನ ಉತ್ಪಾದನೆ ಅಧಿಕವಾಗಿದೆ. ಇದೇ ಮುಂಗಾರು ಮುಗಿಯುವುದರೊಳಗೆ 1 ಕೋಟಿ 30 ಲಕ್ಷ ಹಾಲು ಸಂಗ್ರಹ ಸಾಧ್ಯತೆ ಇದೆ” ಎಂದು ಶಿವಸ್ವಾಮಿ ವಿವರಿಸಿದರು.

ಬಿ. ಶಿವಸ್ವಾಮಿ
ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯ ಸರ್ಕಾರದ ‘ಗೃಹ ಆರೋಗ್ಯ’ ಮತ್ತೊಂದು ಗ್ಯಾರಂಟಿ ಯೋಜನೆಯೇ?

ಜೂನ್ 1 ರಂದು ವಿಶ್ವ ಹಾಲು ದಿನಾಚರಣೆಯ ಅಂಗವಾಗಿ, ಕೆಎಂಎಫ್ ತನ್ನ ಜನಪ್ರಿಯ ನಂದಿನಿ ಬ್ರ್ಯಾಂಡ್ ಅಡಿಯಲ್ಲಿ 18 ಹೊಸ ಬಗೆಯ ಕೇಕ್​ಗಳು ಮತ್ತು ಇತರ ಹಾಲಿನ ಉತ್ಪನ್ನಗಳನ್ನು ಬಿಡುಗಡೆ ಮಾಡಿತ್ತು. ಕೆಎಂಎಫ್ ಮತ್ತು ಅದರ ಅಂಗಸಂಸ್ಥೆಗಳಾದ ಹಾಲು ಒಕ್ಕೂಟಗಳು ಈಗಾಗಲೇ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ನಂದಿನಿ ಹಲ್ವಾ, ಬ್ರೆಡ್, ಬನ್​​ಗಳು ಮತ್ತು ಐಸ್ ಕ್ರೀಮ್ ಸೇರಿದಂತೆ 150 ಕ್ಕೂ ಹೆಚ್ಚು ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ. ಇದೀಗ ಹೊಸ ಬೇಕರಿ ಉತ್ಪನ್ನಗಳ ಸೇರ್ಪಡೆಯೊಂದಿಗೆ, ಕೆಎಂಎಫ್ ಉದ್ಯಮ ಮತ್ತಷ್ಟು ವಿಸ್ತರಣೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...