ಸತ್ಯ ಹೇಳುವವರ ಬಾಯಿ ಮುಚ್ಚಿಸಲು ಕೆ ಎನ್ ರಾಜಣ್ಣ ತಲೆದಂಡ: ಜೆಡಿಎಸ್‌‌

Date:

“ಅಹಿಂದ…. ಅಹಿಂದ…. ಎನ್ನುತ್ತಲೇ ಹಿಂದುಳಿದ ದಲಿತ ನಾಯಕರನ್ನು ತುಳಿಯುತ್ತಿರುವ ಮಜವಾದಿ ಸಿದ್ದರಾಮಯ್ಯ” ಎಂದು ಜೆಡಿಎಸ್ ಟೀಕಿಸಿದೆ.

ಸಚಿವ ಸ್ಥಾನಕ್ಕೆ ಕೆ ಎನ್‌ ರಾಜಣ್ಣ ವಜಾ ವಿಚಾರವಾಗಿ ಟ್ವೀಟ್‌ ಮಾಡಿರುವ ಜೆಡಿಎಸ್‌, “ಮುಖ್ಯಮಂತ್ರಿಗಳೇ ನಿಮ್ಮ ಅಧಿಕಾರದ ದುರಾಸೆಗೆ ವಾಲ್ಮೀಕಿ ಸಮುದಾಯದ ಮತ್ತೊಬ್ಬ ದಲಿತ ನಾಯಕನನ್ನು ಬಲಿಕೊಟ್ಟಿದ್ದೀರಿ. ಪರಮಾಪ್ತ ಕೆ ಎನ್‌ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಿದ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ನಾಚಿಕೆಯಾಗಬೇಕು” ಎಂದು ಕುಟುಕಿದೆ.

“ಹಿಂದೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಲೂಟಿ ಹೊಡೆದು ತೆಲಂಗಾಣ ಮತ್ತು ಬಳ್ಳಾರಿ ಚುನಾವಣೆಯಲ್ಲಿ ಅಕ್ರಮವಾಗಿ ಹಣ ಬಳಸಿಕೊಂಡು, ಬಿ. ನಾಗೇಂದ್ರ ಅವರನ್ನು ಬಲಿಪಶು ಮಾಡಿ ಜೈಲಿಗೆ ಅಟ್ಟಿದಿರಿ. ಈಗ ಮತಗಳ್ಳತನದ ಬಗ್ಗೆ ಸುಳ್ಳು ಆರೋಪ ಮಾಡಿರುವ ರಾಹುಲ್‌ ಗಾಂಧಿಯನ್ನು ಮೆಚ್ಚಿಸಲು, ಸತ್ಯ ಹೇಳುವವರ ಬಾಯಿ ಮುಚ್ಚಿಸಲು ರಾಜಣ್ಣ ಅವರ ತಲೆದಂಡ ಮಾಡಲಾಗಿದೆ” ಎಂದು ದೂರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದುಳಿದ ವರ್ಗಗಳ ನೇತಾರ ದಿ.ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಬೇಕು ಎಂಬ ಹಪಾಹಪಿಯಲ್ಲಿರುವ ಸಿದ್ದರಾಮಯ್ಯ, ದಲಿತ ನಾಯಕರಿಗೆ ಚೂರಿ ಹಾಕಲು ಹಿಂಜರಿಯುವುದಿಲ್ಲ ಎಂಬುದಕ್ಕೆ ರಾಜಣ್ಣಗೆ ಆಗಿರುವ ಈ ಘೋರ ಅನ್ಯಾಯವೇ ಸಾಕ್ಷಿ. ರಾಜಣ್ಣ ಮಾಡಿದ ಅಪರಾಧವಾದರೂ ಏನು? ಸಿದ್ದರಾಮಯ್ಯ ಅವರೇ, ದಲಿತ ಸಮುದಾಯಕ್ಕೆ ವಂಚಿಸಿ ಅಧಿಕಾರದಲ್ಲಿ ಮುಂದುವರಿಯಲು ನಿಮ್ಮ ಆತ್ಮಸಾಕ್ಷಿಯಾದರೂ ಹೇಗೆ ಒಪ್ಪುತ್ತದೆ” ಎಂದು ಪ್ರಶ್ನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...