ಕೊಪ್ಪಳ | ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ; ಎಲ್ಲ 9 ಆರೋಪಿಗಳು ಖುಲಾಸೆ

Date:

ಒಂದು ದಶಕದ ಹಿಂದೆ ರಾಜ್ಯದ ರಾಜಕಾರಣದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ಅಂತಿಮ ಆದೇಶ ಇಲ್ಲಿನ ಜಿಲ್ಲಾ ನ್ಯಾಯಾಲಯದಿಂದ ಶುಕ್ರವಾರ ಪ್ರಕಟವಾಗಿದ್ದು, ಎಲ್ಲ 9 ಜನ ಆರೋಪಿಗಳನ್ನು ನಿರಪರಾಧಿಗಳು ಎಂದು ನ್ಯಾಯಾಲಯ ಆದೇಶ ನೀಡಿದೆ.

ಆಗಲೂ ಸಚಿವರಾಗಿದ್ದ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಿವರಾಜ ತಂಗಡಗಿ ರಾಜೀನಾಮೆಗೂ ಯಲ್ಲಾಲಿಂಗನ ಕೊಲೆ ಪ್ರಕರಣ ಕಾರಣವಾಗಿತ್ತು. ಜಿಲ್ಲಾ ನ್ಯಾಯಾಲಯ ಸೆ. 24ರಂದು ಪ್ರಕರಣದ ಅಂತಿಮ ವಿಚಾರಣೆ ನಡೆದಿತ್ತು.

ರಾಜಕೀಯ ಷಡ್ಯಂತ್ರದ ಕಾರಣಕ್ಕೆ ಒಂಬತ್ತು ಜನರ ಮೇಲೆ ಕೊಲೆ ಆರೋಪ ಹೊರಿಸಲಾಗಿತ್ತು. ಇದು ನಿರಾಧಾರ ಎಂದು ನ್ಯಾಯಾಲಯ ಹೇಳಿದ್ದು, ಯಲ್ಲಾಲಿಂಗನದ್ದು ಕೊಲೆ ಅಲ್ಲ; ಆತ್ಮಹತ್ಯೆ ಎಂದು ಅವರ ಸ್ವಂತ ಸಹೋದರನೇ ಹೇಳಿದ್ದರು. ಈ ಎಲ್ಲ ಅಂಶಗಳನ್ನು ಗಮನಿಸಿ ನ್ಯಾಯಾಲಯ ಅವರನ್ನು ನಿರ್ದೋಷಿ ಎಂದು ಹೇಳಿದೆ ಎಂದು ಆರೋಪಿಗಳು ಎನಿಸಿದ್ದ ಪರ ವಕೀಲ ಗಂಗಾಧರ ಮಾಧ್ಯಮಗಳಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ಆರೋಪಿಗಳಾಗಿದ್ದ ಕಾಂಗ್ರೆಸ್ ಮುಖಂಡ ಹನುಮೇಶ ನಾಯಕ, ಬಾಳನಗೌಡ, ಕಾಡಮಂಜ, ಮಹಾಂತೇಶ ನಾಯಕ, ಮನೋಜ ಪಾಟೀಲ್, ನಂದೀಶ, ಪರಶುರಾಮ, ಯಮನೂರಪ್ಪ ಹಾಗೂ ದುರ್ಗಪ್ಪ ಅವರ ಮೇಲೆ ಕೊಲೆ ಆರೋಪ ಬಂದಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನರಮೇಧ ನಡೆಸಿದವರೊಂದಿಗೆ ಭಾರತ ನಿಲ್ಲುವುದು ಅಕ್ಷಮ್ಯ ಅಪರಾಧ

ಏನಿದು ಘಟನೆ: ಕನಕಗಿರಿ ತಾಲ್ಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ತಮ್ಮ ಗ್ರಾಮದಲ್ಲಿ ನಡೆದಿದ್ದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದ. ಇದಾದ ಬಳಿಕ 2015ರ ಜನವರಿ 11ರಂದು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಯಲ್ಲಾಲಿಂಗನ ಮೃತದೇಹ ಪತ್ತೆಯಾಗಿತ್ತು.

ಇದು ಮೊದಲು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದರೂ ನಂತರ ಕೊಲೆ ಎಂದು ಕೊಪ್ಪಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಚಿವ ಶಿವರಾಜ ತಂಗಡಗಿ ಆಪ್ತ ಹನಮೇಶ ನಾಯಕ ಸೇರಿ 9 ಜನರ ವಿರುದ್ಧ ಇಲ್ಲಿ ಪ್ರಕರಣ ದಾಖಲಾಗಿತ್ತು.‌ ಯಲ್ಲಾಲಿಂಗನ ಸಾವಿಗೆ ನ್ಯಾಯ ಒದಗಿಸುವಂತೆ ದೊಡ್ಡ ಮಟ್ಟದಲ್ಲಿ ಹೋರಾಟಗಳು ಕೂಡ ನಡೆದಿದ್ದರಿಂದ ರಾಜ್ಯ ಮಟ್ಟದಲ್ಲಿ ಸದ್ದು ಮಾಡಿ ಸಚಿವ ಶಿವರಾಜ ತಂಗಡಗಿ ಸಂಪುಟದಿಂದ ಹೊರಬೀಳುವಂತಾಗಿತ್ತು. ಸುದೀರ್ಘ ಹತ್ತು ವರ್ಷಗಳ ವಿಚಾರಣೆ ನಡೆದಿದ್ದು ಈಗ ನ್ಯಾಯಾಲಯದ ಈ ಆದೇಶ ನೀಡಿದೆ.

ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿತ್ತು. ನಂತರ ಆರೋಪಿಗಳಿಗೆ ಜಾಮೀನು ದೊರೆತಿತ್ತು. 2021ರಲ್ಲಿ ಆರೋಪಿ ಮಹಾಂತೇಶ್ ನಾಯಕನ ಮದುವೆಯಲ್ಲಿ ಪೊಲೀಸರು ಭಾಗವಹಿಸಿದ್ದರಿಂದ ಪ್ರಕರಣ ಮತ್ತೆ ಮುನ್ನಲೆಗೆ ಬಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...