ಕೆಪಿಎಸ್‌ಸಿ 384 ಗೆಜೆಟೆಡ್‌ ಪ್ರೊಬೇಷನರ್‌ ನೇಮಕ ಅಧಿಸೂಚನೆ ರದ್ದು

Date:

ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2024ರ ಫೆಬ್ರವರಿ 26ರಂದು ಹೊರಡಿಸಿದ್ದ 384 ಗೆಜೆಟೆಡ್‌ ಪ್ರೊಬೇಷನರ್‌ ನೇಮಕ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ (ಕೆಎಸ್‌ಎಟಿ) ರದ್ದುಪಡಿಸಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಿ ಎನ್‌ ಮಧು ಸಲ್ಲಿಸಿದ್ದ ಅರ್ಜಿಯನ್ನು ಕೆಎಸ್‌ಎಟಿ ಅಧ್ಯಕ್ಷ ನ್ಯಾಯಮೂರ್ತಿ ಬಿ ಆರ್‌ ಬೂದಿಹಾಳ್‌ ಮತ್ತು ಆಡಳಿತಾತ್ಮಕ ಸದಸ್ಯ ರಾಘವೇಂದ್ರ ಔರಾದ್ಕರ್‌ ಅವರ ವಿಭಾಗೀಯ ಪೀಠ ಪುರಸ್ಕರಿಸಿದ್ದು, ಮೇ 28ರಂದು ಈ ಕುರಿತು ಆದೇಶ ಹೊರಡಿಸಿದೆ.

ಸರ್ಕಾರಿ ನೇಮಕಾತಿಗಳಲ್ಲಿ ಮೀಸಲು ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ಆದೇಶಕ್ಕೆ ಈ ಮೂಲಕ ಹಿನ್ನಡೆಯಾಗಿದೆ. ಹಾಗೆಯೇ ಕೆಎಎಸ್‌ ಹುದ್ದೆಗಳ ಭರ್ತಿ ಜೊತೆಗೆ 2022ರ ಡಿಸೆಂಬರ್‌ 12ರಂದು ರಾಜ್ಯ ಸರ್ಕಾರ ಮೀಸಲು ಹೆಚ್ಚಳಕ್ಕೆ ಹೊರಡಿಸಿದ್ದ ಆದೇಶವನ್ನೂ ಸಹ ಕೆಎಸ್‌ಎಟಿ ರದ್ದುಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಪಿಎಸ್‌ಸಿ ಕಾನೂನು ಪ್ರಕಾರ ನೇಮಕಕ್ಕೆ ಹೊಸದಾಗಿ ಅಧಿಸೂಚನೆ ಹೊರಡಿಸಲು ಸ್ವತಂತ್ರವಾಗಿದೆ ಎಂದು ಸ್ಪಷ್ಟಪಡಿಸಿದೆ. ಇದರಿಂದ ಕೆಎಎಸ್‌ ಅಧಿಕಾರಿಗಳ ನೇಮಕ ಮತ್ತೆ ಅತಂತ್ರಕ್ಕೆ ಸಿಲುಕಿದಂತಾಗಿದೆ.

ಪ್ರಕರಣದ ಹಿನ್ನೆಲೆ

ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ 2022ರಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿ ಸೀಟು ಹಂಚಿಕೆ ಮೀಸಲು ಮತ್ತು ರಾಜ್ಯ ಸೇವೆಯಲ್ಲಿ ನೇಮಕ ಹುದ್ದೆಗಳಿಗೆ ಮೀಸಲು) ಸುಗ್ರೀವಾಜ್ಞೆ ಜಾರಿಗೊಳಿಸಿತ್ತು.

ಅದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣವನ್ನು ಶೇ. 18ರಿಂದ ಶೇ. 24ಕ್ಕೆ ಹೆಚ್ಚಿಸಿ ಸುಗ್ರೀವಾಜ್ಞೆ ಹೊರಡಿಸಿತ್ತು. ಅದನ್ನು ಆಧರಿಸಿ ಕರ್ನಾಟಕ ಸರ್ಕಾರಿ ಸೇವೆಯಲ್ಲಿ ರೋಸ್ಟರ್‌ ಮೀಸಲು ನಿಗದಿಪಡಿಸಿತ್ತು. ಆನಂತರ ಅದನ್ನು ಆಧರಿಸಿ ಕೆಪಿಎಸ್‌ಸಿ 384 ಗ್ರೂಪ್‌ ಎ ಮತ್ತು ಬಿ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿತ್ತು. ಅದನ್ನು ಅರ್ಜಿದಾರರು ಪ್ರಶ್ನಿಸಿ ಕೆಎಎಸ್‌ಎಟಿ ಮೊರೆ ಹೋಗಿದ್ದರು.

ಕೆಎಎಸ್‌ ಅಧಿಕಾರಿಗಳ ನೇಮಕಕ್ಕೆ ಮುಖ್ಯ ಪರೀಕ್ಷೆ ನಡೆದು ಇನ್ನೇನು ಫಲಿತಾಂಶ ಹೊರಬೀಳಬೇಕಿದೆ. ಈ ಹಂತದಲ್ಲಿ ಕೆಎಸ್‌ಎಟಿ ಆದೇಶ ಅಭ್ಯರ್ಥಿಗಳಿಗೆ ಸಂಕಷ್ಟ ತಂದಿದ್ದು, ಸರ್ಕಾರ ಇದೀಗ ನೇಮಕ ಪ್ರಕ್ರಿಯೆಯನ್ನು ಊರ್ಜಿತಗೊಳಿಸಬೇಕಾದರೆ ಕೆಎಸ್‌ಎಟಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...