ಕೆಪಿಎಸ್‌ಸಿ ಫಲಿತಾಂಶ ಪ್ರಕಟ ವಿಳಂಬ: ಮಡಕೆ ಒಡೆದು ಪ್ರತಿಭಟಿಸಿದ ವಿದ್ಯಾರ್ಥಿ ಮುಖಂಡನ ಬಂಧನ

Date:

ಕರ್ನಾಟಕ ಲೋಕಸೇವಾ ಆಯೋಗವು ಭ್ರಷ್ಟಾಚಾರದಿಂದ ಕೂಡಿದ್ದು, ಗ್ರೂಪ್ ಡಿ ಹುದ್ದೆಯಿಂದ ಹಿಡಿದು ಗ್ರೂಪ್ ಎ ಹುದ್ದೆಗಳನ್ನು ಕೋಟಿಗಳಿಗೆ ಹರಾಜು ಹಾಕಲಾಗುತ್ತಿದೆ. ಫಲಿತಾಂಶ ಪ್ರಕಟಿಸಲು ಕೂಡ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ, ಪ್ರತಿಭಟಿಸಿದ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಕೆಪಿಎಸ್‌ಸಿ ಕಚೇರಿಯ ಮುಂದೆ ಆಗಮಿಸಿದ ಕಾಂತಕುಮಾರ್, ಪ್ರತಿಭಟನಾ ರೂಪಕವಾಗಿ ಮೊಟ್ಟೆ ಹಾಗೂ ಮಡಕೆಗಳನ್ನು ತಂದು ಅದನ್ನು ಒಡೆದು ಹಾಕಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕರ್ನಾಟಕದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಕೆಪಿಎಸ್‌ಸಿ ಅಧ್ಯಕ್ಷರೇ ಗ್ರೂಪ್ ಡಿ ಹುದ್ದೆಯಿಂದ ಹಿಡಿದು ಗ್ರೂಪ್ ಎ ಹುದ್ದೆಯವರೆಗೂ ಲಕ್ಷ ಲಕ್ಷ ಕೋಟಿ ಕೋಟಿಗಳಿಗೆ ಹುದ್ದೆಗಳನ್ನು ಹರಾಜು ಹಾಕಿ ಭ್ರಷ್ಟರ ಕೊಂಪೆಯನ್ನಾಗಿ ಪರಿವರ್ತಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದೊಂದು ಹುದ್ದೆಯ ಭರ್ತಿ ಮಾಡಲು ಒಂದು ವರ್ಷದ ಬದಲು ಐದು ವರ್ಷ ತೆಗೆದುಕೊಳ್ಳುತ್ತಿದ್ದಾರೆ. 15 ನೋಟಿಫಿಕೇಶನ್‌ಗಳ ಪರೀಕ್ಷೆ ನಡೆದು ಎರಡು ವರ್ಷಗಳಾಗಿದೆ. ಆದರೆ ಅದರ ಫಲಿತಾಂಶವನ್ನು ಕೆಪಿಎಸ್‌ಸಿ ಇನ್ನೂ ಪ್ರಕಟಿಸಿಲ್ಲ. ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಕೂಡಲೇ ಅಲ್ಲಿಂದ ತೆರವು ಮಾಡಿಸಬೇಕು. ನಮ್ಮ ಹೋರಾಟ ನಿರಂತರವಾಗಿರಲಿದೆ” ಎಂದು ಹೇಳುತ್ತಿದ್ದಂತೆಯೇ ಮಧ್ಯಪ್ರವೇಶ ಮಾಡಿದ ಕಬ್ಬನ್ ಪಾರ್ಕ್‌ ಠಾಣೆಯ ಪೊಲೀಸರು, ಕಾಂತಕುಮಾರ್ ಅವರನ್ನು ದರದರನೆ ಎಳೆದೊಯ್ದು, ಬಂಧಿಸಿದ್ದಾರೆ.

ಪೊಲೀಸರ ನಡೆಯನ್ನು ಖಂಡಿಸಿರುವ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ, ಕೆಪಿಎಸ್‌ಸಿಯನ್ನು ಭ್ರಷ್ಟರ ಕೊಂಪೆಯನ್ನಾಗಿ ಪರಿವರ್ತಿಸಿದ್ದಾರೆ. ಈ ಅನ್ಯಾಯವನ್ನು ಪ್ರಶ್ನಿಸಲು ಹೋಗಿದ್ದ ನಮ್ಮ ಸಂಘಟನೆಯ ಅಧ್ಯಕ್ಷರಾದ ಕಾಂತಕುಮಾರ್ ಅವರನ್ನು ಈ ರೀತಿ ಬಂಧಿಸಬಹುದೇ?” ಎಂದು ವಿಡಿಯೋ ಹಂಚಿಕೊಂಡು ಪ್ರಶ್ನಿಸಿದೆ.

ಕಾಂತಕುಮಾರ್ ಅವರ ಬಂಧನದ ಬಗ್ಗೆ ಈ ದಿನ.ಕಾಮ್‌ಗೆ ಮಾಹಿತಿ ನೀಡಿರುವ ಕಬ್ಬನ್ ಪಾರ್ಕ್‌ ಠಾಣೆಯ ಪೊಲೀಸರು, “ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ್ದಾರೆ. ಹಾಗಾಗಿ, ಕಾನೂನು ಉಲ್ಲಂಘಿಸಿದ್ದಕ್ಕಾಗಿ ಬಂಧಿಸಿದ್ದೇವೆ. ಎಫ್ಐಆರ್ ದಾಖಲಿಸಿಕೊಂಡಿದ್ದೇವೆ. ನ್ಯಾಯಾಲಯಕ್ಕೆ ಹಾಜರುಪಡಿಸುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...