ಕೃಷ್ಣಾ ಮೇಲ್ದಂಡೆ ಯೋಜನೆ | ಭೂಮಿ ಖರೀದಿಗೆ ದರ ನಿಗದಿ, ಸರ್ಕಾರದಿಂದ ರೈತರಿಗೆ ಎಷ್ಟು ಪರಿಹಾರ?

Date:

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಅನುಷ್ಠಾನಕ್ಕೆ ಅವಶ್ಯವಿರುವ ಜಮೀನು ಸ್ವಾಧೀನಕ್ಕಾಗಿ ಮತ್ತು ಪರಿಹಾರ ನಿಗದಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಮುಳುಗಡೆಯಾಗುವ ನೀರಾವರಿ ಜಮೀನಿಗೆ ಒಂದು ಎಕರೆಗೆ 40 ಲಕ್ಷ ರೂ. ಮತ್ತು ಒಣ ಬೇಸಾಯದ ( ಖುಷ್ಕಿ ) ಜಮೀನಿಗೆ 30 ಲಕ್ಷ ರೂ. ದಂತೆ ಭೂಮಿ ಖರೀದಿಗೆ ಸರ್ಕಾರ ತೀರ್ಮಾನ ಮಾಡಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ, “ಒಟ್ಟಾರೆ ಈ ಯೋಜನೆಗೆ 70 ಸಾವಿರ ಕೋಟಿ ರೂ. ಬೇಕು. ಪ್ರತಿ ವರ್ಷ 15-20 ಖರ್ಚು ಮಾಡುತ್ತೇವೆ. ಹೇಗೆ ಹಣ ಹೊಂದಿಸಬೇಕು ಎಂಬುದನ್ನು ಸರ್ಕಾರ ಮುಂದಿನ ಹಂತದಲ್ಲಿ ತೀರ್ಮಾನ ಮಾಡಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ನು ಕಾಲುವೆ ನಿರ್ಮಾಣಕ್ಕೆ, 51,000 ಎಕರೆ ಜಮೀನು ಬೇಕಾಗಿದೆ. ಇದಕ್ಕೆ ಪರಿಹಾರವಾಗಿ ಒಣ ಭೂಮಿಗೆ ಎಕರೆಗೆ 25 ಲಕ್ಷ ಹಾಗೂ ನೀರಾವರಿ ಭೂಮಿಗೆ 30 ಲಕ್ಷ ಪರಿಹಾರ ಕೊಡಲು ತೀರ್ಮಾನ ಮಾಡಲಾಗಿದೆ. ಭೂಮಿ ಮುಳುಗಡೆ, ಕಾಲುವೆ, ಪುನರ್ವಸತಿಗೆ ಒಟ್ಟು 1,33,000 ಜಮೀನು ಅಗತ್ಯ ಇದೆ. ಯೋಜನೆಯಿಂದ 20 ಗ್ರಾಮಗಳು ಮುಳುಗಡೆ ಆಗಲಿದೆ‌. ಯೋಜನೆಗೆ ಒಟ್ಟು 70,000 ಕ್ಕೂ ಹೆಚ್ಚು ಕೋಟಿ ಖರ್ಚು ಆಗಲಿದೆ” ಎಂದು ವಿವರಿಸಿದರು.

“ಆಲಮಟ್ಟಿ ಜಲಾಶಯವನ್ನು 519.6 ಮೀಟರ್ 524.256 ಮೀಟರ್ ಎತ್ತರಕ್ಕೆ ಏರಿಸಲು ಟ್ರಿಬ್ಯೂನಲ್ ಅವಾರ್ಡ್ ಮಾಡಿದೆ. 75,000 ಕ್ಕೂ ಹೆಚ್ಚು ಎಕರೆ ಭೂಮಿ ಮುಳುಗಡೆ ಆಗಲಿದೆ. 5 ಲಕ್ಷ ಹೆಕ್ಟೇರ್ ನೀರಾವರಿ ಭೂಮಿಯ ಅಗತ್ಯ ಇದೆ. ಯೋಜನೆಯಿಂದ ರೈತರ ಭೂಮಿಗೆ ನೀರು ಸಿಗಲಿದೆ. ರೈತರಿಗೆ ಅನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆಸಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...