ಕೆಆರ್‌ಎಸ್‌ ಜಲಾಶಯಕ್ಕೆ ನಾಲ್ಕೇ ದಿನದಲ್ಲಿ 11 ಅಡಿ ನೀರು ಹೆಚ್ಚಳ

Date:

ಕೇರಳ ಹಾಗೂ ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಲ್ಕೇ ದಿನದಲ್ಲಿ ಕೆಆರ್‌ಎಸ್ ಜಲಾಶಯಕ್ಕೆ 11 ಅಡಿ ನೀರು ಹೆಚ್ಚಳವಾಗಿದೆ. ಈ ಮೂಲಕ ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿಯಾದಂತಾಗಿದೆ.

ಹಳೇ ಮೈಸೂರು ಭಾಗದ ಜೀವನಾಡಿಯಾದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಗೆ ಉತ್ತಮ ಒಳಹರಿವು ಇದ್ದು, ನಾಲ್ಕೇ ದಿನದಲ್ಲಿ 11 ಅಡಿ ಭರ್ತಿಯಾಗಿದೆ. ಇದೇ ರೀತಿ ಮಳೆ ಮುಂದುವರಿದರೆ ಜೂನ್ ಎರಡನೇ ವಾರದಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸೆಣಸಾಟ ಸೇನೆಯದು, ಮೆರೆದಾಟ ಮೋದಿಯದು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಗಾರು ಆರಂಭದಲ್ಲಿಯೇ ಉತ್ತಮ ಮಳೆಯಾಗುತ್ತಿರುವುದು ರೈತರ ಮುಖದಲ್ಲಿ ಮಂದಹಾಸ ತಂದಿದೆ. ಹಲವು ವರ್ಷಗಳ ಬಳಿಕ ಮೇ ತಿಂಗಳಿನಲ್ಲಿ ಈ ಮಟ್ಟದ ಒಳಹರಿವು ಇದೆ. ಕಳೆದ ನಾಲ್ಕು ದಿನದ ಹಿಂದೆ ನೀರಿನ ಮಟ್ಟ 89 ಅಡಿಗೆ ಕುಸಿದಿತ್ತು. ಇದರಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುತ್ತೆ ಎಂದು ಅಲ್ಲಿನ ಜನರು ಆತಂಕಕ್ಕೊಳಗಾಗಿದ್ದರು.

124.80 ಅಡಿ ಗರಿಷ್ಠ ಮಟ್ಟ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್‌ನಲ್ಲಿ 100.10 ಅಡಿ ನೀರಿದೆ. 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು, ಸದ್ಯ 22.222 ಟಿಎಂಸಿ ನೀರು ಸಂಗ್ರಹವಾಗಿದೆ. ಸದ್ಯ ಒಳಹರಿವಿನ ಪ್ರಮಾಣ 19,448 ಕ್ಯುಸೆಕ್ ಇದ್ದು, 670 ಕ್ಯುಸೆಕ್ ಹೊರಹರಿವಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...