ಹೀನನಾಗಿರುವವನು ಹಿಂದೂ, ಇದೊಂದು ಅವಮಾನಕರ ಶಬ್ದ: ಚಿಂತಕ ಕೆ ಎಸ್ ಭಗವಾನ್

Date:

ಹಿಂದೂ ಅನ್ನೋದು ಅವಮಾನಕರ ಶಬ್ದ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಅಂತ ಚಿಂತಕ ಕೆ ಎಸ್ ಭಗವಾನ್ ಹೇಳಿದ್ದಾರೆ.

ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ಕೆ ಎಸ್ ಭಗವಾನ್ ಹಿಂದೂ ಪದದ ಬಗ್ಗೆ ಮಾತನಾಡಿದ್ದಾರೆ. ಹಿಂದೂ ಶಬ್ದ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್ ಲೇಖಕ‌ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂಧೂ ನದಿಯನ್ನು ಹಿಂದೂ ಅಂತ ಕರೆದರು. ಪರ್ಷಿಯನ್ ಭಾಷೆಯಲ್ಲಿ ‘ಸ’ ಕಾರ ಇಲ್ವಂತೆ, ‘ಸ’ ಕಾರ ‘ಹ’ ಕಾರ ಆಗುತ್ತಂತೆ. ಮುಂದೆ ಅಕ್ಬರ್‌ನ ಕಾಲದಲ್ಲಿ ಈ ದೇಶಕ್ಕೆ ಹಿಂದೂಸ್ತಾನ ಎಂದು ಹೆಸರು ಬಂತು. ಹೀಗಾಗಿ ರಾಮಾಯಣ, ಮಹಾಭಾರತ, ಪುರಾಣ, ವೇದ ಗ್ರಂಥಗಳಲ್ಲಿ ಹಿಂದೂ ಅನ್ನೋ ಹೆಸರಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬಗ್ಗೆ ಕೇಜ್ರಿವಾಲ್‌ಗೆ ಇರಲಿ ಎಚ್ಚರ

ಕಾಶ್ಮೀರದ ಶೈವ ಗ್ರಂಥಗಳಲ್ಲಿ ಹಿಂದೂ ಪದಕ್ಕೆ ಯಾರೂ ಹೀನನಾಗಿದ್ದಾರೊ, ಯಾರು ದೂಷಣೆಗೆ ಒಳಗಾಗಿದ್ದಾರೋ ಅವನು ಹಿಂದೂ ಅಂತ ಇದೆ. ಹಾಗಾಗಿ ಹಿಂದೂ ಅನ್ನೋ ಶಬ್ದ ಬಹಳ ಅಪಮಾನಕರವಾಗಿದೆ. ಚಾತುರ್ವಣದಲ್ಲಿ ಶೂದ್ರ ಅನ್ನೋ ಶಬ್ದ ಸಹ ಮನುಸ್ಮೃತಿ ಪ್ರಕಾರ ಅಪಮಾನಕ್ಕೆ ಒಳಗಾಗಿದೆ. ಸಂವಿಧಾನದಲ್ಲಿ ಸಮಾನತೆ ಸ್ವಾತಂತ್ರ್ಯ ಸೇರಿ ದೊಡ್ಡ ತತ್ವವನ್ನ ಬಾಬಾ ಸಾಹೇಬರು ಅಳವಡಿಸಿದ್ದಾರೆ. ಸಂವಿಧಾನ ತೆಗೆದು ಹಾಕಲು ‌ನಮ್ಮ ದೇಶದ ಜನ ಅವಕಾಶ ನೀಡಬಾರದು. ಮನುಸ್ಮೃತಿಯನ್ನು ವಾಪಸ್ ತರಬಾರದು. ಮನುಸ್ಮೃತಿಯನ್ನು ಬಾಬಾ ಸಾಹೇಬರು, ಪೆರಿಯಾರ್ ಸುಟ್ಟು ಹಾಕಿದರು. ಸಂವಿಧಾನದ ಪರ ಹೋರಾಡಬೇಕು ಮನುಸ್ಮೃತಿಯನ್ನು ತಿರಸ್ಕರಿಸಬೇಕು ಅಂತ ಭಗವಾನ್ ಹೇಳಿದ್ದಾರೆ.

ಒಂದೊಂದು ಮಠ ಒಂದೊಂದು ಸಮುದಾಯಕ್ಕೆ ಸೀಮಿತವಾಗಿವೆ. ಇದರಿಂದ ಜನರ ಮನಸ್ಸು ಬಹಳ ಸಂಕುಚಿತವಾಗುತ್ತಿದೆ. ಎಲ್ಲರೂ ಸಮಾನರು ಅನ್ನೋ ಭಾವನೆಗೆ ಅಡ್ಡಿ ಬರುತ್ತಿದೆ. ಜನ ಇದನ್ನ ದಾಟಿ ಬರಬೇಕು. ದೇಶದಲ್ಲಿ ಬೌದ್ಧ ಧರ್ಮ 1,500 ವರ್ಷಕಾಲ ಹರಡಿತ್ತು. ಬುದ್ಧ ಈ ಮಣ್ಣಿನ ಮಗ ಒಬ್ಬ ರೈತನ ಮಗ, ಬೌದ್ಧ ಸ್ತೂಪಗಳು, ದೇವಾಲಯಗಳು ಎಲ್ಲವನ್ನೂ ಒಡೆದು ಹಾಕಿದ್ದಾರೆ. ಯಾರು ಮಾಡಿದ್ದು ಅದನ್ನು ಪತ್ತೆ ಹಚ್ಚಿ ಮೂಲ ವ್ಯಕ್ತಿಗಳಿಗೆ ವಾಪಸ್ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...