ಕೆಎಸ್‌ಆರ್‌ಟಿಸಿಗೆ ‘ನಿಷ್ಫಲ ಶುಲ್ಕ’ ಅಡಿ ಪರಿಹಾರ ಪಡೆವ ಅರ್ಹತೆ ಇಲ್ಲ: ಹೈಕೋರ್ಟ್

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಸಾರಿಗೆ ಸಂಸ್ಥೆಗಳ ಬಸ್‌ಗಳು ಅಪಘಾತಕ್ಕೀಡಾಗಿ, ದುರಸ್ತೆಗೆ ಕಳಿಸಿದರೆ, ಅವುಗಳ ಆದಾಯ ನಷ್ಟಕ್ಕೆ ‘ಐಡಲ್ ಶುಲ್ಕ’ (ನಿಷ್ಫಲ ಶುಲ್ಕ) ಅಡಿಯಲ್ಲಿ ಪರಿಹಾರವನ್ನು ಪಡೆಯಲು ಸಾಧ್ಯವಿಲ್ಲ. ಅಂತಹ ಪರಿಹಾರ ಪಡೆಯಲು ಸಾರಿಗೆ ಸಂಸ್ಥೆಗಳು ಅರ್ಹವಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಆದಾಯ ನಷ್ಟಕ್ಕೆ ಪರಿಹಾರ ನೀಡಲು ನ್ಯಾಯಮಂಡಳಿ ನೀಡಿದ ಆದೇಶವನ್ನು ಪ್ರಶ್ನಿಸಿ ‘ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್’ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್‌ ನ್ಯಾಯಮೂರ್ತಿ ಹಂಚಾಟೆ ಸಂಜೀವ್‌ಕುಮಾರ್ ವಿಚಾರಣೆ ನಡೆಸಿದ್ದಾರೆ. “ಬಸ್ ಅಪಘಾತಕ್ಕೀಡಾಗಿ ಹಾನಿಗೊಳಗಾದರೆ ಮತ್ತು ದುರಸ್ತಿಗಾಗಿ ಗ್ಯಾರೇಜ್‌ನಲ್ಲಿ ಇರಿಸಿದರೆ, ಸಾರಿಗೆ ಸಂಸ್ಥೆಗಳು ಕಾನೂನಿನ ಪ್ರಕಾರ ಹಾನಿಗೆ ಸಂಬಂಧಿದಂತೆ ಪರಿಹಾರ ಪಡೆಯಬಹುದು. ಆದರೆ, ಆದಾಯದ ನಷ್ಟಕ್ಕೆ ಪರಿಹಾರ ಪಡೆಯಲು ಅರ್ಹರಲ್ಲ” ಎಂದು ಹೇಳಿದ್ದಾರೆ.

ಕೆಎಸ್‌ಆರ್‌ಟಿಸಿ ಪರವಾಗಿ ವಾದ ಮಂಡಿಸಿದ ವಕೀಲರು, “ಅಪಘಾತಗಳ ಕಾರಣ, ಬಸ್‌ಗಳನ್ನು ದುರಸ್ತಿಗಾಗಿ ವರ್ಕ್‌ಶಾಪ್‌ಗಳಿಗೆ ಕರೆದೊಯ್ಯಲಾಗುತ್ತದೆ. ದುರಸ್ತಿ ಅವಧಿಯಲ್ಲಿ ಅವು ಸಂಚರಿಸಲು ಸಾಧ್ಯವಿಲ್ಲ. ಆದ್ದರಿಂದ, ಕೆಎಸ್‌ಆರ್‌ಟಿಸಿಯು ‘ಆದಾಯ ನಷ್ಟ’ ಅಡಿಯಲ್ಲಿ ಪರಿಹಾರ ಪಡೆಯಲು ಅರ್ಹವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಮಾ ಕಂಪನಿಯ ಪರ ವಾದ ಮಂಡಿಸಿದ ವಕೀಲರು, “ನಿಗದಿತ ಮಾರ್ಗಗಳಲ್ಲಿ ಇತರ ಬಸ್‌ಗಳನ್ನು ನಿಯೋಜಿಸಿರುವುದರಿಂದ ಕೆಎಸ್‌ಆರ್‌ಟಿಸಿ ಆದಾಯ ಕಳೆದುಕೊಳ್ಳುವುದಿಲ್ಲ. ಹೀಗಾಗಿ, ಕೆಎಸ್‌ಆರ್‌ಟಿಸಿ ‘ಐಡಲ್ ಚಾರ್ಜ್‌ಗಳು/ಆದಾಯ ನಷ್ಟ’ ಅಡಿಯಲ್ಲಿ ಪರಿಹಾರ ಪಡೆಯಲು ಅರ್ಹತೆ ಹೊಂದಿಲ್ಲ” ಎಂದು ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...