‘ನನ್ನ ವರಸೆ ತೋರಿಸಬೇಕಾಗುತ್ತದೆ’ ಕುಮಾರಸ್ವಾಮಿ, ರೇವಣ್ಣ ವಿರುದ್ಧ ಗುಡುಗಿದ ಶಾಸಕ ಶಿವಲಿಂಗೇಗೌಡ

Date:

  • ನನ್ನನ್ನು ಸೋಲಿಸಲು ಆಗಲಿಲ್ಲ ಎಂಬ ಹತಾಶೆಯಿಂದ ತೇಜೋವಧೆ
  • ಇದು ಹೀಗೆ ಮುಂದುವರಿದರೆ ನನ್ನ ವರಸೆ ತೋರಿಸುವೆ: ಎಚ್ಚರಿಕೆ 

ನನ್ನನ್ನು ಸೋಲಿಸಲು ಆಗಲಿಲ್ಲ ಎಂಬ ಹತಾಶೆಯಿಂದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಶಾಸಕ ಎಚ್‌ ಡಿ ರೇವಣ್ಣ ಸುಖಾಸುಮ್ಮನೆ ನನ್ನ ತೇಜೋವಧೆ ಮಾಡುತ್ತಿದ್ದಾರೆ. ಇದು ಹೀಗೆ ಮುಂದುವರೆದರೆ ನಾನು ಕೂಡ ನನ್ನ ವರಸೆ ತೋರಿಸಬೇಕಾಗುತ್ತದೆ ಎಂದು ಅರಸೀಕೆರೆ ಶಾಸಕ ಕೆ ಎಂ ಶಿವಲಿಂಗೇಗೌಡ ಎಚ್ಚರಿಕೆ ನೀಡಿದರು.

ಹಾಸನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರನ್ನು ವಿರೋಧಿಸಿ ಪಕ್ಷದಿಂದ ಹೊರಬಂದ ಒಕ್ಕಲಿಗ ನಾಯಕರನ್ನು ಚುನಾವಣೆಯಲ್ಲಿ ಸೋಲಿಸುತ್ತಾ ಬಂದಿದ್ದಾರೆ. ನನ್ನನ್ನು ಸೋಲಿಸಲು ಆಗಲಿಲ್ಲ ಎಂಬ ಹತಾಶೆ ಅವರಲ್ಲಿ ಕಾಡುತ್ತಿದೆ” ಎಂದು ಕುಟುಕಿದರು.

“ನಮ್ಮನ್ನು ಸುಮ್ಮನೇ ತೇಜೋವಧೆ ಮಾಡಬೇಡಿ. ನಮ್ಮ ಪಾಡಿಗೆ ನಮ್ಮ ಬಿಡಿ, ನಾನು ಜೆಡಿಎಸ್‌ನಲ್ಲಿ ಇರೋವರೆಗೂ ವಿಶ್ವಾಸದಿಂದ ಇದ್ದೆ. ಈಗ ನನ್ನ ಪಾಡಿಗೆ ನಾನಿದ್ದೇನೆ. ಅವರ ರಾಜಕೀಯ ಅವರು ಮಾಡಲಿ, ಮುಂದೆಯೂ ನನ್ನ ಸುದ್ದಿಗೆ ಬರಬೇಡಿ. ಇಲ್ಲ ಅಂದರೆ ನನ್ನ ವರಸೆ ತೋರಿಸುವೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ದೇವೇಗೌಡರ ಬಗ್ಗೆ ನಾನು ಲಘುವಾಗಿ ಮಾತನಾಡಲ್ಲ. ಈ ಹಿಂದೆ ಪ್ರಧಾನಿ ಹುದ್ದೆಯಿಂದ ಕೆಳಗೆ ಇಳಿಯುವಾಗ ವಾಜಪೇಯಿ, ನಾವು ಬೆಂಬಲ ಕೊಡುತ್ತೇವೆ, ನೀವು ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯಿರಿ ಎಂದರು. ಆಗ ನಿರಾಕರಿಸಿದ ದೇವೇಗೌಡರು ಈಗೇಕೆ ಬಿಜೆಪಿ ಜತೆ ಹೋದರು? ಜಾತ್ಯತೀತತೆ ಬಗ್ಗೆ ಮಾತನಾಡುತ್ತಿದ್ದವರು, ಈಗ ಎಲ್ಲಿ ಹೋಯಿತು” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿಜೋರಾಂ ಪ್ರಚಾರಕ್ಕೆ ಮೋದಿ ಚಕ್ಕರ್; ಜನಾಕ್ರೋಶದ ಭಯವೇ?

”ಕುಮಾರಸ್ವಾಮಿ ವಿಧಾನಸಭೆಯಲ್ಲಿ ನನ್ನ ಹೆಸರು ಹೇಳುವುದಿಲ್ಲ, ಒಮ್ಮೆ ಅರಸೀಕೆರೆಯವನು ಅಂತಾರೆ, ನಾನೂ ಅವರನ್ನು ಚನ್ನಪಟ್ಟಣ ಶಾಸಕ ಅನ್ನಬಹುದು, ಆದರೆ ನಾನು ಹಾಗೆ ಮಾತನಾಡುವುದಿಲ್ಲ. ನನಗೂ ನಮ್ಮಪ್ಪ ಹೆಸರು ಕಟ್ಟಿದ್ದಾನೆ, ನಾನು ಬಡ ರೈತನ ಮಗ. ನನ್ನ ಹೆಸರು ಹೇಳೋಕೆ ನಾಚಿಕೆಯಾದರೆ ಹೇಳಬೇಡಿ ಎಂದು ವಿಧಾನಸಭೆಯಲ್ಲೇ ಹೇಳಿದ್ದೆ. ಆದರೂ ಅದೇ ಪರಿಪಾಟ ಇನ್ನೂ ಮುಂದುವರಿಸಿದ್ದಾರೆ. ಮಜ್ಜಿಗೆ ಮಾರುವವನು ಎಂದು ಹೊಸದಾಗಿ ಟೀಕಿಸಲು ಪ್ರಾರಂಭಿಸಿದ್ದಾರೆ. ಮಜ್ಜಿಗೆ ಏನು ಸ್ಮಗ್ಲಿಂಗ್‌ ಗೂಡ್ಸೇ” ಎಂದು ಪ್ರಶ್ನಿಸಿದರು.

”ವಿದ್ಯಾರ್ಥಿಯಾಗಿ ಗಂಡಸಿ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದಾಗ ಹಾಲು-ಮೊಸರನ್ನು ಕ್ಯಾನ್‌ನಲ್ಲಿ ತುಂಬಿ ಕಳುಹಿಸುತ್ತಿದ್ದರು. ಅದನ್ನು ತಂದು ಗಂಡಸಿ ಹೋಟೆಲ್‌ಗೆ ಕೊಡುತ್ತಿದ್ದೆ. ಇದು ತಪ್ಪೇ? ನಾನು ಮಜ್ಜಿಗೆ, ಮೊಸರು ಮಾರುವವನು ಎಂದು ವ್ಯಂಗ್ಯವಾಡುವುದಾದರೆ ಎಚ್‌.ಡಿ.ಕುಮಾರಸ್ವಾಮಿ ಹಿಂದೆ ಬಿಬಿಎಂಪಿ ಕಸದ ಟೆಂಡರ್‌ ಪಡೆದಿದ್ದರಲ್ಲ, ಅದಕ್ಕೆ ಏನನ್ನಬೇಕು?” ಎಂದು ಲೇವಡಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...