ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

Date:

  • ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ
  • ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ: ಕಿಡಿ

ಸುಪ್ರೀಂ ಕೋರ್ಟ್ ಸೂಚನೆ ಕೊಟ್ಟ ನಂತರವೇ ತಮಿಳುನಾಡಿಗೆ ನೀರು ಬಿಡಿ ಎಂದು ಈ ಹಿಂದೆ ಹೇಳಿದ್ದೆ. ಆದರೆ, ರಾಜ್ಯ ಸರ್ಕಾರ ಆರಂಭದಲ್ಲೇ ಎಡವಿ, ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟು ಈಗ ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದರು.

ಶ್ರೀರಂಗಪಟ್ಟಣದ ಕೆಆರ್​ಎಸ್​ನಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಸಿಡಬ್ಲ್ಯೂಎಂಎ ಸಭೆ ನಡೆಸಿ ನೀರು ಬಿಡಲು ಆದೇಶಿಸಿತ್ತು. ಆಗ ತಮಿಳುನಾಡು ಪ್ರತಿಭಟನೆ ಮಾಡಿ ಸಭೆಯಿಂದ ಹೊರ ಹೋದರು. ನಮ್ಮ ಸರ್ಕಾರ ರೈತರ ವಿಚಾರವನ್ನು ಲಘುವಾಗಿ ಪರಿಗಣಿಸಿದ್ದಾರೆ. ತಮಿಳುನಾಡು ಅರ್ಜಿ ಹಾಕಿದಾಗಲೇ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದೆ” ಎಂದರು.

“ಆದೇಶ ಪಾಲಿಸಲು ಆಗದೆ ಇದ್ದಾಗ ಅದು ನ್ಯಾಯಾಂಗ ನಿಂದನೆ ಆಗಲ್ಲ. ಹೀಗಂತ ಸೆ.16ರಂದು ಸುಪ್ರೀಂಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ. ನಮ್ಮ ಸರ್ಕಾರ ಸಿಡಬ್ಲ್ಯೂಆರ್‌ಸಿ, ಸಿಡಬ್ಲ್ಯೂಎಂಎಗೆ ಸೂಕ್ತ ಮಾಹಿತಿ ನೀಡಿಲ್ಲ. ಎಸಿ ವರ್ಚುವಲ್​​ನಲ್ಲಿ ಕುಳಿತು ಸಭೆಯಲ್ಲಿ ಭಾಗಿಯಾಗುತ್ತಾರೆ. ತಮಿಳುನಾಡು ಅಧಿಕಾರಿಗಳು ನೇರವಾಗಿ ಸಭೆಯಲ್ಲಿ ಭಾಗಿಯಾಗಿದ್ದಾರೆ. ಸರ್ಕಾರ ಸೂಕ್ತ ದಾಖಲೆ, ಮಾಹಿತಿ ನೀಡುವಲ್ಲಿ ವಿಫಲವಾಗಿದೆ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲಡೆ ಪ್ರತಿಭಟನೆ ನಡೆಯುತ್ತಿದೆ. ಇದನ್ನೂ ಮೀರಿ ತಮಿಳುನಾಡಿಗೆ ನೀರು ಬಿಟ್ಟರೆ ನೋಡಿ ನಮ್ಮ ನಡೆ ಬೇರೆಯೇ ಇರುತ್ತದೆ. ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ. ಕಾವೇರಿ ಪರಿಸ್ಥಿತಿ ಬಗ್ಗೆ ಅಮಿತ್ ಶಾ ಬಳಿ ಚರ್ಚೆ ಮಾಡಿದ್ದೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...