ಕುಂಭಮೇಳ | ಕರ್ನಾಟಕದಿಂದ ತೆರಳಿದ್ದವರಲ್ಲಿ 20 ಮಂದಿ ಸಾವು; ಭೀಕರ ಅಪಘಾತದಲ್ಲಿ ಐವರ ದುರ್ಮರಣ

Date:

ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ. ಮೃತರು ಬೀದರ್‌ ಜಿಲ್ಲೆಯವರು ಎಂದು ತಿಳಿದುಬಂದಿದೆ. ಕುಂಭಮೇಳದಲ್ಲಿ ಭಾಗಿಯಾಗಲು ಕರ್ನಾಟಕದಿಂದ ತೆರಳಿದ್ದವರಲ್ಲಿ ಕನಿಷ್ಠ 20 ಮಂದಿ ವಿವಿಧ ಅವಘಡಗಳಲ್ಲಿ ಸಾವನ್ನಪ್ಪಿದ್ದಾರೆ.

ಬೀದರ್‌ನ ಲಾಡಗೇರಿ ಬಡಾವಣೆಯ 14 ಮಂದಿ ಕ್ರೂಸರ್ ವಾಹನದಲ್ಲಿ ಕುಂಭಮೇಳಕ್ಕೆ ತೆರಳಿದ್ದರು. ಈ ವೇಳೆ, ವಾರಣಾಸಿಯ ಮೀರ್ಜಾಮುರತ್ ನಗರದ ಬಳಿ ತೆರಳುತ್ತಿದ್ದಾಗ, ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತ ಸಂಭವಿಸಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 9 ಮಂದಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಮೃತರನ್ನು ಬೀದರ್‌ನ ಲಕ್ಷ್ಮೀ (56), ನೀಲಮ್ಮ (55), ಸಂತೋಷ್‌ಕುಮಾರ್ (42), ಸುನೀತಾ (42) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮೃತರ ಹೆಸರು ಗೊತ್ತಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಂಭಮೇಳಕ್ಕೆ ತೆರಳಿದ್ದ ಲಾಡಗೇರಿ ಬಡಾವಣೆಯ ನಿವಾಸಿಗಳು ಪ್ರಯಾಗ್‌ರಾಜ್ ಮತ್ತು ಕಾಶಿಗೆ ಭೇಟಿ ನೀಡಿದ್ದರು. ಬಳಿಕ, ಅಯೋಧ್ಯೆಗೆ ತೆರಳುತ್ತಿದ್ದರು. ಈ ವೇಳೆ, ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಕುಂಭಮೇಳಕ್ಕಾಗಿ ಕರ್ನಾಟಕದಿಂದ ಉತ್ತರ ಪ್ರದೇಶಕ್ಕೆ ತೆರಳಿದ್ದವರಲ್ಲಿ ಈವರೆಗೆ ಸುಮಾರು 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿ ನಾಲ್ವರು ಸಾವನ್ನಪ್ಪಿದ್ದರು. ಪ್ರಯಾಗ್‌ರಾಜ್‌ ನಗರಕ್ಕೆ ತೆರಳಿದ್ದ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರದ ಪ್ರವೀಣ್ ಹೊಸಮನಿ ಎಂಬವರು ಗೋರಖಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿದ್ದರು.

ಇನ್ನು, ಮೈಸೂರು ಜಿಲ್ಲೆಯ ಮಂಟಿಕ್ಯಾತನಹಳ್ಳಿ ಗ್ರಾಮದ ರಾಮಕೃಷ್ಣ ಶರ್ಮಾ ಮತ್ತು ಶ್ರೀರಂಗಪಟ್ಟನ ತಾಲೂಕಿನ ಕೆಆರ್‌ಎಸ್‌ ನಿವಾಸಿ ಅರುಣ್‌ ಶಾಸ್ತ್ರಿ ಎಂಬವರು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು. ಅಲ್ಲದೆ, ಮಧ್ಯಪ್ರದೇಶದ ಇಂಧೋರ್ ಬಳಿ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನ್ನಪ್ಪಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...