ನವೆಂಬರ್ 9ರಂದು ‘ಕೆಯುಡಬ್ಲ್ಯೂಜೆ’ ಚುನಾವಣೆ

Date:

ಕರ್ನಾಟಕದ ಕಾರ್ಯನಿರತ ಪತ್ರಕರ್ತರ ಸಂಘಟನೆ ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ದ (Kuwj) ಪದಾಧಿಕಾರಿಗಳ ಅಧಿಕಾರವಧಿ ಮುಗಿದಿದೆ. 2025-28ರ ಅವಧಿಗೆ ನೂತನ ಅಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳ ಆಯ್ಕೆಗಾಗಿ ನವೆಂಬರ್ 9ರಂದು ಚುಣಾವಣೆ ನಡೆಯಲಿದೆ ಎಂದು ಸಂಘವು ತಿಳಿಸಿದೆ.

ಸಂಘದ ಚುನಾವಣೆಯ ಕುರಿತು ಕೆಯುಡಬ್ಲ್ಯೂಜೆ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ಟೆಲೆಕ್ಸ್ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. “ಸಂಘವು 9,000ಕ್ಕೂ ಹೆಚ್ಚು ಸಕ್ರಿಯ ಕಾರ್ಯನಿರತ ಪತ್ರಕರ್ತ ಸದಸ್ಯರನ್ನು ಒಳಗೊಂಡಿದೆ. ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲ ಜಿಲ್ಲಾ ಘಟಕಗಳಲ್ಲಿನ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ” ಎಂದು ತಿಳಿಸಿದ್ದಾರೆ.

“ಅಕ್ಟೋಬರ್ 13ರಂದು ಸೋಮವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಅಂದೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಮತದಾರರ ಕರಡು ಪ್ರತಿ ಪ್ರಕಟವಾಗಲಿದೆ. ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರಲಿದೆ. ಅ.28 ನಾಮಪತ್ರಗಳ ಪರಿಶೀಲನೆ, ಅ.30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬೂಟು- ಅಸ್ತವ್ಯಸ್ತಗೊಂಡ ಭಾರತದ ಸಂಕೇತ

“ನವಂಬರ್ 9 ಭಾನುವಾರ, ಬೆಂಗಳೂರಿನ ಕಂದಾಯ ಭವನದಲ್ಲಿರುವ ಕೆಯುಡಬ್ಲ್ಯೂಜೆ ಕಚೇರಿ ಮತ್ತು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 9ರಿಂದ ಮದ್ಯಾಹ್ನ 3ಗಂಟೆ ವರೆಗೆ ಮತದಾನ ನಡೆಯಲಿದೆ. ಅದೇ ದಿನ ಮತ ಎಣಿಕೆಯೂ ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...