ಗೃಹಲಕ್ಷ್ಮಿ ಯೋಜನೆಯ 24ನೇ ಕಂತು ಸೋಮವಾರದಿಂದ ಶನಿವಾರದ ಒಳಗಡೆ ಬಿಡುಗಡೆ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿದೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, “ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ. ಮುಂದಿನ ವಾರ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ಆಗುತ್ತದೆ” ಎಂದಿದ್ದಾರೆ.
“ಸತ್ತವರ ಅಕೌಂಟ್ಗೆ ಹಣ ಸಂದಾಯವಾದರೆ ತಕ್ಷಣ ಗೊತ್ತಾಗಲ್ಲ. ಈಗ ಸಾಫ್ಟ್ವೇರ್ ಅಭಿವೃದ್ಧಿ ಅಳವಡಿಕೆ ಮಾಡಿದ್ದೇವೆ. ಮರಣ ಪ್ರಮಾಣ ಪತ್ರಗಳನ್ನು ಅಂಗನವಾಡಿ ಕಾರ್ಯಕರ್ತರು ಪರಿಶೀಲನೆ ಮಾಡುತ್ತಾರೆ. ಮೃತರ ಖಾತೆಗಳಿಗೆ ತಪ್ಪಾಗಿ ಸಂದಾಯವಾಗಿರುವ ಹಣವನ್ನು ವಾಪಸ್ ಪಡೆಯುವ ಹೊಣೆಗಾರಿಕೆಯನ್ನು ಕೆಲ ಬ್ಯಾಂಕ್ಗೆ ಸೂಚನೆ ಕೊಟ್ಟಿದ್ದೇವೆ” ಎಂದು ಹೇಳಿದ್ದಾರೆ.




