ಭೂ ಅಕ್ರಮ | ಕುಮಾರಸ್ವಾಮಿ ಜೈಲು ಸೇರಬೇಕು, ನ್ಯಾಯಾಂಗ ಮೇಲೆ ನಂಬಿಕೆ ಇದೆ: ಎಸ್‌ ಆರ್‌ ಹಿರೇಮಠ

Date:

ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರದ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಚಾರಣೆಗಾಗಿ ರಾಜ್ಯ ಸರ್ಕಾರ ರಚನೆ ಮಾಡಿದ್ದ ವಿಶೇಷ ತನಿಖಾ ದಳ(ಎಸ್​ಐಟಿ)ಕ್ಕೆ ಏಕ ಸದಸ್ಯಪೀಠ ನೀಡಿದ್ದ ಮಧ್ಯಂತರ ಆದೇಶವನ್ನು ದ್ವಿಸದಸ್ಯ ಪೀಠ ಸೋಮವಾರ ತೆರವುಗೊಳಿಸಿದೆ.

ಈ ಆದೇಶದಿಂದ ಸರ್ಕಾರಿ ಜಮೀನು ಒತ್ತುವರಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುವ ಪ್ರಕ್ರಿಯೆ ಸುಗಮವಾಗಿದ್ದು, ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯಬೇಕಿದೆ.

ಪ್ರಕರಣ ಸಂಬಂಧ ಲೋಕಾಯುಕ್ತ ನೀಡಿದ್ದ ವರದಿ ಜಾರಿಗೊಳಿಸಲು ಹೈಕೋರ್ಟ್‌ ಆದೇಶ ನೀಡಿದ್ದರೂ ಪಾಲಿಸಿಲ್ಲ ಎಂದು ಆಧಿಕ್ಷೇಧಿಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ ಅವರಿಂದ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಭಾಗೀಯಪೀಠದಿಂದ ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ನಂತರ ಜಮೀನಿನ ಸರ್ವೆ ಕಾರ್ಯ ನಡೆಸಿದ ಸ್ಥಳೀಯ ತಹಸೀಲ್ದಾರ್‌, ಹೆಚ್ ​ ಡಿ ಕುಮಾರಸ್ವಾಮಿ ಮತ್ತಿತರರಿಗೆ ನೋಟಿಸ್‌ ಜಾರಿ ಮಾಡಲಾಗಿತ್ತು. ಆ ನಂತರ ಆ ಬಗ್ಗೆ ತನಿಖೆ ನಡೆಸಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲು ಸರ್ಕಾರ ಹಿರಿಯ ಐಎಎಸ್‌ ಅಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚನೆ ಮಾಡಲಾಗಿತ್ತು.

ಇದನ್ನು ಪ್ರಶ್ನಿಸಿ ಹೆಚ್​ಡಿಕೆ ಮತ್ತಿತರರಿಂದ ಏಕಸದಸ್ಯಪೀಠದ ಮುಂದೆ ಅರ್ಜಿಸಲ್ಲಿಕೆಯಾಗಿತ್ತು. ಎಸ್‌ಐಟಿ ರಚನೆ ಆದೇಶಕ್ಕೆ ನ್ಯಾಯಾಲಯ ತಡೆ ನೀಡಿತ್ತು. ಹಿರಿಯ ಐಎಎಸ್‌ ಅಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದ ಸರ್ಕಾರದ ಆದೇಶಕ್ಕೆ ತಡೆ ನೀಡಿರುವ ಏಕ ಸದಸ್ಯಪೀಠದ ಮಧ್ಯಂತರ ಆದೇಶದ ವಿರುದ್ದ ರಾಜ್ಯ ಸರ್ಕಾರ ಮೇಲ್ಮವಿ ಅರ್ಜಿ ಸಲ್ಲಿಸಿತ್ತು.

ಈ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯಪೀಠ, ತಡೆಯಾಜ್ಞೆ ತೆರವುಗೊಳಿಸಿದೆ. ಅಲ್ಲದೆ, ಹೆಚ್​ಡಿಕೆ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.

ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ ಅವರು ಈ ವಿಚಾರವಾಗಿ ಈ ದಿನ.ಕಾಮ್‌ ಜೊತೆ ಮಾತನಾಡಿ, ” ದ್ವಿಸದಸ್ಯ ಪೀಠದ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ನ್ಯಾಯಾಂಗದ ಮೇಲೆ ಯಾವತ್ತಿಗೂ ನನಗೆ ನಂಬಿಕೆ ಇದೆ. ಕುಮಾರಸ್ವಾಮಿ ಮನೆತನದ ಪ್ರಜ್ವಲ್‌ ರೇವಣ್ಣ ಪ್ರಕರಣ ಹೇಗೆ ತಾರ್ಕಿಕ ಅಂತ್ಯ ಕಂಡು ಅವನು ಜೈಲು ಸೇರಿದ್ದಾನೋ ಹಾಗೆಯೇ ಕುಮಾರಸ್ವಾಮಿ ಮತ್ತು ಮತ್ತು ಸಂಬಂಧಿಕರು ಜೈಲು ಸೇರಬೇಕು” ಎಂದು ಹೇಳಿದರು.

ಏನಿದು ಪ್ರಕರಣ

ಕೇಂದ್ರ ಸಚಿವ ಎಚ್‌‌ ಡಿ ಕುಮಾರಸ್ವಾಮಿ ಅವರ ವಿರುದ್ಧ ಇರುವ ಹಲವಾರು ಅಕ್ರಮ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಭೂ ಒತ್ತುವರಿ ಪ್ರಕರಣವೂ ಒಂದು. ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಮತ್ತು ಸಂಬಂಧಿಗಳ ಒಟ್ಟು 110.3 ಎಕರೆ ಭೂಮಿ ಹೊಂದಿದ್ದು, ಆ ಪೈಕಿ ಬರೋಬ್ಬರಿ 70 ಎಕರೆ ಭೂಮಿ ಸರ್ಕಾರದ್ದಾಗಿದ್ದು, ಆ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಬಿಡದಿಯ ಕೇತಗಾನಹಳ್ಳಿಯಲ್ಲಿ ಸರ್ವೇ ನಂಬರ್ 7, 8, 9, 10, 16, 17 ಮತ್ತು 79ರಲ್ಲಿ ಸುಮಾರು 70 ಎಕರೆ ಸರ್ಕಾರಿ ಭೂಮಿಯನ್ನು ಕುಮಾರಸ್ವಾಮಿ ಮತ್ತು ಸಂಬಂಧಿಗಳು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸರ್ಕಾರಿ ಗೋಮಾಳವನ್ನು 1983-84ರಲ್ಲೇ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಸುಮಾರು ವರ್ಷಗಳ ಹಿಂದೆಯೇ ಮಂಡ್ಯದ ಮಾಜಿ ಸಂಸದ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲು 2014ರ ಆಗಸ್ಟ್‌ 4ರಂದೇ ಲೋಕಾಯುಕ್ತರು ಆದೇಶಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...