ಗ್ರಾಮ ಆಡಳಿತ ಅಧಿಕಾರಿಗಳಿಗೆ ಶೀಘ್ರವೇ ಲ್ಯಾಪ್ ಟಾಪ್ ವಿತರಣೆ: ಸಚಿವ ಕೃಷ್ಣ ಬೈರೇಗೌಡ

Date:

ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಸರ್ಕಾರ ಮುಂದಾಗಿದ್ದು ಈಗಾಗಲೇ 4 ಸಾವಿರ ಲ್ಯಾಪ್ಟಾಪ್ ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಪರಿಷತ್‌ನಲ್ಲಿ ತಿಳಿಸಿದರು.

ಪ್ರಶೋತ್ತರ ವೇಳೆ ಬಿಜೆಪಿಯ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, “2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಲ್ಯಾಪ್ಟಾಪ್ ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ” ಎಂದರು.

“ಗ್ರಾಮ ಆಡಳಿತ ಅಧಿಕಾರಿಗಳಿಗೆ ಒದಗಿಸುವ ಛಾವಡಿಗಳು ಕಂದಾಯ ಇಲಾಖೆಯ ಸುಪರ್ಧಿಗೆ ಸೇರಿರುತ್ತವೆ; ಈ ಛಾವಡಿಗಳು ಶಿಥಿಲಗೊಂಡಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳ ಪುನರ್ ನಿರ್ಮಾಣ ಮಾಡಲು ಪರಿಶೀಲಿಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಜಯಪುರ ಜಿಲ್ಲೆಯಲ್ಲಿ 82 ಗ್ರಾಮ ಛಾವಡಿಗಳು ಇರುತ್ತವೆ ಹಾಗೂ 126 ಗ್ರಾಮಗಳಲ್ಲಿ ಗ್ರಾಮ ಛಾವಡಿಗಳು ಇರುವುದಿಲ್ಲ; ಗ್ರಾಮ ಛಾವಡಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಶೀಲಿಸಲಾಗುವುದು” ಎಂದರು.

“ಗ್ರಾಮ ಪಂಚಾಯ್ತಿಯ ಆಡಳಿತ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ದಾಖಲೆಗಳನ್ನು ಸಂರಕ್ಷಿಸಿಕೊಳ್ಳಲು ಅವರಿಗೆ ಕಪಾಟುಗಳನ್ನು ಒದಗಿಸಲಾಗಿದೆ ಹಾಗೂ ಲೇಖನ ಸಾಮಗ್ರಿಗಳನ್ನು ನೀಡಲಾಗುತ್ತಿದೆ. ಜೊತೆಗೆ ಪ್ರಯಾಣ ಭತ್ಯೆಗಳನ್ನು ಒದಗಿಸಲಾಗುತ್ತಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...