ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್, ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಧಾರವಾಡ ಪೀಠ ನೋಟಿಸ್

Date:

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠದಿಂದ ಸರ್ಕಾರ ಮತ್ತು ಗೃಹ ಇಲಾಖೆಗೆ ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ಕೇಳಿದೆ.

ಲಾಠಿಚಾರ್ಜ್​ ವಿರುದ್ಧ ಜಯಮೃತ್ಯುಂಜಯ ಶ್ರೀ, ಪಂಚಮಸಾಲಿ ವಕೀಲರ ಪರಿಷತ್ ಸೇರಿದಂತೆ ಧಾರವಾಡ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪೀಠ ಇದೀಗ ನೋಟಿಸ್ ಜಾರಿ ಮಾಡಿದೆ.

ರಿಟ್ ಅರ್ಜಿ ಸಲ್ಲಿಕೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, “ಲಾಠಿಚಾರ್ಜ್​ ಬಳಿಕ 12 ಜನರ ಮೇಲೆ ಎಫ್​​ಐಆರ್​ ದಾಖಲಿಸಿದ್ದಾರೆ. ಎಫ್​ಐಆರ್​ ರದ್ದುಪಡಿಸಬೇಕೆಂದು ನಾವು ಸರ್ಕಾರಕ್ಕೆ ಕೇಳಿದ್ದೆವು. ಲಾಠಿಚಾರ್ಜ್​​ ಸಂಬಂಧ ಸಿಎಂ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದೆವು. ಆದರೆ ಯಾವುದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿಲ್ಲ. ಹೀಗಾಗಿ ಕೋರ್ಟ್ ಮೊರೆ ಹೋಗಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಪರವಾಗಿ ಪ್ರಭುಲಿಂಗ ನಾವದಗಿ, ಪೂಜಾ ವಾದ ಮಂಡಿಸಿದ್ದಾರೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶ ಆಗಿದೆ. ಹಲ್ಲೆ ಆಗಿದ್ದಕ್ಕೆ ಪಂಚಮಸಾಲಿ ಸಮಾಜದವರು ಧೃತಿಗೆಡುವುದು ಬೇಡ. ಡಿ.23ರಂದು ಹಲ್ಲೆಗೊಳಗಾದವರ ಮನೆಗಳಿಗೆ ಭೇಟಿ ನೀಡುತ್ತೇವೆ” ಎಂದು ಹೇಳಿದರು.

“ಹೋರಾಟದ ವೇಳೆ 144 ಸೆಕ್ಷನ್ ಜಾರಿ ಆಗಿರಲಿಲ್ಲ. ನೇರವಾಗಿ ಲಾಠಿಚಾರ್ಜ್ ಮಾಡಿದ್ದಾರೆ. ಇದನ್ನೆಲ್ಲ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇವೆ. ಲಾಠಿಚಾರ್ಜ್​​ ಬಳಿಕ ಪುನಃ ಸತ್ಯಾಗ್ರಹವಿತ್ತು. ಸ್ವಾಮೀಜಿ ಡಿ. 19ರವರೆಗೆ ಹೋರಾಟದಲ್ಲಿದ್ದರು. ಹೀಗಾಗಿ ಶುಕ್ರವಾರ ರಿಟ್ ಅರ್ಜಿ ಸಲ್ಲಿಸಿದ್ದೇವೆ” ನ್ಯಾಯವಾದಿ ಪೂಜಾ ಸವದತ್ತಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...