ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ | ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಬದ್ಧ: ಸಿದ್ದರಾಮಯ್ಯ

Date:

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್‌ನ ಕೆಲ ಶಾಸಕರು ಪಕ್ಷದ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳಿರುವ ಬಗ್ಗೆ ಮೈಸೂರಿನಲ್ಲಿ ಪತ್ರಕರ್ತರು ಪ್ರಶ್ನಿಸಿದಾಗ, “ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದಂತೆ ನಾನೆಂದೂ ಮಾತಿಗೆ ತಪ್ಪುವುದಿಲ್ಲ. ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಯ ಭರವಸೆಯನ್ನು ಈಡೇರಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾನೇ ಮುಂದುವರೆದು, ಮುಂದಿನ ಬಜೆಟ್‌ಗಳನ್ನು ನಾನೇ ಮಂಡಿಸುವೆ” ಎಂದರು.

“ಇಂದು ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೆಕ್ಕೆ ಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ. ಒಂದು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2400 ರೂ.ಗಳ ಎಂಎಸ್ ಪಿ ದರ ನಿಗದಿಯಾಗಿದ್ದು, ಇದುವರೆಗೆ ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ. ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ಆದ್ದರಿಂದ ಮೆಕ್ಕೆ ಜೋಳದ ಖರೀದಿ ಬಗ್ಗೆ ಸಂಬಂಧಪಟ್ಟ ಸಚಿವರು , ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಮಾರುಕಟ್ಟೆಯಲ್ಲಿ ಮೆಕ್ಕೆ ಜೋಳದ ಬೆಲೆ ಕುಸಿತ ಕಂಡಿದ್ದು, ಉತ್ಪಾದನೆ ಹೆಚ್ಚಾಗಿದೆ. ಸುಮಾರು 55 ಲಕ್ಷ ಮೆಟ್ರಿಕ್ ಟನ್ ನಷ್ಟು ಮೆಕ್ಕೆಜೋಳವನ್ನು ರೈತರು ಬೆಳೆಯಬಹುದೆಂಬ ಅಂದಾಜಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮೆಕ್ಕೆ ಜೋಳ ಉತ್ಪತ್ತಿಯಲ್ಲಿ ಏರಿಕೆ ಕಂಡಿದ್ದರೂ ಸಹ , ಕೇಂದ್ರ ಸರ್ಕಾರ ಸುಮಾರು 70 ಲಕ್ಷ ಮೆ.ಟನ್ ನಷ್ಟು ಮೆಕ್ಕೆಜೋಳವನ್ನು ಆಮದು ಮಾಡಿಕೊಳ್ಳುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ನೋಡಲೆ ಏಜೆನ್ಸಿಗಳಾದ ನಫೆಡ್, ಎನ್ ಸಿ ಸಿಎಫ್ ಸಂಸ್ಥೆಗಳು ಮೆಕ್ಕೆ ಜೋಳ ಖರೀದಿ ಪ್ರಕ್ರಿಯೆ ನಡೆಸದೇ ಇರುವುದರಿಂದ, ರೈತರು ಕೆಲವಡೆ ಧರಣಿ ನಡೆಸುತ್ತಿದ್ದಾರೆ” ಎಂದರು.

ಮೆಕ್ಕೆಜೋಳ ಖರೀದಿಗೆ ಡಿಸ್ಟಲರಿಗಳೊಂದಿಗೆ ಚರ್ಚೆ

“ಡಿಸ್ಟಿಲರಿಗಳು ಮೆಕ್ಕೆ ಜೋಳ ಬೆಲೆ ಕಡಿಮೆ ಇದ್ದಾಗಲೇ ಹಿಂದೆಯೇ ಖರೀದಿಸಿ ಶೇಖರಣೆ ಮಾಡಿಕೊಂಡಿವೆ. ಮೆಕ್ಕೆಜೋಳವನ್ನು ನಿಯಮಾಸುಸಾರ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸಲು ಡಿಸ್ಟಲರಿ ಮಾಲೀಕರೊಂದಿಗೆ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

ಸರ್ಕಾರದಿಂದ 10 ಲಕ್ಷ ಮೆ.ಟನ್ ಖರೀದಿ

“ಮೆಕ್ಕೆಜೋಳದ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಲ್ಲ ರೀತಿಯ ಸಹಾಯವನ್ನು ಸರ್ಕಾರ ಮಾಡಲಿದೆ. ರಾಜ್ಯ ಸರ್ಕಾರ, ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ದೇಶದಲ್ಲಿಯೇ ಹೇರಳವಾಗಿ ಮೆಕ್ಕೆಜೋಳವನ್ನು ಬೆಳೆದಿದ್ದು, ಅದನ್ನು ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರವನ್ನು ಪತ್ರಮುಖೇನ ಕೋರಲಾಗುವುದು” ಎಂದು ಹೇಳಿದರು.

ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ

“ಮೆಕ್ಕೆಜೋಳದ ಜೊತೆಗೆ ಹೆಸರು ಕಾಳು ಬೆಳೆ ಸಮಸ್ಯೆ ಬಗ್ಗೆ ಚರ್ಚಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಎಫ್ ಎ ಕ್ಯು ಬದಲಾವಣೆಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸುವ ಜೊತೆಗೆ ಸಂಬಂಧಪಟ್ಟವರ ತಂಡ ಈ ಬಗ್ಗೆ ದೆಹಲಿಗೂ ಭೇಟಿ ನೀಡಬೇಕೆಂದು ಸೂಚನೆ ನೀಡಲಾಗಿದೆ. ಇತ್ತೀಚೆಗೆ ಪ್ರಧಾನಿಯವರನ್ನು ಭೇಟಿಯಾಗಿ ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ಕೋರಲಾಗಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 15.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ರಾಜ್ಯದ ಮನವಿಗೆ ಕೇಂದ್ರ ಪೂರಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸವಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...