ನಾಯಕತ್ವ ಬದಲಾವಣೆ | ಹೈಕಮಾಂ‌ಡ್ ಚರ್ಚಿಸಿ ನಿರ್ಣಯ, ಸಭೆಯಲ್ಲಿ ಸಿಎಂ-ಡಿಸಿಎಂ ಇರುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Date:

ನಾನು ಎಲ್ಲರನ್ನೂ ಕರೆಸಿ ಚರ್ಚೆ ಮಾಡ್ತೇನೆ. ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಇರ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಇಬ್ಬರೂ ಇರುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ದೆಹಲಿಯ ಇಂದಿರಾ ಕಾಂಗ್ರೆಸ್‌ ಭವನದಲ್ಲಿ ಹೈಕಮಾಂಡ್‌ ಸಭೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ದೆಹಲಿಗೆ ತೆರಳುವ ವೇಳೆ ಸುದ್ದಿಗಾರರ ಜೊತೆ ಮಾತನಾಡಿದರು.

“ಹೈಕಮಾಂಡ್ ಅಂದರೆ ಏಕಾಂಗಿ ಅಲ್ಲ. ಅದು ಒಂದು ಟೀಮ್. ಈ ಬಗ್ಗೆ ಹೈಕಮಾಂಡ್ ಟೀಮ್ ಕೂತು ಚರ್ಚಿಸಿ ನಿರ್ಣಯ ಕೈಗೊಳ್ಳುತ್ತದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಸಭೆಯಲ್ಲಿ ಹಾಜರಿರಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿದೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ನಡೆಯುವ ಸಭೆಯತ್ತ ರಾಜಕೀಯ ಆಸಕ್ತರ ದೃಷ್ಟಿ ನೆಟ್ಟಿದೆ.

ಈ ನಡುವೆ ರಾಜ್ಯದಲ್ಲಿ ಹೆಚ್ಚುತ್ತಿರುವ ನಾಯಕತ್ವ ಗದ್ದಲದ ಮಧ್ಯೆ, ಸಿದ್ದರಾಮಯ್ಯ ಅವರು ಗುರುವಾರ ತಮ್ಮ ನಿವಾಸದಲ್ಲಿ ಜಿ. ಪರಮೇಶ್ವರ, ಸತೀಶ್ ಜಾರಕಿಹೊಳಿ, ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಮತ್ತು ಕೆ.ಎನ್. ರಾಜಣ್ಣ ಸೇರಿದಂತೆ ಹಿರಿಯ ಸಚಿವರು ಮತ್ತು ಆಪ್ತ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಈ ಸಭೆ ಬಗ್ಗೆಯೂ ತೀವ್ರ ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...