ಜೆಡಿಎಸ್‌ ಇನ್ನು ‘ಕೆಡಿ’ ಎಂದು ಹೆಸರು ಬದಲಿಸಿಕೊಳ್ಳಲಿ: ಕಾಂಗ್ರೆಸ್‌ ಲೇವಡಿ

Date:

  • ಎನ್‌ಡಿಎ ಭಾಗವಾಗಿ ಅಧಿಕೃತವಾಗಿ ಗುರುತಿಸಿಕೊಂಡ ಜೆಡಿಎಸ್‌
  • ‘ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆ ವಿಸರ್ಜಿಸಿದ್ದಾರೆ’

ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ಕೊನೆಗೂ ಒಮ್ಮತಕ್ಕೆ ಬಂದಿದ್ದು, ಎನ್‌ಡಿಎ ಭಾಗವಾಗಿ ಜೆಡಿಎಸ್‌ ಗುರುತಿಸಿಕೊಂಡಿದೆ. ಈ ವಿಚಾರವಾಗಿ ಕಾಂಗ್ರೆಸ್‌ ಟ್ವೀಟ್‌ ಮಾಡಿ ಜೆಡಿಎಸ್‌ಅನ್ನು ಕಾಲೆಳೆದಿದೆ.

“ಜೆಡಿಎಸ್ ಇಂದು ಅಧಿಕೃತವಾಗಿ ಎನ್‌ಡಿಎ ಮೈತ್ರಿಕೂಟದೊಳಗೆ ವಿಲೀನವಾಗಿದೆ. ಇನ್ಮುಂದೆ ಜೆಡಿಎಸ್ ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು”‌ ಎಂದಿದೆ.

“ಕೇವಲ ‘ಜೆಡಿ’ ಎಂದು ಇಟ್ಟುಕೊಳ್ಳಬಹುದು ಇಲ್ಲವೇ ‘ಕೆಡಿ’ ಎಂದು ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ! ಕೆಡಿ ಅಂದರೆ ‘ಕಮಲ ದಳ’. ಪಕ್ಷ ವಿಸರ್ಜಿಸುತ್ತೇನೆ ಎಂದವರು ಕೊನೆಗೆ ಜಾತ್ಯತೀತತೆಯನ್ನು ವಿಸರ್ಜಿಸಿದ್ದಾರೆ” ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...