ಎಸ್‌ಐಟಿಯಿಂದ ಸತ್ಯ ಹೊರ ಬರಲಿ, ನಮ್ಮ ಮೇಲೆ ದಬ್ಬಾಳಿಕೆ ನಡೆದಿರುವುದು ನಿಜ: ವೀರೇಂದ್ರ ಹೆಗ್ಗಡೆ

Date:

ಧರ್ಮಸ್ಥಳ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಇದರಿಂದಾಗಿ ಸತ್ಯ ಹೊರ ಬರಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿ, “ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ಸತ್ಯ ಹೊರಬರಲಿ ಎಂದು ನಾನೂ ಸಹ ಹೇಳುವೆ. ಆದರೆ, ಏನೂ ತಪ್ಪು ಮಾಡಿದಿದ್ದರೂ ನಮ್ಮ ಮೇಲೆ ಇಷ್ಟೊಂದು ದ್ವೇಷ ಮತ್ತು ಆರೋಪಗಳು ಏಕೆ ಎಂಬುದು ನನಗೆ ಅರ್ಥವಾಗುತ್ತಿಲ್ಲ” ಎಂದಿದ್ದಾರೆ.

“ಇಷ್ಟು ವರ್ಷ ನಾವು ಆರೋಗ್ಯವಾಗಿರಲು ನಮ್ಮ ನಿಸ್ವಾರ್ಥ ಸೇವೆಯೇ ಕಾರಣ. ನಮ್ಮ ಎಲ್ಲ ಕಾರ್ಯಕ್ರಮಗಳನ್ನು ನೀವು ಎಲ್ಲರೂ ಗಮನಿಸಿದ್ದೀರಿ. ನಾವು ಇಲ್ಲಿ‌ ನಿಮಿತ್ತ ಮಾತ್ರ. ಆದರೆ, ಮುಂದುವರೆಸಿಕೊಂಡು ಹೋಗಿದ್ದು ಅದಕ್ಕೆ ಸಂಬಂಧಪಟ್ಟ ಇಲಾಖೆಯವರು. ಕೆಲವರು ಪ್ರೀತಿಯಲ್ಲಿ ಟೀಕೆ ಮಾಡಿದ್ದರು. ಇವರ ಹಾಗೆ ಟೀಕೆ ಮಾಡಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆಯನ್ನು ಸರ್ಕಾರವೇ ಹಳ್ಳ ಹಿಡಿಸದಿರಲಿ

“ಧರ್ಮಸ್ಥಳ ಬೇರೆ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ಎಂದು ನೀವು ನೋಡಿದ್ದೀರಿ. ಯಾಕೆ ಇಷ್ಟು ದ್ವೇಷ ನನ್ನ ಮೇಲೆ ಇದೆ ಎಂದು ನನಗೆ ಗೊತ್ತಾಗಿಲ್ಲ. ಈಗ ಮನಸ್ಸು ಸ್ವಲ್ಪ ಹಗುರವಾಗಿದೆ, ಎತ್ತರದ ಬೆಟ್ಟದಿಂದ ನೀರು ಹರಿದಿದೆ. ನಾನು ಹಲವಾರು ಪುಸ್ತಕಗಳನ್ನು ಓದುತ್ತಿದ್ದೇನೆ” ಎಂದು ಹೇಳಿದ್ದಾರೆ.

“ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸ ಇದೆ. ಬೆಂಗಳೂರು ಆಥವಾ ಎಲ್ಲೋ ಕೂತು ಟೀಕೆ ಮಾಡೋರು ನಮಗೆ ಬೇಡ. ನಮಗೆ ನಮ್ಮವರು ಬೇಕು, ನಮ್ಮ ಜೊತೆ ನಿಲ್ಲೋರು ಬೇಕು. ನಮ್ಮ ಮೇಲೆ ಪ್ರೀತಿ ತೋರಿದ ಎಲ್ಲಾ ಹೆಣ್ಮಕ್ಕಳಿಗೂ ನಾನು ಆಭಾರಿ. ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿ ಎಲ್ಲವನ್ನೂ ನೋಡಿಕೊಳ್ಳುತ್ತಾರೆ. ನಾವು ಸತ್ಯದ ಹಾದಿಯಲ್ಲಿದ್ದೇವೆ. ಈ ಹಾದಿಯನ್ನು ಮುಂದುವರಿಸುತ್ತೇವೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...