ಬಸವಣ್ಣ ಕುರಿತು ಅವಹೇಳನ: ಯತ್ನಾಳ್‌ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ

Date:

ಬಸವಣ್ಣ ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಕ್ಷಮೆ ಕೇಳಬೇಕು ಎಂದು ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವದಳ ಹಾಗೂ ಲಿಂಗಾಯತ ಸಮನ್ವಯ ಸಮಿತಿ ಒತ್ತಾಯಿಸಿವೆ.

ಬೀದರ್‌ನಲ್ಲಿ ವಕ್ಫ್‌ ಆಸ್ತಿ ವಿವಾದದ ಸಂಬಂಧ ನಡೆದ ಪ್ರತಿಭಟನೆಯಲ್ಲಿ ಲಿಂಗಾಯತ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದ ಯತ್ನಾಳ್‌, ‘ನೀವೆಲ್ಲರೂ ಮುಸ್ಲಿಮರಾಗಬೇಕಾಗುತ್ತದೆ’ ಎಂದು ಹೇಳಿ, ಅವಹೇಳನಕಾರಿ ಸನ್ಹೆ ಮಾಡಿದ್ದರು.

ಯತ್ನಾಳ್‌ ಹೇಳಿಕೆಯನ್ನು ಖಂಡಿಸಿ ಚೆನ್ನಬಸವಾನಂದ ಸ್ವಾಮೀಜಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರೆ. ”ಯತ್ನಾಳ್‌ ಅವರಿಗೆ ವಚನಗಳ ಅರಿವಿಲ್ಲ. ಅವರು ಯಾವಾಗಲೂ ಹಿಂದು, ಹಿಂದುತ್ವ ಎಂದು ತಿರುಗಾಡುವ ವೈದಿಕರ ಪಕ್ಷದಲ್ಲಿದ್ದಾರೆ. ಅವರು ವಚನ ಸಾಹಿತ್ಯವನ್ನು ಅಧ್ಯಯನ ಮಾಡಿಲ್ಲ. ಲಿಂಗಾಯತ ಧರ್ಮದ ಮಾಹಿತಿಯೂ ಇಲ್ಲ. ಅವರು ಬಸವಣ್ಣನವರ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ – ಬಸವ ಭಕ್ತರಲ್ಲಿ ಕೂಡಲೇ ಕ್ಷಮೆ ಕೇಳಬೇಕು” ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಲಿಂಗಾಯತ ಧರ್ಮ ಅಧ್ಯಯನ ಕೇಂದ್ರದ ಸಂಸ್ಥಾಪಕ ಶರಣ ಶ್ರೀಶೈಲ ಜಿ. ಮಸೂತೆ ಕೂಡ ಯತ್ನಾಳ್ ಹೇಳಿಕೆಯನ್ನು ಖಂಡಿಸಿದ್ದಾರೆ. ”ಜವಾಬ್ದಾರಿಯುತ ಚುನಾಯಿತ ಶಾಸಕ ಎಂಬುದನ್ನು ಮರೆತು ಯತ್ನಾಳ್ ಅವರು ಬಸವಣ್ಣನವರ ಬಗ್ಗೆ ಅಪಮಾನಕರ ಮಾತನ್ನಾಡಿದ್ದಾರೆ. ಯತ್ನಾಳ್ ಅವರ ಹೇಳಿಕೆ ತಪ್ಪು. ಅವರು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

”ತಾವು ಹುಟ್ಟಿದ ಧರ್ಮವನ್ನೇ ಮರೆತು, ವಿವೇಕ, ವಿವೇಚನೆ ಇಲ್ಲದೆ ಯಾರನ್ನೋ ಮೆಚ್ಚಿಸಲು ಅನಾಗರಿಕವಾಗಿ ಮಾತನಾಡುತ್ತಿದ್ದಾರೆ. ಅವರೊಬ್ಬ ಮಾನಸಿಕ ಅಸ್ವಸ್ಥ ರಾಜಕಾರಣಿ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...