ಸಾಹಿತಿ ಆಶಾ ರಘು ಇನ್ನಿಲ್ಲ

Date:

ಕನ್ನಡದ ಹಿರಿಯ ಸಾಹಿತಿ, ಪ್ರಕಾಶಕಿ ಆಶಾ ರಘು ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಹಿತ್ಯ ಲೋಕ ಮತ್ತು ತಮ್ಮ ಬಳಗವನ್ನು ಅಗಲಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಎರಡು ವರ್ಷಗಳ ಹಿಂದೆ ಅವರ ಪತಿ, ಆಹಾರ ತಜ್ಞ ಕೆ.ಸಿ ರಘು ಅವರು ಕ್ಯಾನ್ಸರ್‌ಗೆ ತುತ್ತಾಗಿ ಸಾವನ್ನಪ್ಪಿದ್ದರು. ಅವರ ಅಗಲಿಕೆಯಿಂದ ಮಾನಸಿಕವಾಗಿ ನೊಂದಿದ್ದ ಆಶಾ ಅವರು, ಅದೇ ನೋವಿನಲ್ಲಿ ಸಾವಿನ ಹಾದಿ ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ.

ಆಶಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಶನಿವಾರ ಸಂಜೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಶಾ ರಘು ಅವರು ಆವರ್ತ, ಗತ, ಮಾಯೆ, ಚಿತ್ತರಂಗ, ಕೆಂಪು ದಾಸವಾಳ, ವಕ್ಷ ಸ್ಥಲ ಕಾದಂಬರಿಗಳನ್ನು ಬರೆದಿದ್ದಾರೆ. ಆರನೇ ಬೆರಳು, ಬೊಗಸೆಯಲ್ಲಿ ಕಥೆಗಳು, ಅಪರೂಪದ ಪುರಾಣ ಕಥೆಗಳು ಸೇರಿದಂತೆ ಹಲವು ಕಥಾಸಂಕಲನಗಳನ್ನು ರಚಿಸಿದ್ದಾರೆ. ಅಲ್ಲದೆ, ಚೂಡಾಮಣಿ, ಕ್ಷಮಾದಾನ, ಬಂಗಾರದ ಪಂಜರ ಮತ್ತು ಪೂತನಿ ನಾಟಕಗಳನ್ನು ಬರೆದಿದ್ದಾರೆ.

ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (2014), ಸೂರ್ಯನಾರಾಯಣ ಚಡಗ ಪ್ರಶಸ್ತಿ (2014), ಕನ್ನಡ ಸಾಹಿತ್ಯ ಪರಿಷತ್ತಿನ ಪಳಕಳ ಸೀತಾರಾಮಭಟ್ಟ ಪ್ರಶಸ್ತಿ (2019), ರಾಯಚೂರು ಕನ್ನಡ ಸಾಹಿತ್ಯ ಪರಿಷತ್ತಿನ ರಾಜಲಕ್ಷ್ಮಿ ಬರಗೂರು ರಾಮಚಂದ್ರಪ್ಪ ಪ್ರಶಸ್ತಿ (2020), ಸೇಡಂನ ಅಮ್ಮ (2021), ಕರ್ನಾಟಕ ಲೇಖಕಿಯರ ಸಂಘದ ತ್ರಿವೇಣಿ ದತ್ತಿನಿಧಿ ಪ್ರಶಸ್ತಿಗಳು ಸಂದಿವೆ. ಅಲ್ಲದೆ, ಸಾಹಿತ್ಯಾಮೃತ ಸರಸ್ವತಿ ಎಂಬ ಬಿರುದನ್ನೂ ಪಡೆದಿದ್ದಾರೆ.

ಕೆ.ಸಿ ರಘು ಮತ್ತು ಆಶಾ ದಂಪತಿಗೆ ಓರ್ವ ಮಗಳು ಇದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...