ಲೋಕ ಅದಾಲತ್‌ | ಒಂದೇ ದಿನದಲ್ಲಿ 38 ಲಕ್ಷ ಪ್ರಕರಣಗಳು ಇತ್ಯರ್ಥ!

Date:

ರಾಜ್ಯಾದ್ಯಂತ ಡಿಸೆಂಬರ್ 14ರಂದು ನಡೆದ ಲೋಕ ಅದಾಲತ್‌ನಲ್ಲಿ ಬರೋಬ್ಬರಿ 38 ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಅಲ್ಲದೆ, ವಿವಿಧ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಒಟ್ಟು 2,248 ಕೋಟಿ ರೂ. ಪರಿಹಾರ ಪಾವತಿ ಮಾಡುವಂತೆ ಮಾಡಲಾಗಿದೆ ಎಂದು ಕಾನೂನು ಸೇವಾ ಪ್ರಾಧಿಕಾರ ತಿಳಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾಯಮೂರ್ತಿ ವಿ ಕಾಮೇಶ್ವರ್​ ರಾವ್, “ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ರಾಜ್ಯಾದ್ಯಂತ ಒಂದೇ ದಿನದಲ್ಲಿ ಒಟ್ಟು 38.80 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿಲಾಗಿದೆ. ಅವುಗಳಲ್ಲಿ ಹೈಕೋರ್ಟ್, ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿನ 2,45,189 ಪ್ರಕರಣಗಳು ಮತ್ತು 36,35,692 ವ್ಯಾಜ್ಯ ಪೂರ್ವ ಪ್ರಕರಣಗಳು ಇತ್ಯರ್ಥಗೊಂಡಿವೆ. ಒಟ್ಟು 2,248 ಕೋಟಿ ರೂ. ಪರಿಹಾರ ಕೊಡಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಇತ್ಯರ್ಥವಾದ ಪ್ರಕರಣಗಳಲ್ಲಿ 1,581 ವಿಚ್ಛೇದನ ಪ್ರಕರಣಗಳಿವೆ. ಅವುಗಳಲ್ಲಿ 307 ಪ್ರಕರಣಗಳಲ್ಲಿ ದಂಪತಿ ಮತ್ತೆ ಜೊತೆಯಾಗಿದ್ದಾರೆ. ಅಲ್ಲದೆ, 5,168 ಮೋಟಾರು ವಾಹನ ಅಪರಾಧ ಪರಿಹಾರ ಪ್ರಕರಣಗಳು ಇತ್ಯರ್ಥಗೊಂಡಿದ್ದು, 260 ಕೋಟಿ ರೂ. ಪರಿಹಾರ ಕೊಡಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚೆಕ್ ಬೌನ್ಸ್ ಆರೋಪದ 11,262 ಪ್ರಕರಣಗಳು, ಭೂಸ್ವಾಧೀನ ಕುರಿತ 597 ಪ್ರಕರಣಗಳ ಇತ್ಯರ್ಥವಾಗಿದ್ದು, 773 ಕೋಟಿ ರೂ. ಪರಿಹಾರ ಕೊಡಿಸಲಾಗಿದೆ. ಗ್ರಾಹಕ ವ್ಯಾಜ್ಯಗಳ ಕುರಿತ 611 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು, 3 ಕೋಟಿ ರೂ. ಪರಿಹಾರ ವಿತರಣೆ ಮಾಡಲಾಗಿದೆ” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...