ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

Date:

ಬೆಂಗಳೂರು, ರಾಯಚೂರು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಕರ್ನಾಟಕದ ಹಲವೆಡೆ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ.

ಬೆಂಗಳೂರಿನಲ್ಲಿ ಕೂಡ ಬಿಬಿಎಂಪಿ ಎಇಇ ಮಾಧವ ರಾವ್ ಮನೆ ಮೇಲೆ ದಾಳಿ ನಡೆದಿದೆ. ಎಂಜಿನಿಯರಿಂಗ್ ವಿಭಾಗದ ಎಇಇ ಮಾಧವರಾವ್ ಮನೆಗೆ ತಲುಪಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಬೆಳಗಾವಿ ನಗರದ ಅನಗೋಳದಲ್ಲಿರುವ, ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮನೆ, ಕಚೇರಿ ಸೇರಿ 3 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾ ಕುಂಭಮೇಳವೆಂಬ ಸನಾತನ ಗರ್ವ, ಕಾಲ್ತುಳಿತದ ಪರ್ವ

ಹಾರೂಗೇರಿ ಪಶು ವೈದ್ಯಕೀಯ ಇನ್ಸ್​​ಪೆಕ್ಟರ್​​ ಸಂಜಯ್ ಮನೆ ಮೇಲೂ ದಾಳಿ ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಬಾಗಲಕೋಟೆ: ಪಿಡಿಒ ಮನೆ ಮೇಲೆ ಲೋಕಾ ದಾಳಿ

ಗ್ರಾಮ ಪಂಚಾಯತ್ ಪಿಡಿಒ ಎಸ್.ಪಿ.ಹಿರೇಮಠ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬಾಗಲಕೋಟೆಯ ವಿದ್ಯಾಗಿರಿಯ 22ನೇ ಕ್ರಾಸ್​ನಲ್ಲಿರುವ ಮನೆ‌ ಮೇಲೆ ಬಾಗಲಕೋಟೆ ಲೋಕಾಯುಕ್ತ ಡಿವೈಎಸ್​ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ. ಲೋಕಾಯುಕ್ತರು ಏಕಕಾಲಕ್ಕೆ ಮೂರು ಕಡೆ ದಾಳಿ ನಡೆಸಿದ್ದಾರೆ. ಹಿರೇಮಠ ಅವರ ನರಗುಂದದ ನಿವಾಸದ ಮೇಲೂ ದಾಳಿ ನಡೆದಿದೆ.

ಹೂಲಗೇರಿ ಪಿಡಿಒ ಎಸ್​​.ಪಿ.ಹಿರೇಮಠ ಐಷಾರಾಮಿ‌ ಮನೆ ಹೊಂದಿದ್ದು, ಇವರ ಮನೆಯಲ್ಲಿ ಪತ್ತೆಯಾಗಿರುವ ನಗದು ನೋಟುಗಳನ್ನು ಎಣಿಸಲು ಲೋಕಾ ಅಧಿಕಾರಿಗಳು ಮನೆಯೊಳಗೆ ಹಣ ಎಣಿಸುವ ಯಂತ್ರ ತೆಗೆದುಕೊಂಡು ಹೋಗಿದ್ದಾರೆ.

ಮತ್ತೊಂದೆಡೆ, ಜಿ.ಪಂ. ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗ್ ರಾವ್ ಅವರ ರಾಯಚೂರು ನಗರದ ಜವಾರ್ ಕಾಲೋನಿಯಲ್ಲಿನ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಸದ್ಯ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...