ಮಾದಾರ ಚೆನ್ನಯ್ಯ ಸ್ವಾಮೀಜಿ ಪೀಠ ತೊರೆಯಲಿ: ಸಮುದಾಯದ ಹೋರಾಟಗಾರರ ಆಗ್ರಹ

Date:

'ಸಂವಿಧಾನದಲ್ಲಿ ಮನುಸ್ಮೃತಿಯನ್ನು ಸೇರಿಸಿಲ್ಲ', 'ಅಂಬೇಡ್ಕರ್ ಮತ್ತು ದಲಿತ ಸಮುದಾಯಕ್ಕೆ ಸಹಕರಿಸುವುದೆಂದರೆ ಹಾವಿಗೆ ಹಾಲೆರೆದಂತೆ' ಎಂದಿದ್ದ ಆರ್‌ಎಸ್‌ಎಸ್‌ ಕೂಟವನ್ನು ಸ್ವಾಮೀಜಿ ಬೆಂಬಲಿಸುತ್ತಿರುವ ಸಂಬಂಧ ತೀವ್ರ ಆಕ್ಷೇಪ ವ್ಯಕ್ತಪಡಿಸಲಾಗಿದೆ

ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರು ಬಿಜೆಪಿ, ಆರ್‌ಎಸ್‌ಎಸ್ ಹೇಳಿದಂತೆ ಕೇಳುತ್ತಾ, ಸಮುದಾಯಕ್ಕೆ ಅಪಚಾರ ಎಸಗಿದ್ದಾರೆ. ಅವರು ತಕ್ಷಣವೇ ಪೀಠವನ್ನು ತೊರೆಯಲಿ ಎಂದು ಮಾದಿಗ ಸಮುದಾಯದ ಹೋರಾಟಗಾರರು, ಬರಹಗಾರರು ಆಗ್ರಹಿಸಿದ್ದಾರೆ.

“ಸ್ವಾಮೀಜಿಯವರು ಪೀಠವನ್ನು ತೊರೆದು ಬಿಜೆಪಿ ಮತ್ತು ಆರ್‌ಎಸ್‌ಎಸ್ ಸೇರಿಕೊಳ್ಳಲಿ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳಿಗೆ ವಿರುದ್ಧವಿರುವ ಸಂಘಪರಿವಾರದ ಜೊತೆ ಮಾದಿಗ ಸಮುದಾಯ ಇದೆ ಎಂಬಂತೆ ಬಿಂಬಿಸುತ್ತಿರುವುದನ್ನು ನಾವು ಸಹಿಸುವುದಿಲ್ಲ” ಎಂಬ ಎಚ್ಚರಿಕೆಯನ್ನು ಬಹಿರಂಗ ಪತ್ರದಲ್ಲಿ ನೀಡಲಾಗಿದೆ.

ಚಿಂತಕರು ಮತ್ತು ಹೋರಾಟಗಾರರಾದ ಪ್ರೊ.ಸಿ.ಕೆ.ಮಹೇಶ್, ಡಾ.ವಡ್ಡಗೆರೆ ನಾಗರಾಜಯ್ಯ, ಬಿ.ಆರ್.ಭಾಸ್ಕರ್ ಪ್ರಸಾದ್, ವಕೀಲರಾದ ಪ್ರೊ.ಹರಿರಾಮ್, ಹನುಮೇಶ್ ಗುಂಡೂರು, ಬರಹಗಾರರಾದ ರವಿಕುಮಾರ್ ಟೆಲೆಕ್ಸ್, ಯತಿರಾಜ್ ಅವರು ನೀಡಿರುವ ಪತ್ರದಲ್ಲಿ ಸ್ವಾಮೀಜಿಯವರ ನಡೆಯನ್ನು ಖಂಡಿಸಲಾಗಿದೆ ಮತ್ತು ಅವರ ನಿಲುವುಗಳ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರದಲ್ಲೇನಿದೆ?

ಲೋಕಸಭಾ ಚುನಾವಣೆಯಲ್ಲಿ 400 ಸೀಟ್ ಗೆದ್ದರೆ ಸಂವಿಧಾನ ಬದಲಿಸುವ ಮುಕ್ತ ಅಜೆಂಡಾ ಹೊಂದಿದ್ದ ಬಿಜೆಪಿ, ಸಂಘಪರಿವಾರವನ್ನು ಈ ದೇಶದ ಸಮಸ್ತ ದಲಿತ ಸಮುದಾಯ ಬಲವಾಗಿ ವಿರೋಧಿಸಿದ ಕಾರಣ, ಬಿಜೆಪಿ ಬಹುಮತ ಕಳೆದುಕೊಂಡಿತು. ಆನಂತರ ಗಾಬರಿಗೊಂಡಿರುವ ಸಂಘಪರಿವಾರವು ಹಿಂಬಾಗಿನಿಂದ ಬಂದು ದಲಿತ ಸಮುದಾಯವನ್ನು ಒಡೆದು ಆಳುವ ಕಾರ್ಯಸೂಚಿಯನ್ನು ಜಾರಿಗೆ ತರಲು ಮುಂದಾಗಿದೆ. ಅದರ ಭಾಗವಾಗಿ ‘ಸಿಟಿಜನ್ ಫಾರ್ ಸೋಷಿಯಲ್ ಜಸ್ಟಿಸ್’ ಎಂಬ ವೇದಿಕೆ ರೂಪಿಸಿಕೊಂಡು ‘ಸಂವಿಧಾನ ಸನ್ಮಾನ’ ಎಂಬ ಹೆಸರಿನ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ.

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಂವಿಧಾನದ ಕುರಿತು ಅರ್ಧಸತ್ಯಗಳನ್ನು, ಹಸಿಹಸಿ ಸುಳ್ಳುಗಳ ಕಥೆ ಕಟ್ಟಿ ಅಪಪ್ರಚಾರ ಮಾಡುವ ಕಾರ್ಯಕ್ರಮಗಳನ್ನು ಆರ್‌ಎಸ್‌ಎಸ್‌ ರೂಪಿಸುತ್ತಿದೆ. ಇದಕ್ಕೆ ಮಾದಿಗ ಸಮುದಾಯದ ಮಾದಾರ ಚೆನ್ನಯ್ಯ ಸ್ವಾಮೀಜಿಯವರನ್ನು ಮುಂದೆ ಬಿಟ್ಟು, ಮಾದಿಗ ಸಮುದಾಯ ಇಂತಹ ಪಿತೂರಿ ಕೃತ್ಯಗಳ ಭಾಗವಾಗಿದೆ ಎಂಬಂತೆ ಚಿತ್ರಿಸಲಾಗುತ್ತಿದೆ.

ಮೊದನಿಂದಲೂ ಬುದ್ಧ, ಬಸವ ಮಾರ್ಗಕ್ಕೆ, ಬಾಬಾ ಸಾಹೇಬರ ಚಿಂತನೆಗಳಿಗೆ ವಿರುದ್ಧವಾಗಿಯೂ, ಸಂಘಪರಿವಾರದ ಬಾಲಂಗೋಚಿಯಾಗಿಯೂ ನಡೆದುಕೊಂಡಿರುವ ಸ್ವಾಮೀಜಿ, ಸಮುದಾಯದ ಪ್ರತಿನಿಧಿಯೂ ಅಲ್ಲ, ಸಮುದಾಯದ ನೋವು- ನಲಿವು, ಒಲವು- ನಿಲುವುಗಳೂ ಅವರಿಗೆ ತಿಳಿದಿಲ್ಲ. ಮಾದಾರ ಚೆನ್ನಯ್ಯನವರ ಪೀಠದಲ್ಲಿ ಕೂತ ಮಾತ್ರಕ್ಕೆ ಅವರು ಸಮುದಾಯದ ಸಾಕ್ಷಿಪ್ರಜ್ಞೆಯಾಗುವುದಿಲ್ಲ. ಬಿಜೆಪಿ, ಸಂಘಪರಿವಾರ ಹೇಳಿದಂತೆ ಕುಣಿಯುತ್ತಿರುವ ಸ್ವಾಮೀಜಿಯವರು ಕಾವಿ ಕಳಚಿ, ಬಿಜೆಪಿಯನ್ನೋ, ಆರ್‌ಎಸ್‌ಎಸ್‌ ಸಂಸ್ಥೆಯನ್ನೋ ಸೇರಿಕೊಂಡು ಅವರು ಕೊಟ್ಟ ಜವಾಬ್ದಾರಿಗಳನ್ನು ನಿಭಾಯಿಸಿದರೆ ನಮ್ಮದೇನೂ ತಕರಾರು ಇಲ್ಲ. ಸ್ವಾಮೀಜಿಯವರು ಮೊದಲಿನಿಂದಲೂ ಆರ್‌ಎಸ್‌ಎಸ್ ಮತ್ತು ಬಿಜೆಪಿ ಪಕ್ಷವನ್ನು ಕಟ್ಟುವಲ್ಲಿ ಮುಂಚೂಣಿಯಲ್ಲಿರುವ ಕಾರಣ, ಅವರು ಪೀಠ ತೊರೆದು ತಾವು ಬಿಜೆಪಿಯ ಬಾಲಂಗೋಚಿ ಎಂಬುದನ್ನು ಸಾಬೀತು ಮಾಡಬೇಕು. ಆರ್‌ಎಸ್‌ಎಸ್‌ನ ಸರಸಂಘಚಾಲಕ ಹುದ್ದೆಯನ್ನೋ, ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನವನ್ನೋ ಕೊಟ್ಟರೆ ನಿಭಾಯಿಸಲು ಸ್ವಾಮೀಜಿ ಯೋಗ್ಯವಾಗಿದ್ದಾರೆ. ಒಟ್ಟಾರೆ ಸ್ವಾಮೀಜಿಯವರು ಪೀಠ ತೊರೆಯುವವರೆಗೂ ಸಮುದಾಯ ಹೋರಾಟ ನಡೆಸಬೇಕಾಗುತ್ತದೆ.

ಇದನ್ನೂ ಓದಿರಿ: ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬದ ಮೇಲೇಕೆ ಆರೆಸ್ಸೆಸ್‌ನಿಂದ ವ್ಯವಸ್ಥಿತ ದಾಳಿ?

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ಇದೇ ಕೆಲಸವನ್ನು ಸ್ವಾಮೀಜಿ ಕೈಗೊಂಡಿದ್ದರು.‌ ‘ಸಂವಿಧಾನದಲ್ಲಿ ಮನುಸ್ಮೃತಿಯನ್ನು ಸೇರಿಸಿಲ್ಲ’, ‘ಅಂಬೇಡ್ಕರ್ ಮತ್ತು ದಲಿತ ಸಮುದಾಯಕ್ಕೆ ಸಹಕರಿಸುವುದೆಂದರೆ ಹಾವಿಗೆ ಹಾಲೆರೆದಂತೆ’ ಎಂದಿದ್ದ ಆರ್‌ಎಸ್‌ಎಸ್‌ ಕೂಟವು ಈ ಹಿಂದೆ ‘ಮಾದಿಗ ಮುನ್ನಡೆ’ ಎಂಬ ಕಾರ್ಯಕ್ರಮ ನಡೆಸಿತ್ತು. ಆ ಮೂಲಕ ‘ಮನುವಾದ ಮುನ್ನಡೆ’ ಮಾಡುವ ಪಿತೂರಿ ನಡೆದಿತ್ತು.‌ ಅದಕ್ಕೂ ಈ ಮಾದಾರ ಚೆನ್ನಯ್ಯ ಸ್ವಾಮೀಜಿಯವರನ್ನು ಮುಂದೆ ಬಿಡಲಾಗಿತ್ತು. ಸಮುದಾಯ ಎಚ್ಚೆತ್ತುಕೊಂಡು ಪ್ರಶ್ನೆ ಮಾಡಿದಾಗ ತಣ್ಣಗಾಗಿದ್ದರು. ಮಾದಿಗರನ್ನು ಒಂದು ಪಕ್ಷದ, ಮತೀಯವಾದಿ ಸಿದ್ಧಾಂತ ಹೊಂದಿರುವ ಸಂಘಪರಿವಾರದ ಅಡಿಯಾಳುಗಳನ್ನಾಗಿ ಮಾಡುವ ದುಷ್ಕೃತ್ಯಗಳಿಗೆ ಸ್ವಾಮೀಜಿ ಮುಂದಾಗಿದ್ದಾರೆ. ಸ್ವಾಮೀಜಿಯವರು ಪೀಠವನ್ನು ತೊರೆದು ತಾವು ಬಿಜೆಪಿ ಹೇಳಿದಂತೆ ಕುಣಿಯುವ ರಾಜಕಾರಣಿ ಎಂದು ಸಾಬೀತು ಮಾಡಲಿ. ಸಮುದಾಯವನ್ನು ದಿಕ್ಕು ತಪ್ಪಿಸುವ ಈ ಪ್ರವೃತ್ತಿ ಮುಂದುವರಿದರೆ ಸಮುದಾಯ ಸುಮ್ಮನಿರುವುದಿಲ್ಲ ಎಂಬ ಎಚ್ಚರಿಕೆಯನ್ನು ಈ ಮೂಲಕ ನೀಡುತ್ತಿದ್ದೇವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...