Breaking | ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ನಿಂದ ಮಧ್ಯಂತರ ತಡೆ

Date:

ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಹೊರಡಿಸಿರುವ ಆದೇಶ ಮಾಡಿದ್ದರು. ಈ ಆದೇಶ ಕಾನೂನು ಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ತಮ್ಮ ಅಹವಾಲು ಆಲಿಸದೆ ಏಕಾಏಕಿ ಆದೇಶ ಹೊರಡಿಸಲಾಗಿದೆ. ಹಾಗಾಗಿ, ಗಡಿಪಾರು ಆದೇಶ ರದ್ದುಗೊಳಿಸಬೇಕು ಎಂದು ತಿಮರೋಡಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ರಜಾಕಾಲೀನ ಏಕಸದಸ್ಯ ಪೀಠ ಮಂಗಳವಾರ ವಿಚಾರಣೆ ನಡೆಸಿದ್ದು, ಅಕ್ಟೋಬರ್ 8ರವರೆಗೆ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿ,ಅ.9ಕ್ಕೆ ವಿಚಾರಣೆ ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹೇಶ್‌ ಶೆಟ್ಟಿ ತಿಮರೋಡಿ ಅರ್ಜಿಯಲ್ಲಿ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಅವರನ್ನು ಪ್ರತಿವಾದಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...