ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ನಿರ್ಧಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Date:

ಮುಖ್ಯಮಂತ್ರಿ ಬದಲಾವಣೆಯಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತದೆ ಮತ್ತು ಈ ಬಗ್ಗೆ ಅನಗತ್ಯ ಸಮಸ್ಯೆಯನ್ನು ಸೃಷ್ಟಿಸಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂದು ಕೆಲವು ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಮಲ್ಲಿಕಾರ್ಜುನ ಖರ್ಗೆ ಉತ್ತರಿಸಿದರು.

‘ನೋಡಿ, ಅದು ಹೈಕಮಾಂಡ್ ಕೈಯಲ್ಲಿದೆ. ಹೈಕಮಾಂಡ್‌ನಲ್ಲಿ ಏನು ನಡೆಯುತ್ತಿದೆ ಎಂದು ಇಲ್ಲಿ ಯಾರೂ ಹೇಳಲು ಸಾಧ್ಯವಿಲ್ಲ. ಇದು ಹೈಕಮಾಂಡ್‌ಗೆ ಬಿಟ್ಟ ವಿಷಯ ಮತ್ತು ಮುಂದಿನ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೈಕಮಾಂಡ್‌ಗೆ ಇದೆ. ಆದರೆ, ಅನಗತ್ಯವಾಗಿ ಯಾರೊಬ್ಬರೂ ಸಮಸ್ಯೆ ಸೃಷ್ಟಿಸಬಾರದು’ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023ರಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡಾಗ, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯ ಮಾತುಕತೆ ನಡೆದಿದ್ದು, ಉಭಯ ನಾಯಕರು ತಲಾ 2.5 ವರ್ಷಗಳ ಕಾಲ ರಾಜ್ಯವನ್ನು ಮುನ್ನಡೆಸುತ್ತಾರೆ ಎಂಬ ಊಹಾಪೋಹಗಳು ಕೇಳಿಬಂದಿದ್ದವು. ಆದರೆ, ಈ ಬಗ್ಗೆ ಪಕ್ಷ ಯಾವುದೇ ಸ್ಪಷ್ಟನೆ ನೀಡಿಲ್ಲ ಅಥವಾ ತಿರಸ್ಕರಿಸಿಲ್ಲ. ಸದ್ಯ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದು, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ

ಇದೇ ಸಂದರ್ಭದಲ್ಲಿ ಆರ್‌ಎಸ್‌ಎಸ್ ನಾಯಕ ದತ್ತಾತ್ರೇಯ ಹೊಸಬಾಳೆ ಹೊಸಬಾಳೆ ಅವರ ಬಗ್ಗೆ ಮಾತನಾಡಿದ ಖರ್ಗೆ, ಆತ ಮನುಸ್ಮೃತಿಯ ವ್ಯಕ್ತಿ. ಬಡವರ್ಗದ ಜನರು ಏಳಿಗೆ ಹೊಂದುವುದು ಅವರಿಗೆ ಇಷ್ಟವಿಲ್ಲ. ಸಾವಿರ ವರ್ಷಗಳಿಗೂ ಹೆಚ್ಚು ಕಾಲ ಪಾಲಿಸಿಕೊಂಡು ಬಂದಿರುವುದನ್ನು ಅವರು ಇನ್ನೂ ಮುಂದುವರಿಸುತ್ತಿದ್ದಾರೆ. ಅದಕ್ಕಾಗಿಯೇ ಅವರು ಸಮಾಜವಾದ, ಜಾತ್ಯತೀತತೆ, ಒಕ್ಕೂಟ ವ್ಯವಸ್ಥೆ, ಸ್ವಾತಂತ್ರ‍್ಯ, ಸಮಾನತೆ ಅಥವಾ ಭ್ರಾತೃತ್ವದಲ್ಲಿ ನಂಬಿಕೆ ಇಡುವುದಿಲ್ಲ. ಎಲ್ಲ ಮೌಲ್ಯಗಳನ್ನು ತಿರಸ್ಕರಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಇದು ಅವರ ಪಕ್ಷದ ಮಾರ್ಗ, ಆರ್‌ಎಸ್‌ಎಸ್ ಮಾರ್ಗಕ್ಕೆ ನಿಜವಾಗಿಯೂ ಬದ್ಧರಾಗಿದ್ದರೆ, ಅವರು ಅಸ್ಪೃಶ್ಯತೆಯನ್ನು ತೊಡೆದು ಹಾಕುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...