ಮಂಡ್ಯ | ಶಾಲೆಯಲ್ಲಿ ಮೊಟ್ಟೆ ವಿತರಣೆಗೆ ಪೋಷಕರ ವಿರೋಧ, 84 ಮಕ್ಕಳು ಬೇರೆ ಶಾಲೆಗೆ ದಾಖಲು

Date:

ಮಕ್ಕಳಲ್ಲಿ ಪೌಷ್ಠಿಕ ಆಹಾರ ವೃದ್ಧಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಮೊಟ್ಟೆ ಮತ್ತು ಚಿಕ್ಕಿ ನೀಡುತ್ತಿದೆ. ಆದರೆ, ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದಲ್ಲಿ ಧಾರ್ಮಿಕ ಆಚರಣೆ ನೆಪವೊಡ್ಡಿ ಮೊಟ್ಟೆ ವಿತರಣೆ ವಿರೋಧಿಸಿ ಪೋಷಕರು 84 ವಿದ್ಯಾರ್ಥಿಗಳ ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗಳಿಗೆ ದಾಖಲಿಸಿದ್ದಾರೆ.

ಶಾಲೆಯ ಪಕ್ಕದಲ್ಲೇ ವೀರಭದ್ರೇಶ್ವರ ದೇವಾಲಯ ಇದೆ. ಹೀಗಾಗಿ ಶಾಲೆಯಲ್ಲಿ ಮೊಟ್ಟೆ ಬೇಯಿಸಬೇಡಿ ಎಂದು ಸವರ್ಣೀಯ ಸಮುದಾಯದ ಪೋಷಕರು ಆಗ್ರಹಿಸಿದ್ದರು. ದೇವಸ್ಥಾನ ಆವರಣದಲ್ಲಿ ಮೊಟ್ಟೆ ಬೇಯಿಸುವುದು ಧಾರ್ಮಿಕ ನಂಬಿಕೆ ಮಸಿಬಳಿದಂತೆ. ಹೀಗಾಗಿ ಮೊಟ್ಟೆಯನ್ನು ಇಲ್ಲಿ ಬೇಯಿಸಬೇಡಿ ಎಂದು ಎನ್ನುವ ಒತ್ತಾಯವೂ ಇತ್ತು ಎನ್ನಲಾಗಿದೆ.

ಅಧಿಕಾರಿಗಳು ನಿಯಮದಂತೆ ಶಾಲೆಯಲ್ಲಿ ಮೊಟ್ಟೆ ವಿತರಣೆ ಆರಂಭಿಸಿದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಈಗ ಅಕ್ಕಪಕ್ಕದ ಕೀಲಾರ, ಹನಕೆರೆ ಹಾಗೂ ಬೆಸರಗರಹಳ್ಳಿ ಸರ್ಕಾರಿ ಶಾಲೆಗೆ ದಾಖಲಿಸಿದ್ದಾರೆ. ಶಾಲೆಯಲ್ಲಿ ಮೊಟ್ಟೆ ವಿತರಣೆ ವಿಚಾರವಾಗಿ ಇಲ್ಲಿ ಹಿಂದಿನಿಂದಲೂ ಭಿನ್ನಾಭಿಪ್ರಾಯಗಳು ಮೂಡಿದ್ದು, 124 ವಿದ್ಯಾರ್ಥಿಗಳ ಪೈಕಿ 84 ವಿದ್ಯಾರ್ಥಿಗಳು ಸರ್ಕಾರಿ ಶಾಲೆ ಬಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವಸ್ಥಾನದ ಸುತ್ತಮುತ್ತ ಮಾಂಸಾಹಾರ ಮತ್ತು ಮೊಟ್ಟೆಯನ್ನು ನಿಷೇಧಿಸಲಾಗಿದೆ. ಆದ್ದರಿಂದ ಶಾಲೆಯಲ್ಲಿಯೂ ಮೊಟ್ಟೆ ವಿತರಿಸಬಾರದು ಎಂದು ಪೋಷಕರು ಆಗ್ರಹಿಸಿದ್ದರು. ಈ ಕಾರಣಕ್ಕೆ ಶಾಲೆಯಲ್ಲಿ ಮೊಟ್ಟೆ ವಿತರಣೆಯನ್ನು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ನಿಲ್ಲಿಸಿತ್ತು. ಮೊಟ್ಟೆ ಬದಲಿಗೆ ಬಾಳೆಹಣ್ಣು ಅಥವಾ ಮಿಠಾಯಿ ವಿತರಣೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಮತ್ತೆ ಮೊಟ್ಟೆ ವಿತರಣೆ ಮಾಡಲು ಮುಂದಾಗಿದ್ದರಿಂದ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.

“ಮೊಟ್ಟೆ ತಿನ್ನುವುದನ್ನು ನಾವು ವಿರೋಧಿಸುವುದಿಲ್ಲ. ದೇವಾಲಯ ಇರುವುದರಿಂದ ಕೊಡಬಾರದು, ಮನೆಗೆ ಕೊಟ್ಟು ಕಳುಹಿಸಲಿ ಎಂದಿದ್ದೆವು. ಬೇಯಿಸಿ ಕೊಡಬೇಕು ಎಂದು ಕೆಲವರು ಪಟ್ಟು ಹಿಡಿದಿದ್ದರು. ಆಚಾರ ವಿಚಾರಕ್ಕೆ ಅಡೆತಡೆ ಆಗುತ್ತದೆ. ಹೀಗಾಗಿ ನಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದ್ದೇವೆ” ಎನ್ನುತ್ತಾರೆ ಎಸ್‌ಡಿಎಂಸಿ ಸದಸ್ಯ ಚಂದ್ರು ಆಲಕೆರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...