ಮಂಡ್ಯ | ಪೊಲೀಸರಿಂದ ಹೆಲ್ಮೆಟ್‌ ತಪಾಸಣೆ, ಬೈಕ್‌ನಿಂದ ಬಿದ್ದು 3 ವರ್ಷದ ಮಗು ಸಾವು

Date:

ಹೆಲ್ಮೆಟ್‌ ತಪಾಸಣೆ ವೇಳೆ ಪೊಲೀಸರು ಕೈ ಮಾಡಿದ್ದರಿಂದ ಬೈಕ್‌ ನಿಲ್ಲಸಲು ಹೋಗಿ ಆಯತಪ್ಪಿ ಬಿದ್ದು, ಹೃತಿಕ್ಷಾ (3) ಎಂಬ ಮಗುವೊಂದು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮೂವರು ಎಎಸ್​ಐಗಳನ್ನು ಸಸ್ಪೆಂಡ್ ಮಾಡಲಾಗಿದೆ.

ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ಅಶೋಕ್ ಮತ್ತು ವಾಣಿಶ್ರೀ ದಂಪತಿಯ ಪುತ್ರಿ ಹೃತಿಕ್ಷಾ (3) ಮೃತಪಟ್ಟ ಮಗು. ಹೃತಿಕ್ಷಾ ಅವರಿಗೆ ನಾಯಿ ಕಡಿತಕ್ಕೆ ಚಿಕಿತ್ಸೆಗೆಂದು ಮಂಡ್ಯಕ್ಕೆ ಬರುತ್ತಿದ್ದ ವೇಳೆ ಪೊಲೀಸರು ತಪಾಸಣೆ ಮಾಡಲು ಮುಂದಾಗಿದ್ದಾರೆ. ಪೊಲೀಸರು ಬೈಕ್ ಹ್ಯಾಂಡಲ್ ಅನ್ನು ಹಿಡಿದುಕೊಂಡಾಗ ಬೈಕ್ ನಲ್ಲಿದ್ದ ಮೂವರು ಆಯತಪ್ಪಿ ಕೆಳಗೆ ಬೀಳುತ್ತಾರೆ. ಈ ವೇಳೆ ಮಗು ಗಂಭೀರವಾಗಿ ಗಾಯಗೊಳ್ಳುತ್ತದೆ ಎಂದು ಮಗುವಿನ ಸಂಬಂಧಿಕರು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳದಲ್ಲಿದ್ದ ಸಾರ್ವಜನಿಕರು ಮಗುವನ್ನು ಮಿಮ್ಸ್ ಆಸ್ಪತ್ರೆಗೆ ಆಟೊದಲ್ಲಿ ಕರೆದೊಯ್ಯುತ್ತಾರೆ. ಆದರೆ ಮಾರ್ಗ ಮಧ್ಯೆಯೇ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಿಡಿದೆದ್ದ ಕುಟುಂಬಸ್ಥರು ಟ್ರಾಫಿಕ್​ ಪೊಲೀಸರ ವಿರುದ್ಧ ಆಕ್ರೋಶಗೊಂಡಿದ್ದು, ಹೆದ್ದಾರಿಯಲ್ಲಿ ಮಗುವಿನ ಶವವಿಟ್ಟು ಪ್ರತಿಭಟನೆಗಿಳಿದಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅವರು ಸ್ಥಳದಲ್ಲಿ ಇದ್ದ ಮೂವರು ಎಎಸ್​ಐಗಳನ್ನು ಸಸ್ಪೆಂಡ್ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆ.ಆರ್.ಪೇಟೆ ದಲಿತ ಯುವಕ ಜಯಕುಮಾರ್ ಕೇಸ್‌ನಲ್ಲಿ ಪೊಲೀಸರು ಕುರುಡಾಗಿದ್ದು ಅಕ್ಷಮ್ಯ

25 ಲಕ್ಷ ರೂ.ಪರಿಹಾರ ನೀಡುವಂತೆ ಅಶೋಕ್ ಆಗ್ರಹ

ಘಟನೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, “ಪೊಲೀಸ್ ಇಲಾಖೆಯ ನಿರ್ಲಕ್ಷ್ಯದಿಂದ ಮಗುವಿನ ಸಾವಾಗಿದೆ. ಪೊಲೀಸ್ ಇಲಾಖೆಯಲ್ಲಿ ಶಿಸ್ತು ಇಲ್ಲದೇ ಇರುವುದು ಇದಕ್ಕೆ ನೇರ ಕಾರಣ. ಏಕಾಏಕಿ ಹೋಗಿ ರಸ್ತೆಯಲ್ಲಿ ಅಡ್ಡ ಹಾಕುವ ಕೆಲಸ ಮಾಡುತ್ತಾರೆ. ಪೊಲೀಸ್ ಕೈ ತಗುಲಿ ಕೆಳಗೆ ಬಿದ್ದು ಮಗು ಮೃತಪಟ್ಟಿದೆ ಎಂಬ ಮಾಹಿತಿ ನನಗೆ ಬಂದಿದೆ. ಪೊಲೀಸರಿಂದಲೇ ಆ ಮಗು ಮೃತಪಟ್ಟಿದೆ. ಹೀಗಾಗಿ ರಾಜ್ಯ ಸರ್ಕಾರ ಮಗುವಿನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...