ಮಂಗಳೂರು | 60 ‘ಮಹೇಶ್‌’ ಬಸ್‌ಗಳ ಮಾಲೀಕ ಪ್ರಕಾಶ್ ಆತ್ಮಹತ್ಯೆ

Date:

ಕರಾವಳಿ ಭಾಗದಲ್ಲಿ ಸುಮಾರು 60 ಬಸ್‌ಗಳ ಮಾಲೀಕರಾಗಿದ್ದ ಉದ್ಯಮಿ ಪ್ರಕಾಶ್ ಶೇಖ(42) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಮಂಗಳೂರು ನಗರದ ಕದ್ರಿ ಕಂಬಳ ಸಮೀಪದ ಅಪಾರ್ಟ್‌ಮೆಂಟ್‌ನ ಕೊಠಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ‘ಮಹೇಶ್ ಮೋಟಾರ್ಸ್‌’ಗೆ ಸೇರಿದ ಅನೇಕ ಸಿಟಿ ಬಸ್ ಮತ್ತು ಜಿಲ್ಲಾ ಬಸ್‌ಗಳು ಪ್ರತಿದಿನವೂ ಸಂಚರಿಸುತ್ತಿದ್ದು, ಜನಪ್ರಿಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
prakash shetty

ಮಧ್ಯಾಹ್ನ ಊಟ ಮಾಡಿ ಕೊಠಡಿಗೆ ತೆರಳಿದ್ದರು
ಇಂದು ಮಧ್ಯಾಹ್ನ ಮನೆಯಲ್ಲಿದ್ದ ಪ್ರಕಾಶ್ ಅವರು, ಊಟ ಮಾಡಿದ ಬಳಿಕ ಕೊಠಡಿಗೆ ತೆರಳಿದ್ದರು. ಮಲಗಿರಬಹುದೆಂದು ಸಂಜೆ ಮನೆ ಮಂದಿ ಎಬ್ಬಿಸಲು ಹೊರಟಾಗ ಕೊಠಡಿಯ ಬಾಗಿಲು ತೆಗೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

ಘಟನೆ ಸಂಬಂಧ ಕದ್ರಿ ಪೊಲೀಸರು ಸ್ಥಳ ಮಹಜರು ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

mahesh bus

ಬೆಚ್ಚಿ ಬೀಳಿಸಿದ ಸುದ್ದಿ
60 ಬಸ್‌ಗಳ ಮಾಲೀಕರಾಗಿರುವ ಹಿನ್ನೆಲೆಯಲ್ಲಿ ಉದ್ಯಮದ ವಿಚಾರದಲ್ಲಿ ಯಾವುದೇ ಆರ್ಥಿಕ ಸಮಸ್ಯೆ ಇಲ್ಲದಿದ್ದರೂ, ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ನಿನ್ನೆ ಸಂಜೆ ತನ್ನ ಆಪ್ತ ಸ್ನೇಹಿತರೊಡನೆ ಹೊರಗಡೆ ಸುತ್ತಾಡಿದ್ದ ಪ್ರಕಾಶ್ ಅವರು, ಈ ರೀತಿ ಆತ್ಮಹತ್ಯೆಗೆ ಶರಣಾಗಿರುವುದು ಕರಾವಳಿಗರನ್ನು ಅದರಲ್ಲೂ ಖಾಸಗಿ ಬಸ್‌ ಸಿಬ್ಬಂದಿಗಳನ್ನು ಬೆಚ್ಚಿ ಬೀಳಿಸಿದೆ. ಮಾನಸಿಕ ಒತ್ತಡಕ್ಕೆ ಸಿಲುಕಿ ಈ ರೀತಿ ಮಾಡಿಕೊಂಡಿದ್ದಾರೆಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಮೃತರು ತಂದೆ ಜಯರಾಮ್ ಶೇಖ, ಪತ್ನಿ, ಮಗಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...