532 ಎಕರೆ ಅರಣ್ಯಭೂಮಿ ಕಬಳಿಸಲು ಯತ್ನಿಸಿದ್ದ ಮನ್ಮಥ ಪೊಲೀಸ್ ವಶಕ್ಕೆ: ಸಚಿವ ಈಶ್ವರ ಖಂಡ್ರೆ

Date:

ಕೆಂಗೇರಿ ಬಿ.ಎಂ. ಕಾವಲ್‌ನಲ್ಲಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿದ್ದ ಎಂ ಬಿ ನೇಮಣ್ಣಗೌಡ ಅಲಿಯಾಸ್ ಎಂ.ಬಿ.ಮನ್ಮಥನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, “ಎಂ ಬಿ ಮನ್ಮಥ ಎಂಬ ವ್ಯಕ್ತಿ ಈ ಹಿಂದೆಯೂ ಇದೇ ರೀತಿ ಸುಳ್ಳು ಮತ್ತು ನಕಲಿ ದಾಖಲೆ ನೀಡಿ 512 ಎಕರೆ 26 ಗುಂಟೆ ಅರಣ್ಯ, ಸರ್ಕಾರಿ ಭೂಮಿಯ ಮೇಲೆ ಹಕ್ಕು ಸಾಧಿಸಲು ಪ್ರಯತ್ನಿಸಿದ್ದರು, ಈ ಸಂಬಂಧ ಕಳೆದ ನವೆಂಬರ್ 28ರಂದು ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರು ಮೂಡಿಗೆರೆ ಆರಕ್ಷಕ ವೃತ್ತ ನಿರೀಕ್ಷಕರ ಠಾಣೆಯಲ್ಲಿ ದೂರು ದಾಖಲಿಸಿದ್ದರು ನಂತರ ತಹಶೀಲ್ದಾರ್ ಅವರೂ ಈ ಬಗ್ಗೆ ದೂರು ನೀಡಿದ್ದರು” ಎಂದು ವಿವರಿಸಿದರು.

“ಈ ದೂರುಗಳ ಹಿನ್ನೆಲೆಯಲ್ಲಿ ಎಫ್.ಐ.ಆರ್. ದಾಖಲಿಸಿದ ಪೊಲೀಸರು ಈಗ ಮನ್ಮಥ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು ಅರಣ್ಯ ಮತ್ತು ಸರ್ಕಾರಿ ಭೂಮಿ ಕಬಳಿಕೆಯ ಈ ಸಂಚಿನಲ್ಲಿ ಯಾರು ಯಾರು ಶಾಮೀಲಾಗಿದ್ದಾರೆ ಎಂಬುದು ಬಯಲಾಗಲಿದೆ.
ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿ ಕಬಳಿಸುವವರಿಗೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕೆಲವು ಅಧಿಕಾರಿಗಳು ಮತ್ತು ಸರ್ಕಾರಿ ವಕೀಲರು ಸಹಾಯ ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಸಿಐಡಿ ಅಥವಾ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡಿಸಲು ಕೋರಿರುವೆ” ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಕಲಿ ದಾಖಲೆ ಸೃಷ್ಟಿಸಿ ಯಾರೇ ಅರಣ್ಯ ಭೂಮಿ ಕಬಳಿಸಲು ಯತ್ನಿಸಿದರೂ ಅರಣ್ಯ ಸಚಿವರಾಗಿ ತಾವು ಬಿಡುವುದಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...