ಇಂದು ಮುಂಜಾನೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ 75ನಲ್ಲಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ ರಾಕೇಶ್ ಮೃತರು. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಣೆಯಾದ ಮಹಿಳೆಯರು ಮತ್ತು ಸಾಮಾಜಿಕ ವಿಡಂಬನೆ
ಚಿಕ್ಕಬಳ್ಳಾಪುರ ಮೂಲದ ಆರು ಮಂದಿ, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿಯಾಗಿ, ವಾಪಸ್ ಊರಿಗೆ ಹೋಗುತ್ತಿದ್ದರು. ನಸುಕಿನ ಜಾವ ಈಚನಹಳ್ಳಿ ಬಳಿ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿದೆ.ಕಾರು ಮನೋಜ್ ಕುಮಾರ್ ಎಂಬುವರಿಗೆ ಸೇರಿದೆ.
ಕಾರು ಹಾಗೂ ಕಾರಿನಲ್ಲಿ ಇದ್ದವರ ಬಗ್ಗೆ ತಕ್ಷಣ ವಿಳಾಸ ಪತ್ತೆ ಹಚ್ಚಿ ಎಂದು ಚಿಕ್ಕಬಳ್ಳಾಫುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿಎಲ್ ನಾಗೇಶ ಹಾಗೂ ಆರ್ಟಿಒ ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮನವಿ ಮಾಡಿದ್ದಾರೆ.





