ಅತ್ಯಾಚಾರ ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ – ಗರ್ಭಪಾತ ಹಕ್ಕುಗಳ ವಿವರಣೆ ಕಡ್ಡಾಯ: ಹೈಕೋರ್ಟ್‌

Date:

ಅತ್ಯಾಚಾರ ಪ್ರಕರಣಗಳಲ್ಲಿ ಅತ್ಯಾಚಾರ ಅಥವಾ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾದ ಕೂಡಲೇ ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕು. ಗರ್ಭಪಾತ ಹಕ್ಕುಗಳ ಬಗ್ಗೆ ಸಂತ್ರಸ್ತೆ ಮತ್ತು ಆಕೆಯ ಪೋಷಕರಿಗೆ ಮಾಹಿತಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಅತ್ಯಾಚಾರ ಸಂತ್ರಸ್ತೆ, 17 ವರ್ಷದ ಬಾಲಕಿ 24 ವಾರಗಳ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತ ಮಾಡಿಸಲು ಅನುಮತಿ ಕೋರಿ ಸಂತ್ರಸ್ತೆಯ ತಂದೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್‌ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ. ಅತ್ಯಾಚಾರ ಪ್ರಕರಣ ದಾಖಲಾದ ಕೂಡಲೇ ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ ಮಾಡಿಸಬೇಕು ಎಂದು ಹೇಳಿದೆ.

17 ವರ್ಷದ ಬಾಲಕಿಯ ಪ್ರಕರಣದಲ್ಲಿ ದೂರು ದಾಖಲಾದಾಗಲೇ ಆಕೆಗೆ ಗರ್ಭಪಾತ ಹಕ್ಕುಗಳ ಕುರಿತು ತಿಳಿಸಿದ್ದರೆ, ಸಂತ್ರಸ್ತೆ ಹೈಕೋರ್ಟ್‌ ಮೆಟ್ಟಿಲೇರುವ ಅತ್ಯವೇ ಬರುತ್ತಿರಲಿಲ್ಲ. ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದರೆ, ಸಂತ್ರಸ್ತರಿಗೆ ಇರುವ ಹಕ್ಕುಗಳ ಬಗ್ಗೆ ತಿಳಿಸಬೇಕು. ಆಗ ಸಂತ್ರಸ್ತೆಯರು ಗರ್ಭಪಾತಕ್ಕೆ ಅನುಮತಿ ಕೋರಿ ಕೋರ್ಟ್‌ವರೆಗೂ ಬರುವುದು ತಪ್ಪುತ್ತದೆ ಎಂದು ಕೋರ್ಟ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ಯಾಚಾರ ಪ್ರಕರಣದ ಎಫ್​ಐಆರ್​ ದಾಖಲಿಸುವ ಸಮಯದಲ್ಲೇ ಸಂತ್ರಸ್ತೆ ಮತ್ತು ಆಕೆಯ ಕುಟುಂಬಸ್ಥರಿಗೆ ವೈದ್ಯಕೀಯ ಗರ್ಭಪಾತದ ಕುರಿತು ಮಾಹಿತಿ ನೀಡಬೇಕು. ಆಗ, ತಡವಾಗಿ ಗರ್ಭಪಾತಕ್ಕೆ ಅನುಮತಿ ಕೋರುವಾಗ ಅವರು ಅನುಭವಿಸುವ ಮಾನಸಿಕ ಯಾತನೆಯನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಕೋರ್ಟ್‌ ಒತ್ತಿ ಹೇಳಿದೆ.

ಈ ಸುದ್ದಿ ಓದಿದ್ದೀರಾ?: ಭ್ರೂಣ ಹತ್ಯೆ ಪ್ರಕರಣ | ರಾಜ್ಯದಲ್ಲಿ ದೊಡ್ಡ ಜಾಲವೇ ಇದ್ದು, ಎಸ್‌ಐಟಿ ತನಿಖೆಗೆ ನೀಡಬೇಕು: ಆರ್‌ ಅಶೋಕ್

ಪೋಕ್ಸೋ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆಯ ಸೆಕ್ಷನ್ 376ರ ಅಡಿಯಲ್ಲಿ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು. ಆಕೆ ಗರ್ಭಿಣಿಯಾಗಿದ್ದಾಳೆಯೇ, ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಆಕೆ ಗರ್ಭಿಣಿಯಾಗಿದ್ದಲ್ಲಿ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬೇಕು. ಅವರು ಗರ್ಭಾವಸ್ಥೆಯ ಪರಿಣಾಮ, ಸಂತ್ರಸ್ತೆಯ ದೈಹಿಕ ಮತ್ತು ಮಾನಸಿಕ ಸ್ಥಿತಿ, ಗರ್ಭಾವಸ್ಥೆಯ ಮುಂದುವರಿಕೆ, ಗರ್ಭಾವಸ್ಥೆಯ ಮುಕ್ತಾಯ ಹಾಗೂ ಕಾರ್ಯವಿಧಾನಗಳ ಬಗ್ಗೆ ಸಂತ್ರಸ್ತರಿಗೆ ಇಳಿಸಿಕೊಡಬೇಕು ಎಂದು ಹೈಕೋರ್ಟ್‌ ತಿಳಿಸಿದೆ.

ಸಂತ್ರಸ್ತೆಗೆ ಗರ್ಭಪಾತದ ವೇಳೆ ಭ್ರೂಣದ ಅಂಗಾಂಶದ ಮಾದರಿಗಳನ್ನು ಸಂರಕ್ಷಿಸಬೇಕು. ಫೋರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ ಮತ್ತು ಡಿಎನ್‌ಎ ವಿಶ್ಲೇಷಣೆಗೆ ಕಳುಹಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...