ಸಕ್ಕರೆ ಕಾರ್ಖಾನೆ & ರೈತ ಮುಖಂಡರೊಂದಿಗೆ ನಾಳೆ ಸಭೆ: ಸಿಎಂ ಸಿದ್ದರಾಮಯ್ಯ

Date:

ಕಬ್ಬಿಗೆ ₹3,500 ದರ ನೀಡಬೇಕು ಎಂದು ಆಗ್ರಹಿಸಿ ರೈತರು, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರದಲ್ಲಿ ನಡೆಸಿರುವ ಅನಿರ್ದಿಷ್ಟಾವಧಿ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ತುರ್ತು ಪತ್ರಿಕಾಗೋಷ್ಠಿ ಕರೆದು ಶುಕ್ರವಾರ ಕಬ್ಬು ಹೋರಾಟಗಾರರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, “ಕಬ್ಬು ಬೆಳೆಗಾರರ ಸಮಸ್ಯೆಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಎಫ್‌ಆರ್‌ಪಿಯನ್ನು ನಿಗಧಿ ಮಾಡುವುದು ಕೇಂದ್ರ ಸರ್ಕಾರ. ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಲಿದ್ದೇನೆ” ಎಂದರು.

“ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗಿನ ಸಭೆ ಬಳಿಕ ಬಾಗಲಕೋಟೆ, ಬೆಳಗಾವಿ ಹಾಗೂ ಹಾವೇರಿ ಭಾಗದ ರೈತ ಮುಖಂಡರೊಂದಿಗೆ ಸಭೆ ಕರೆದಿದ್ದೇನೆ. ಸಭೆಯಲ್ಲಿ ಅವರೆಲ್ಲರ ಸಮಸ್ಯೆ ಆಲಿಸಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಭೇಟಿಗೆ ಸಮಯ ಕೇಳುವೆ. ಅವರು ಸಮಯ ನೀಡಿದರೆ ರೈತರ ಸಮಸ್ಯೆ ಬಗ್ಗೆ ಚರ್ಚಿಸುವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರ ಮುಗ್ದತೆ ಬಳಸಿಕೊಂಡು ವಿರೋಧ ಪಕ್ಷದವರು ಹೋರಾಟವನ್ನು ಹೈಜಾಕ್‌ ಮಾಡುತ್ತಿದ್ದಾರೆ. ವಿರೋಧ ಪಕ್ಷದವರ ಮಾತಿಗೆ ರೈತರು ಬೆಲೆ ಕೊಡಬೇಡಿ. ರೈತರ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಕ್ಕರೆ ಸಚಿವ ಶಿವಾನಂದ ಪಾಟೀಲ್‌ ಎಲ್ಲ ಕೆಲಸ ಮಾಡಿದ್ದಾರೆ” ಎಂದು ಹೇಳಿದರು.

“FRP ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರ: ರೈತರು ಯಾವುದೇ ಕಾರಣಕ್ಕೂ ರೈತ ದ್ರೋಹಿಯಾದ ರಾಜ್ಯದ ಬಿ.ಜೆ.ಪಿ. ಯವರ ಮರಳು ಮಾತುಗಳಿಗೆ ಬಲಿಯಾಗಬಾರದು. ಸಂಬಂಧಪಟ್ಟ ಸಚಿವರಾದ ಪ್ರಹ್ಲಾದ್ ಜೋಶಿಯವರು ಏಕೆ ರೈತರ ಪ್ರತಿಭಟನಾ ಸಭೆಗೆ ಹೋಗಿಲ್ಲ” ಎಂದು ಪ್ರಶ್ನಿಸಿದರು.

“ಕಳೆದ ಕೆಲವು ದಿನಗಳಿಂದ ಬೆಳಗಾವಿ, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ನನಗೆ ಸ್ಪಷ್ಟ ಮಾಹಿತಿ ಇದೆ. ಹಾಗಾಗಿ ನಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮತ್ತು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಇಲಾಖೆಯ ಆಯುಕ್ತರಿಗೆ ಸೂಚನೆಗಳನ್ನು ನೀಡಿ ರೈತರು ಹಾಗೂ ಕಾರ್ಖಾನೆಗಳ ಮಾಲೀಕರ ಜೊತೆ ಚರ್ಚೆ ನಡೆಸುವಂತೆ ಸೂಚಿಸಲಾಗಿತ್ತು. ಅದರಂತೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿ ಶೇ. 11.25 ರಿಕವರಿ ಬಂದರೆ 3,200 ರೂ. ಹಾಗೂ ಶೇ.10.25 ರಿಕವರಿ ಬಂದರೆ 3100 ರೂ. ಗಳನ್ನು (ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) ಪಾವತಿಸುವಂತೆ ಕಾರ್ಖಾನೆಗಳ ಮಾಲೀಕರಿಗೆ ಮನವೊಲಿಸಿದ್ದಾರೆ. ಹಾಗೆಯೇ, ರೈತರಿಗೂ ಮನವೊಲಿಸುವ ಕೆಲಸ ಮಾಡಿದ್ದಾರೆ” ಎಂದರು.

ಅತ್ತ ಮತ್ತಷ್ಟು ಅಕ್ರೋಶಗೊಂಡ ಪ್ರತಿಭಟನಕಾರರು, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರ ಅಣಕು ಶವಯಾತ್ರೆ ನಡೆಸಿದರು. ‘ಸತ್ತುಹೋದ ಸಕ್ಕರೆ ಸಚಿವ’ ಎಂಬ ಬ್ಯಾನರ್ ಹಾಕಿ, ಬಾಯಿ ಬಾಯಿ ಬಡಿದುಕೊಂಡು ಅತ್ತರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...