ಮೇಕೆದಾಟು | ಹಿಂದಿನ ಡಿಪಿಆರ್ ಪರಿಷ್ಕರಿಸಿ ಕೇಂದ್ರಕ್ಕೆ ಸಲ್ಲಿಸುತ್ತೇವೆ: ಡಿ ಕೆ ಶಿವಕುಮಾರ್

Date:

ಮೇಕೆದಾಟು ಯೋಜನೆಗೆ ಪರಿಸ್ಕೃತ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮ ನಿರ್ದೇಶಕರ ಮಂಡಳಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ರಾತ್ರಿ ಪ್ರತಿಕ್ರಿಯೆ ನೀಡಿದರು.

“ಕಾವೇರಿ ನೀರಾವರಿ ನಿಗಮ ಮಂಡಳಿ ಸಭೆ ಮಾಡಲಾಗಿದೆ. ಇದಕ್ಕೆ ಮೊದಲು, ಮೇಕೆದಾಟು ಯೋಜನೆ ಕುರಿತ ಸುಪ್ರೀಂ ಕೋರ್ಟ್ ತೀರ್ಪು ನಂತರ ಈ ಯೋಜನೆಯನ್ನು ಹೇಗೆ ಮುಂದಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಚರ್ಚೆ ಮಾಡಿದ್ದೇವೆ. ಡಿಪಿಆರ್ ಅನ್ನು ಪರಿಸ್ಕರಿಸಿ ಸಲ್ಲಿಸಬೇಕಿದೆ. ಇದರಲ್ಲಿ ಯೋಜನೆ ಸಂಪೂರ್ಣ ವಿವರ, ಎಷ್ಟು ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂದು ಮಾಹಿತಿ ನೀಡಬೇಕು. ಮೇಕೆದಾಟು ಯೋಜನೆ ಕಚೇರಿಯನ್ನು ಹಾರೋಬೆಲೆಯಲ್ಲಿ ಆರಂಭಿಸಿದ್ದೇವೆ. ಮಂಡ್ಯಕ್ಕೆ ಹತ್ತಿರವಾಗುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸಿಇ, ಸಿಸಿಎಫ್ ಅವರನ್ನೊಳಗೊಂಡ ಪ್ರತ್ಯೇಕ ಕಚೇರಿ ಆರಂಭಿಸಲು ತೀರ್ಮಾನಿಸಿದ್ದೇವೆ. ಇದಕ್ಕೆ ಅಗತ್ಯ ಸಿಬ್ಬಂದಿ ಒದಗಿಸಲು ತಯಾರು ಮಾಡಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೆ ಹೊಸದಾಗಿ ಡಿಪಿಆರ್ ಮಾಡಬೇಕೇ, ಇದನ್ನು ಜಲ ಆಯೋಗದ ಮುಂದೆ ಮಂಡಿಸುವಿರಾ ಅಥವಾ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮಂಡಿಸುತ್ತೀರಾ ಎಂದು ಕೇಳಿದಾಗ, “ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ಅನ್ನು ಚಾಲ್ತಿ ದರಗಳಿಗೆ ಪರಿಸ್ಕರಿಸಿ ಸಲ್ಲಿಸುತ್ತೇವೆ. ಕಾನೂನು ಪ್ರಕಾರ ಯಾರ ಮುಂದೆ ಮಂಡಿಸಬೇಕೋ ಅವರ ಮುಂದೆ ಮಂಡಿಸುತ್ತೇವೆ” ಎಂದರು.

ಮತ್ತೆ ದೆಹಲಿಗೆ ಪ್ರಯಾಣ ಬೆಳೆಸುವಿರಾ ಎಂದು ಕೇಳಿದಾಗ, “ಸದ್ಯಕ್ಕೆ ದೆಹಲಿಗೆ ಹೋಗುವ ಯಾವ ಆಲೋಚನೆಯೂ ಇಲ್ಲ” ಎಂದು ತಿಳಿಸಿದರು.

ತುಮಕೂರಿಗೆ ಮೆಟ್ರೋ ಸಾಧ್ಯತೆಗಳ ಬಗ್ಗೆ ಅಧ್ಯಯನ

ತುಮಕೂರು ಮೆಟ್ರೋ ಮಾರ್ಗಕ್ಕೆ ವಿರೋಧ ವ್ಯಕ್ತವಾಗುತ್ತಿದೆ ಎಂದು ಕೇಳಿದಾಗ, “ಅಲ್ಲಿನ ಜನಪ್ರತಿನಿಧಿಗಳು ನನ್ನ ಬಳಿ ಬಂದು ಮನವಿ ಮಾಡಿದಾಗ ನಾನು ಅದರ ಸಾಧ್ಯತೆಗಳ ಬಗ್ಗೆ ತಿಳಿಯಲು ಮುಂದಾಗಿದ್ದೇವೆ. ಇದರಲ್ಲಿ ಟೀಕೆ ಮಾಡುವಂತಹದ್ದು ಏನಿದೆ? ನಮ್ಮ ಗೃಹ ಸಚಿವರು ಸೇರಿದಂತೆ ಕೆಲವರು ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ಇದಕ್ಕೆ ಯಾರಾದರೂ ಬಂಡವಾಳ ಹಾಕಲು ಮುಂದೆ ಬರುತ್ತಾರಾ? ಬಂದರೆ ಯಾವೆಲ್ಲಾ ಮಾರ್ಗ ಇವೆ ಎಂದು ಅಧ್ಯಯನ ಮಾಡಬೇಕಿದೆ. ಯಾರಾದರೂ ಚಂದ್ರಲೋಕಕ್ಕೆ ಹೋಗಬೇಕು ಎಂದರೆ ಅದು ಸಾಧ್ಯವೇ, ಇಲ್ಲವೇ ಎಂದು ಪರಿಶೀಲಿಸಬೇಕಲ್ಲವೇ” ಎಂದು ಹೇಳಿದರು.

ಎರಡನೇ ಏರ್ ಫೋರ್ಟ್ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಕೇಂದ್ರಕ್ಕೆ ವರದಿ ಸಲ್ಲಿಸಿದ್ದೇವೆ. ಕಾದು ನೋಡೋಣ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...