ಮುಟ್ಟಿನ ರಜೆ | ಸರ್ಕಾರದ ಶೋಕಾಸ್‌ ನೋಟಿಸ್‌ಗೆ ಹೈಕೋರ್ಟ್ ಕಿಡಿ

Date:

ರಾಜ್ಯದ ಮಹಿಳಾ ನೌಕರರಿಗೆ ನೀಡಲಾಗುವ ವೇತನ ಸಹಿತ ‘ಮುಟ್ಟಿನ ರಜೆ’ ನಿಯಮವನ್ನು ಜಾರಿಗೊಳಿಸದ ಉದ್ಯೋಗದಾತರಿಗೆ ಕಾರಣ ಕೇಳಿ ರಾಜ್ಯ ಸರ್ಕಾರ ಶೋಕಾಸ್ ನೋಟಿಸ್ ನೀಡುತ್ತಿದೆ. ಸರ್ಕಾರದ ಈ ನಡೆಗೆ ಹೈಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿದೆ. ನೋಟಿಸ್‌ ನೀಡದಂತೆ ಮೌಖಿಕವಾಗಿ ಎಚ್ಚರಿಕೆ ನೀಡಿದೆ.

2025ರ ನವೆಂಬರ್ 20ರಂದು ರಾಜ್ಯ ಕಾರ್ಮಿಕ ಇಲಾಖೆಯು ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವಂತೆ ಅಧಿಸೂಚನೆ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ‘ಬೆಂಗಳೂರು ಹೋಟೆಲ್‌ಗಳ ಸಂಘ’ದ ಅಧ್ಯಕ್ಷ ಎಚ್.ಎಸ್. ಸುಬ್ರಹ್ಮಣ್ಯ ಮತ್ತು ಇತರ ಉದ್ಯಮಿಗಳು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.

ವಿಚಾರಣೆಯ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಬಿ.ಕೆ. ಪ್ರಶಾಂತ್, “ಋತುಚಕ್ರದ ರಜೆ ನೀಡುವ ನೀತಿಯು ಹೋಟೆಲ್ ಮತ್ತು ಇತರ ಸೇವಾ ಉದ್ಯಮಗಳ ಹಿತಾಸಕ್ತಿಗೆ ವಿರುದ್ಧವಾಗಿದೆ. ಉದ್ಯಮಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಪ್ರಕರಣವು ನ್ಯಾಯಾಲಯದ ವಿಚಾರಣೆಯ ಹಂತದಲ್ಲಿರುವಾಗಲೇ, ರಜೆ ನೀಡದ ಉದ್ಯೋಗದಾತರಿಗೆ ಸರ್ಕಾರ ಷೋಕಾಸ್ ನೋಟಿಸ್ ನೀಡುತ್ತಿದೆ. ಇದು ಉದ್ಯಮ ನಡೆಸಲು ತೀವ್ರ ಅಡಚಣೆ ಉಂಟುಮಾಡುತ್ತಿದೆ” ಎಂದು ವಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರೆದು, “ಸರ್ಕಾರವು ಮಹಿಳಾ ನೌಕರರ ರಕ್ಷಣೆಯ ನೆಪದಲ್ಲಿ ಕೆಲಸಗಾರರು ಮತ್ತು ಉದ್ಯೋಗದಾತರ ನಡುವೆ ಸಮತೋಲನ ಕಾಯ್ದುಕೊಳ್ಳುವಲ್ಲಿ ವಿಫಲವಾಗಿದೆ” ಎಂದು ದೂರಿದ್ದಾರೆ.

ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ರವಿವರ್ಮ ಕುಮಾರ್, “ಸರ್ಕಾರದ ಅಧಿಸೂಚನೆಯಲ್ಲಿ ಉದ್ಯೋಗದಾತರಿಗೆ ತೊಂದರೆಯಾಗುವ ಯಾವುದೇ ಅಂಶಗಳಿಲ್ಲ. ಅಲ್ಲದೆ, ಮಾಹಿತಿಯ ಪ್ರಕಾರ ಈವರೆಗೆ ಯಾರೊಬ್ಬರಿಗೂ ಇಂತಹ ನೋಟಿಸ್ ಜಾರಿಯಾಗಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯವು,  “ಪ್ರಕರಣವು ವಿಚಾರಣಾ ಹಂತದಲ್ಲಿರುವಾಗ ಉದ್ಯೋಗದಾತರ ವಿರುದ್ಧ ಬಲವಂತದ ಕ್ರಮಗಳನ್ನು ಕೈಗೊಳ್ಳಬಾರದು. ಒಂದು ವೇಳೆ ಸರ್ಕಾರವು ಷೋಕಾಸ್ ನೋಟಿಸ್ ನೀಡುವುದನ್ನು ಮುಂದುವರಿಸಿದರೆ, ಅಂತಹ ನೋಟಿಸ್‌ಗಳಿಗೆ ನ್ಯಾಯಾಲಯವು ತಡೆ ನೀಡಬೇಕಾಗುತ್ತದೆ” ಎಂದು ಮೌಖಿಕವಾಗಿ ಎಚ್ಚರಿಸಿದೆ.

ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...