ತುಮಕೂರಿಗೆ ಮೆಟ್ರೋ ಯೋಜನೆ | ಬೆಂಗಳೂರು ಮೇಲಿನ ಒತ್ತಡ ಕಡಿಮೆ: ಸಚಿವ ಪರಮೇಶ್ವರ್

Date:

ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಗೃಹ ಸಚಿವ ಡಾ‌. ಜಿ.ಪರಮೇಶ್ವರ್ ಅವರು ಹೇಳಿದರು.

ಬೆಂಗಳೂರು ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರತಿನಿತ್ಯ ತುಮಕೂರಿನಿಂದ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ನೆಲಮಂಗಲ, ದಾಬಸ್‌ಪೇಟೆ, ಕ್ಯಾತ್ಸಂದ್ರ ಭಾಗ ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆ ಉದ್ದೇಶದಿಂದ ಜನರ ಜೀವನ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಒತ್ತಡ ಜಾಸ್ತಿ ಇದೆ. ನೀರಿಗೆ ಕಷ್ಟ, ಓಡಾಡೋಕೆ ಟ್ರಾಫಿಕ್ ಸಮಸ್ಯೆ ಇದೆಲ್ಲ ನೋಡಿಕೊಂಡು ಆ ಕಡೆ ಜೀವನ ನಡೆಸುತ್ತಿದ್ದಾರೆ” ಎಂದರು.

“ತುಮಕೂರಿನಲ್ಲಿ 20 ಸಾವಿರ ಎಕರೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಿಸಲಾಗಿದೆ. ಈಗಾಗಲೇ 200 ಕೈಗಾರಿಕೆಗಳು ಬಂದಿವೆ. ಫುಡ್‌ಪಾರ್ಕ್, ಟೈಮೆಕ್ ಜಪಾನೀಸ್ ಫ್ಯಾಕ್ಟರಿ, ಜಪನೀಸ್ ಟೌನ್‌ಶಿಪ್‌ಗೆ ಜಾಗ ಕೊಟ್ಟಿದ್ದೇವೆ. ಇಷ್ಟು ವೇಗವಾಗಿ ಬೆಳೆಯುತ್ತಿರುವಾಗ ಸಂಪರ್ಕ (ಕನೆಕ್ಟಿವಿಟಿ) ವ್ಯವಸ್ಥೆ ಬೇಕಲ್ಲವೇ ಎಂದು ಪ್ರಶ್ನಿಸಿದ ಅವರು, ರಸ್ತೆ, ಮೆಟ್ರೋ, ರೈಲು ಸಂಪರ್ಕ ಇದ್ದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂಬುದು ಉದ್ದೇಶ. ರಾಮನಗರ, ಕೋಲಾರ, ತುಮಕೂರು ನಗರಗಳನ್ನು ಬೆಳೆಸಿದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ” ಎಂದು ಹೇಳಿದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎರಡು ವರ್ಷದ ಹಿಂದೆಯೇ ತುಮಕೂರಿಗೆ ಮೆಟ್ರೋ ಯೋಜನೆ ತೆಗೆದುಕೊಂಡು ಹೋಗಬೇಕು ಎಂದು ಪ್ರಸ್ತಾಪ ಮಾಡಿದ್ದೆ. ಮಾನ್ಯ ಮುಖ್ಯಮಂತ್ರಿಗಳು ಫಿಸಿಬಲಿಟಿ ಸ್ಟಡಿ ಮಾಡುವುದಾಗಿ 2024ರ ಬಜೆಟ್‌ನಲ್ಲಿ ಘೋಷಿಸಿದ್ದರು. ಫಿಸಿಬಲಿಟಿ ವರದಿಯಲ್ಲಿ ತುಮಕೂರು ಮೆಟ್ರೋ ಯೋಜನೆ ಬಗ್ಗೆ ಪಾಸಿಟಿವ್ ಆಗಿ ಕೊಟ್ಟಿದ್ದಾರೆ. ಎಲ್ಲರೊಂದಿಗೆ ಚರ್ಚೆ ಮಾಡಿ ಡಿಪಿಆರ್ ಮಾಡಲು ಅನುಮತಿ ಕೊಟ್ಟಿದ್ದಾರೆ” ಎಂದರು‌.

“ಎರಡು-ಮೂರು ಕಂಪನಿಗಳು ಪಿಪಿಪಿ ಮಾದರಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿವೆ. ಹೂಡಿಕೆ ಮಾಡಲು ಸಿದ್ಧರಿದ್ದೇವೆ ಎಂಬುದಾಗಿ ಕತಾರ್ ಮೂಲದ ಕಂಪನಿಯವರು ಮುಖ್ಯಮಂತ್ರಿಯವರಿಗೆ ಅಧಿಕೃತವಾಗಿ ಪತ್ರ ನೀಡಿದ್ದಾರೆ. ಇಷ್ಟೆಲ್ಲ ಆಗಿರುವಾಗ, ಸಂಸದ ತೇಜಸ್ವಿ ಸೂರ್ಯ ಏನು ಅರಿಯದೆ, ಯಾವ ಉದ್ದೇಶಕ್ಕಾಗಿ ಆ ರೀತಿಯಾಗಿ ಮಾತಾಡಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ‌. ಈ ಬಗ್ಗೆ ನಾನು ಅವರೊಂದಿಗೆ ಮಾತಾಡುತ್ತೇನೆ‌. ಇದು ಸಂಘರ್ಷದ ಪ್ರಶ್ನೆಯಲ್ಲ. ‘ನಮಗೆ ಬೇಕು, ನಿಮಗೆ ಬೇಡ. ನಮಗೆ ಬೇಡ, ನಿಮಗೆ ಬೇಕು’ ಎಂಬ ಪ್ರಶ್ನೆಯೂ ಅಲ್ಲ. ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ನಾವು ಯೋಚನೆ ಮಾಡಬೇಕು‌ ಎಂದು ಹೇಳಿದರು.

“ನಾವು ಅಧಿಕಾರದಲ್ಲಿದ್ದಾಗ ಒಂದು ಹೇಳಬಹುದು. ಮತ್ತೊಬ್ಬರು ಅಧಿಕಾರದಲ್ಲಿದ್ದಾಗ ಮತ್ತೊಂದು ಹೇಳಬಹುದು. ಆ ರೀತಿ ಆದರೆ ರಾಜ್ಯ ಬೆಳೆಯುವುದಿಲ್ಲ. ಕರ್ನಾಟಕ ಪ್ರಗತಿಯ ರಾಜ್ಯ‌. ಎಲ್ಲರೂ ನಮ್ಮ ರಾಜ್ಯದ ಕಡೆ ನೋಡುತ್ತಿದ್ದಾರೆ. ನಾನು ಅನೇಕ ದೇಶಗಳಿಗೆ ಹೋಗಿದ್ದೇನೆ. ಟೋಕಿಯೋದಲ್ಲಿ ನರೀಟ ಏರ್‌ಪೋರ್ಟ್ 70 ಕಿ.ಮೀ. ದೂರದಲ್ಲಿದೆ. ಮಲೇಷ್ಯಾದಲ್ಲಿ ಕೌಲಲಾಂಪುರಗೆ 20 ನಿಮಿಷದಲ್ಲಿ ಹೋಗುತ್ತಾರೆ. ಆ ರೀತಿ ಪಾಸಿಟಿವ್ ಆಗಿ ಯೋಚಿಸಬೇಕು. ನೆಗಿಟಿವ್ ಆಗಿ ಯೋಚಿಸಬೇಕಿಲ್ಲ” ಎಂದರು.

“ನಾನು ಏಕಾಏಕಿಯಾಗಿ ಬಿಜೆಪಿಯವರು ಅಭಿವೃದ್ಧಿಗೆ ವಿರುದ್ಧವಾಗಿದ್ದಾರೆ ಎಂದು ಹೇಳಲು ಹೋಗುವುದಿಲ್ಲ. ಅವರ ನಡೆದುಕೊಳ್ಳುವ ರೀತಿಯ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ. ಕರ್ನಾಟಕ ಅಭಿವೃದ್ಧಿಯಾಗಬೇಕು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇಂಜಿನಿಯರಿಂಗ್, ಮೆಡಿಕಲ್ ಓದಲು ಕರ್ನಾಟಕಕ್ಕೆ ಬರುತ್ತಾರೆ? ಬೇರೆಬೇರೆ ರಾಜ್ಯಗಳಲ್ಲಿ ಇಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜುಗಳಿವೆ. ಅಲ್ಲಿಗೆ ಯಾಕೆ ಓದಲು ಹೋಗುವುದಿಲ್ಲ ಎಂದು ಪ್ರಶ್ನಿಸಿದ ಅವರು, ಕರ್ನಾಟಕದಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತದೆ. ಅಂತಾರಾಷ್ಟ್ರೀಯ ಮಟ್ಟಕ್ಕೆ ಶಿಕ್ಷಣ ಸಿಗುತ್ತಿದೆ ಎಂದು ಬರುತ್ತಿದ್ದಾರೆ. ಕರ್ನಾಟಕದ ಬೆಳವಣಿಗೆಯ ದೃಷ್ಟಿಯಿಂದ ನಾವು ನೋಡಬೇಕೆ ಹೊರತು, ಬೇರೆ ವಿಚಾರಗಳಿಂದಲ್ಲ” ಎಂದು ಹೇಳಿದರು‌.

ಸಂಪುಟ ಪುನರ್ ರಚನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಾನು ಇನ್ನು ಮುಖ್ಯಮಂತ್ರಿಗಳ ಜೊತೆ ಮಾತನಾಡಿಲ್ಲ. ದೆಹಲಿ ಭೇಟಿ ವೇಳೆ ಏನು ಮಾಡಿಕೊಂಡು ಬಂದ್ದಿದ್ದಾರೆ ಎಂದು ತಿಳಿದುಕೊಂಡು ನಿಮಗೆ ಹೇಳುತ್ತೇನೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ‌ ಮೇಲೆ ವಿಷಯ ಗೊತ್ತಾಗುತ್ತದೆ. ಮಾತಾಡದೆನೇ ಹೇಳಿದರೆ ಸರಿ ಇರುವುದಿಲ್ಲ” ಎಂದರು.

“ಮಹಿಳೆಯೊಬ್ಬರಿಗೆ ಕಳೆದ ಒಂದು ವರ್ಷದಿಂದ ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿದ್ದಾರೆ. ಸುಮಾರು 187 ಬಾರಿ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಯಾಗಿದೆ. ಇಷ್ಟೆಲ್ಲ ವಂಚನೆಯಾದ ಬಳಿಕ ಎಚ್ಚೆತ್ತುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ ಎಂದರೆ, ಸೈಬರ್ ವಂಚಕರು ಎಷ್ಟರ ಮಟ್ಟಿಗೆ ಹೆದರಿಸಬಹುದು. ಈ ಪ್ರಕರಣವನ್ನೂ ಗಂಭೀರವಾಗಿ ಪರಿಗಣಿಸಿದ್ದೇವೆ. ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದ ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಇದೇ‌ ಮೊದಲು. ಬೆಂಗಳೂರಿನಲ್ಲಿದ್ದುಕೊಂಡು ಅಮೆರಿಕಾದಲ್ಲಿದ್ದವರಿಗೆ ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಮಾಡಿರುವ ಪ್ರಕರಣಗಳ ಆರೋಪಿಗಳನ್ನು ಪತ್ತೆ ಹಚ್ಚಿದ್ದೇವೆ. ಈ ಪ್ರಕರಣವನ್ನು ಪತ್ತೆಹಚ್ಚುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...