ಪೊಲೀಸರ ರಕ್ಷಣೆಯಲ್ಲೇ ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಜನರಿಗೆ ತೊಂದರೆ: ಪ್ರಲ್ಹಾದ ಜೋಶಿ

Date:

ಫೈನಾನ್ಸ್ ಕಂಪನಿಗಳು ಸಾಲಗಾರರಿಗೆ ಪೊಲೀಸರ ರಕ್ಷಣೆ ಪಡೆದೇ ತೊಂದರೆ ಕೊಡುತ್ತಿವೆ ಎಂಬ ಮಾಹಿತಿ ಇದೆ. ಆದರೆ, ನಾನು ಪೊಲೀಸರ ಮೇಲೆ ಆರೋಪ ಮಾಡುವುದಿಲ್ಲ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿರುವುದರಿಂದಲೇ ಇದೆಲ್ಲವೂ ಆಗುತ್ತಿದೆ. ಜನರಿಗೆ ಕಿರುಕುಳ ನೀಡುವ ಪ್ರಕರಣಗಳು ನಡೆಯುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ದೂರಿದರು.

ನವದೆಹಲಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನೋಂದಾಯಿತ ಮೈಕ್ರೊ ಫೈನಾನ್ಸ್ ಕಂಪನಿಗಳು ಮಾತ್ರವೇ ಆರ್‌ಬಿಐ ಮಾರ್ಗಸೂಚಿಗೆ ಒಳಪಡುತ್ತವೆ ಎಂಬುದನ್ನು ರಾಜ್ಯ ಸರ್ಕಾರ ಗಮನಿಸಬೇಕು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಮುಖ್ಯಮಂತ್ರಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ನಿಯಮಗಳನ್ನು ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದಲ್ಲಿ ಏನೇ ನಡೆದರೂ ಅದಕ್ಕೆಲ್ಲಾ ಹಿಂದಿನ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಹಾಕುವ ಕೆಲಸವನ್ನು ಕಾಂಗ್ರೆಸ್‌ನವರು ಮಾಡುತ್ತಲೇ ಬಂದಿದ್ದಾರೆ. ಮಳೆ ಹೆಚ್ಚಾದರೂ, ಕಡಿಮೆಯಾದರೂ ಕೇಂದ್ರ ಹಾಗೂ ರಾಜ್ಯ ಬಿಜೆಪಿಯೇ ಕಾರಣ ಎನ್ನುತ್ತಾರೆ. ಇಂತಹ ಬಾಲಿಶ ಹೇಳಿಕೆಗಳನ್ನು ಕೊಡುವುದನ್ನು ಬಿಡಬೇಕು. ಅವರಿಗೆ ಜನರು ಅಧಿಕಾರ ಕೊಟ್ಟಿದ್ದಾರೆ, ಒಳ್ಳೆಯ ಕೆಲಸಗಳನ್ನು ಮಾಡಲಿ. ಅದನ್ನು ಬಿಟ್ಟು ಈ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಕಾಂಗ್ರೆಸ್ ನಾಯಕರು ಕುರ್ಚಿ ಜಗಳದಲ್ಲಿ ನಿರತರಾಗಿದ್ದಾರೆ’
ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಪೊಲೀಸರಿಗೆ ಅಧಿಕಾರ ಕೊಟ್ಟು ಅದರಲ್ಲಿ ಭ್ರಷ್ಟಾಚಾರ ಆಗಬಾರದು. ಸಮಿತಿ ರಚಿಸಿದರೆ ಅದಕ್ಕೆ ಪ್ರಾಮಾಣಿಕ ಅಧಿಕಾರಿಗಳನ್ನು ನೇಮಿಸಿ ಮೇಲ್ವಿಚಾರಣೆ ಮಾಡಬೇಕು. ಸಾಲಕ್ಕೆ ಇಂತಿಷ್ಟೆ ಬಡ್ಡಿ ವಿಧಿಸಬೇಕು ಎಂಬುದು ಆರ್‌ಬಿಐ ಮಾರ್ಗಸೂಚಿಯಲ್ಲಿದೆ. ಆದರೆ, ನೋಂದಾಯಿಸದ ಫೈನಾನ್ಸ್ ಕಂಪನಿಗಳು ಸಾಕಷ್ಟಿವೆ. ಅವುಗಳನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು’ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

‘ಮುಡಾ ಪ್ರಕರಣದಲ್ಲಿ ಏನಾದರೂ ಮಾಡಿ ತಪ್ಪಿಸಿಕೊಳ್ಳಬೇಕೆಂದು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ರಾಜ್ಯಪಾಲರ ಆದೇಶದ ವಿರುದ್ಧವಾಗಿ ಹೈಕೋರ್ಟ್‌ಗೆ ಹೋದರು. ಆದರೆ, ರಾಜ್ಯಪಾಲರ ನಡೆಯನ್ನು ಹೈಕೋರ್ಟ್‌ ತಪ್ಪು ಎನ್ನಲಿಲ್ಲ. ಆದರೂ ಸಿದ್ದರಾಮಯ್ಯ ಅನೈತಿಕವಾಗಿ ಅಧಿಕಾರದಲ್ಲಿ ಮುಂದುವರಿದಿದ್ದಾರೆ’ ಎಂದು ಆರೋಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...