28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಸಚಿವರ ನೇಮಕ; ಎಂ ಬಿ ಪಾಟೀಲ್‌, ಜಾರ್ಜ್‌ಗಿಲ್ಲ ಜವಾಬ್ದಾರಿ

Date:

  • ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ
  • ಸಂಭಾವ್ಯ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸಿ, ವರದಿ ನೀಡಲು ಸೂಚನೆ

ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪಕ್ಷದ ಎಲ್ಲ ಹಂತಗಳ ಮುಖಂಡರುಗಳನ್ನು ಸಂಪರ್ಕಿಸಿ ಸಭೆಗಳನ್ನು ಆಯೋಜಿಸಿ, ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ವರದಿ ನೀಡಲು 28 ಲೋಕಸಭಾ ಕ್ಷೇತ್ರಗಳಿಗೂ ಸಚಿವರನ್ನು ವೀಕ್ಷಕರನ್ನಾಗಿ ಕಾಂಗ್ರೆಸ್‌ ನೇಮಕ ಮಾಡಿದೆ.

ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ 28 ಲೋಕಸಭಾ ಕ್ಷೇತ್ರಗಳಿಗೂ ಯಾವ ಯಾವ ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ ಎಂಬುದರ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ ವೀಕ್ಷಕರಾಗಿ ನೇಮಕವಾದ ಸಚಿವರನ್ನು ತಮ್ಮ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಿ ಅನುದಾನಿತ ಉತ್ಸವಗಳೆಲ್ಲ ಸರಳಗೊಳ್ಳಲಿ

ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರನ್ನು ಬಾಗಲಕೋಟೆ, ಡಾ. ಜಿ ಪರಮೇಶ್ವರ್‌ ಅವರನ್ನು ಬೆಂಗಳೂರು ಉತ್ತರ, ಸತೀಶ್‌ ಜಾರಕಿಹೊಳಿ ಅವರನ್ನು ವಿಜಯಪುರ, ಎಚ್‌ ಸಿ ಮಹದೇವಪ್ಪರನ್ನು ಚಿತ್ರದುರ್ಗ, ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಧಾರವಾಡ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನಾಗಿ ಡಿಕೆ ಶಿವಕುಮಾರ್ ನೇಮಕ ಮಾಡಿದ್ದಾರೆ.

ಹಾಗೆಯೇ ಚಾಮರಾಜನಗರಕ್ಕೆ ದಿನೇಶ್‌ ಗುಂಡೂರಾವ್‌, ಕೋಲಾರಕ್ಕೆ ರಾಮಲಿಂಗಾರೆಡ್ಡಿ, ಉತ್ತರ ಕನ್ನಡಕ್ಕೆ ಎಚ್‌ ಕೆ ಪಾಟೀಲ, ದಾವಣಗೆರೆಗೆ ಈಶ್ವರ ಖಂಡ್ರೆ, ಹಾವೇರಿಗೆ ಎಸ್‌ ಎಸ್‌ ಮಲ್ಲಿಕಾರ್ಜುನ, ಹಾಸನಕ್ಕೆ ಎನ್‌ ಚಲುವರಾಯಸ್ವಾಮಿ, ತುಮಕೂರಿಗೆ ಕೃಷ್ಣಭೈರೇಗೌಡ, ಚಿಕ್ಕಬಳ್ಳಾಪುರಕ್ಕೆ ಜಮೀರ್‌ ಅಹಮದ್‌ ಖಾನ್‌ ವೀಕ್ಷಕರಾಗಿ ನೇಮಕವಾಗಿದ್ದಾರೆ.

ಸಚಿವರಾದ ಎಂ ಬಿ ಪಾಟೀಲ್, ರಹೀಂ ಖಾನ್‌, ಶರಣಬಸಪ್ಪ ದರ್ಶನಾಪುರ ಹಾಗೂ ಕೆ ಜೆ ಜಾರ್ಜ್‌ ಅವರಿಗೆ ಸದ್ಯಕ್ಕೆ ಯಾವುದೇ ಜವಾಬ್ದಾರಿ ನೀಡಿರುವುದಿಲ್ಲ.

ಲೋಕಸಭೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...