ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರ: ಸಚಿವ ಬೈರತಿ ಸುರೇಶ್ ಆರೋಪ

Date:

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಯಡಿಯೂರಪ್ಪ ಅವರ ಸಾವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂಬ ಅನುಮಾನವಿದೆ. ಅವರ ಸಾವಿನ ಬಗ್ಗೆಯೂ ತನಿಖೆ ಆಗಬೇಕು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಆರೋಪಿಸಿದ್ದಾರೆ.

ಮುಡಾ ಕಡತಗಳನ್ನು ಬೈರತಿ ಸುರೇಶ್‌ ಸುಟ್ಟು ಹಾಕಿದ್ದಾರೆ ಎಂಬ ಶೋಭಾ ಕರಂದ್ಲಾಜೆ ಆರೋಪಕ್ಕೆ ಭಾನುವಾರ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಅವರು ” ಶೋಭಾ ಕರಂದ್ಲಾಜೆ ಅವರ ಬಗ್ಗೆ ಹೆಚ್ಚಾಗಿ ಮಾತನಾಡುವುದಿಲ್ಲ. ಕೇಂದ್ರ ಸಚಿವರು ಹೇಳಿದಾಕ್ಷಣ ಇಡಿ ಬಂಧಿಸಲು ಸಾಧ್ಯವೇ? ನಾನು ಈ ನೆಲದ ಕಾನೂನಿನ ಬಗ್ಗೆ ಗೌರವ ಉಳ್ಳವನು. ಸಿಬಿಐ, ಇ.ಡಿ, ಪೊಲೀಸ್‌, ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅತ್ಯಂತ ಹೆಚ್ಚು ವಿಶ್ವಾಸವಿದೆ,” ಎಂದು ತಿಳಿಸಿದರು.

ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರ ಇದೆ ಎಂದು ನನಗೆ ಅನುಮಾನ ಇದೆ. ರಾಜ್ಯ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಳ್ಳೆಯವರು. ಅವರ ಮಕ್ಕಳು  ಕೂಡ ಒಳ್ಳೆಯವರು. ಹಾಗಾದರೆ, ಯಡಿಯೂರಪ್ಪನವರ ಪತ್ನಿ ಮೈತ್ರಾ ದೇವಿ ಅವರ ಸಾವು ಹೇಗಾಯ್ತು. ಆ ಸಾವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಾತ್ರ ಇರುವ ಬಗ್ಗೆ ನನಗೆ ಅನುಮಾನ ಇದೆ. ಅವರ ಸಾವಿನ ಬಗ್ಗೆ ತನಿಖೆ ಆಗಬೇಕು. ಸಚಿವೆ ಶೋಭಾ ಕರಂದ್ಲಾಜೆ ಅವರ ಬಂಧನ ಆಗಬೇಕು. ಕೂಡಲೇ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ಮೂಲಕ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಚಿವ ಬೈರತಿ ಸುರೇಶ್ ಅವರನ್ನು ಬಂಧಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದ ಮಾತಿಗೆ ವೈಯಕ್ತಿಕವಾಗಿಯೇ ತಿರುಗೇಟು ನೀಡಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೋಪಾಲ್ ಜೋಶಿ ಪ್ರಕರಣ ಮತ್ತು ಮಾರಿಕೊಂಡ ಮಾಧ್ಯಮಗಳು

”ಈ ರೀತಿ ಗಾಳಿಯಲ್ಲಿ ಗುಂಡು ಹೊಡೆಯುವುದು ಸರಿಯಲ್ಲ. ಆ ರೀತಿ ಮಾತನಾಡುವುದಾದರೆ ನಾನೂ ಹೇಳುತ್ತೇನೆ. 20 ವರ್ಷಗಳ ಹಿಂದೆ ಯಡಿಯೂರಪ್ಪನವರ ಪತ್ನಿ ಮೈತ್ರಾದೇವಿ ಸಾವು ಹೇಗಾಯಿತು ಎಂದು ಕೇಳುತ್ತೇನೆ. ಯಡಿಯೂರಪ್ಪನವರು ಹಾಗೂ ಅವರ ಮಕ್ಕಳು ಒಳ್ಳೆಯವರು. ಆದರೆ ಮೈತ್ರಾದೇವಿ ಸಾವು ಹೇಗಾಯಿತು ಎಂಬ ಬಗ್ಗೆ ಕೂಲಂಕಷ ಚರ್ಚೆ, ತನಿಖೆಯಾಗಬೇಕು. ಮೈತ್ರಾದೇವಿ ಅವರ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂದು ಹೇಳುತ್ತೇನೆ. ಕೂಡಲೇ ಶೋಭಾ ಕರಂದ್ಲಾಜೆ ಅವರನ್ನು ಬಂಧಿಸಬೇಕು. ಈ ಬಗ್ಗೆ ರಾಜ್ಯ ಸರ್ಕಾರ, ಮುಖ್ಯಮಂತ್ರಿ, ಗೃಹ ಸಚಿವರು ತೀರ್ಮಾನಿಸಬೇಕು,” ಎಂದು ಹೇಳಿದರು.

ಬೈರತಿ ಮೇಲೆ ಆರೋಪಿಸಿದ್ದ ಶೋಭಾ

‘‘ಮುಡಾ ಹಗರಣ ಬಯಲಾಗುತ್ತಿದ್ದಂತೆ ಮುಡಾ ಕಚೇರಿಗೆ ತರಾತುರಿಯಲ್ಲಿ ತೆರಳಿದ ಸಚಿವ ಬೈರತಿ ಸುರೇಶ್‌ ಅವರು 1997ರಿಂದ ಕಚೇರಿಯಲ್ಲಿದ್ದ ಕಡತಗಳನ್ನು ಎತ್ತಿಕೊಂಡು ಬಂದು ಸುಟ್ಟು ಹಾಕಿದ್ದಾರೆ,’’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದರು. ಬೈರತಿ ಸುರೇಶ್‌ ಅವರನ್ನು ಬಂಧಿಸಿದರೆ ಮುಡಾ ಕಡತಗಳ ರಹಸ್ಯ ಬಯಲಾಗಲಿದೆ ಎಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...