‘ಕೋವಿಡ್‌ ಲಸಿಕೆಯಿಂದ ಹೃದಯಾಘಾತ’ – ಆರೋಪ ಅಲ್ಲಗಳೆದ ಸಚಿವ ದಿನೇಶ್‌ ಗುಂಡೂರಾವ್‌

Date:

ಕೋವಿಡ್‌ ಲಸಿಕೆ ಹಠಾತ್‌ ಹೃದಯಾಘಾತಕ್ಕೆ ನೇರ ಕಾರಣವಲ್ಲ ಎಂದು ಆರೋಗ್ಯ ಇಲಾಕೆಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿ, ಕೋವಿಡ್‌ ಲಸಿಕೆಯಿಂದ ಹೃದಯಾಘಾತವಾಗುತ್ತದೆ ಎನ್ನುವ ಆರೋಪವನ್ನು ಅಲ್ಲಗಳೆದಿದ್ದಾರೆ.

“ಕೋವಿಡ್ ಪಾಸಿಟಿವ್ ಬಂದವರಲ್ಲಿ ಕೆಲವರಿಗೆ ಹೃದಯಾಘಾತ ಆಗಿದೆ. ಆದರೆ, ಅದು ಕೋವಿಡ್ ಲಸಿಕೆ ಯಿಂದ ಅಲ್ಲ. ಕೋವಿಡ್ ಲಸಿಕೆಯಿಂದ ಜನರಿಗೆ ಅನುಕೂಲ ಆಗಿದೆ. ಕೋವಿಡ್ ಬಂದಾಗ ಸೇವಿಸಿದ ಬೇರೆ ಔಷಧಗಳಿಂದ ಪರಿಣಾಮ ಆಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋವಿಡ್-19 ನಿಂದ ಗುಣಮುಖರಾದವರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಿವೆ. ಹೃದಯಾಘಾತವನ್ನು ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗುವುದು ಎಂದು ಹೇಳಿದರು.

“ಕೊರೊನಾ ಬಂದ ಒಂದು ವರ್ಷದೊಳಗೆ ರಕ್ತನಾಳ ಬ್ಲಾಕೇಜ್ ಆಗುವ ಸಾಧ್ಯತೆ ಇದೆ. ಆದರೆ, ಮೂರು ವರ್ಷದ ನಂತರ ಅದರ ಪರಿಣಾಮ ಅಷ್ಟರ ಮಟ್ಟಿಗೆ ಇಲ್ಲ. ಕೊರೊನಾ ಲಸಿಕೆಯಿಂದ ಜನರಿಗೆ ಅನುಕೂಲ ಆಗಿದೆ. ಆದರೆ, ಎಂಆರ್​ಎನ್​ಎ ವ್ಯಾಕ್ಸಿನ್ ಬಗ್ಗೆ ಸ್ವಲ್ಪ ಅನುಮಾನ ಇದೆ. ಈ ವ್ಯಾಕ್ಸಿನ್​ ಅನ್ನು ನಮ್ಮ ದೇಶದಲ್ಲಿ ಯಾರು ತೆಗೆದುಕೊಂಡಿಲ್ಲ” ಎಂದರು.‌

ಈ ಸುದ್ದಿ ಓದಿದ್ದೀರಾ? ರೈತರಿಂದ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಸರ್ಕಾರ ಬಳಸಿಕೊಂಡಿದ್ದೆಷ್ಟು? ಇಲ್ಲಿದೆ ನೋಡಿ…

“ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗುವುದು. ಪಠ್ಯಪುಸ್ತಕದಲ್ಲಿ ಹೃದಯಾಘಾತದ ಕುರಿತು ಪ್ರತ್ಯೇಕ ಪಠ್ಯ ಅಳವಡಿಸಲು ಶಿಕ್ಷಣ ಇಲಾಖೆಗೆ ಸೂಚಿಸಲಾಗುವುದು. ಎಲ್ಲ ತಾಲ್ಲೂಕು ಆಸ್ಪತ್ರೆಗಳಿಗೆ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲಾಗುವುದು” ಎಂದು ಹೇಳಿದರು.

“ಬೊಜ್ಜು, ಮಧುಮೇಹ ಮತ್ತಿತರ ಸಮಸ್ಯೆಗಳೂ ಹೃದಯಾಘಾತಕ್ಕೆ ಕಾರಣವಾಗಿದೆ. ಹಠಾತ್ ಹೃದಯಘಾತದ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಆದೇಶಿಸಿದ್ದರು. ಹೀಗಾಗಿ, ಡಾ. ರವೀಂದ್ರಾಥ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ ವರದಿ ನೀಡಿದೆ” ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...