ಬೇಸಿಗೆಯಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸಚಿವ ಈಶ್ವರ ಖಂಡ್ರೆ ಸೂಚನೆ

Date:

ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಮೈಸೂರು ಅರಣ್ಯ ಭವನದಲ್ಲಿ ಬುಧವಾರ ಅರಣ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕಾಗಿ ಕಾಡಿನಂಚಿನಲ್ಲಿ ಬಿದಿರು ಬೆಳೆಸುವುದು ಮತ್ತು ಅರಣ್ಯದೊಳಗಿನ ನೀರು ಗುಂಡಿಗಳು ಬತ್ತದಂತೆ ಸೌರ ಪಂಪ್ ಸೆಟ್ ಮೂಲಕ ಕೊಳವೆ ಬಾವಿಗಳಿಂದ ನೀರು ಹರಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

“ಬೇಸಿಗೆಯಲ್ಲಿ ಕಾಡ್ಗಿಚ್ಚು ಅರಣ್ಯ ನಾಶಕ್ಕೆ ಕಾರಣವಾಗುತ್ತದೆ. ಹೀಗಾಗಿ ಬರುವ ಬೇಸಿಗೆಯಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮತ್ತು ಕಾಡ್ಗಿಚ್ಚು ಕಾಣಿಸಿಕೊಂಡರೆ ಕೂಡಲೇ ನಂದಿಸಲು ಅಗ್ನಿಶಾಮಕ ಉಪಕರಣಗಳ ಸುಸ್ಥಿತಿಯನ್ನು ಖಾತ್ರಿಪಡಿಸಿಕೊಂಡು, ಸಿಬ್ಬಂದಿಯನ್ನು ಸನ್ನದ್ಧವಾಗಿರಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಿಸಲು ಸೂಚನೆ

“ಮೈಸೂರು ನಗರವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಲಾಗಿದ್ದು, ನಗರದಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಲೋಟ, ಬ್ಯಾನರ್, ಬಂಟಿಗ್ಸ್ ಸೇರಿದಂತೆ ಯಾವುದೇ ಏಕ ಬಳಕೆ ವಸ್ತು ಮಾರಾಟ, ಸಾಗಾಟ, ದಾಸ್ತಾನಿಗೆ ಅವಕಾಶ ಇಲ್ಲದಂತೆ ನಿಯಮಿತವಾಗಿ ತಪಾಸಣೆ ನಡೆಸಿ ದಂಡ ವಿಧಿಸಬೇಕು ” ಎಂದು ಹೇಳಿದರು.

“ಕಲುಷಿತ ನೀರು ಸೇವಿಸಿ ಯಾರೂ ಅಸ್ವಸ್ಥರಾಗಬಾರದು. ಈ ಹಿನ್ನೆಲೆಯಲ್ಲಿ ನಿಯಮಿತವಾಗಿ ಕುಡಿಯುವ ನೀರು ಪೂರೈಕೆ ಮಾಡುವ ಟ್ಯಾಂಕ್ ಗಳ ನೀರಿನ ಗುಣಮಟ್ಟ ಪರೀಕ್ಷಿಸಬೇಕು” ಎಂದು ಪರಿಸರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...