ಪಹಣಿ ವ್ಯತ್ಯಾಸ ಪ್ರಕರಣಗಳಿಗೆ ಶಾಶ್ವತ ಪರಿಹಾರ ನೀಡಲು ಸಚಿವ ಕೃಷ್ಣಬೈರೇಗೌಡ ತಾಕೀತು

Date:

  • ರಾಜ್ಯಾದ್ಯಂತ ಮರು ಭೂಮಾಪನಕ್ಕೆ (ರೀ ಸರ್ವೇ) ಸೂಚನೆ
  • ಕಂದಾಯ-ಅರಣ್ಯ ಭೂಮಿ ಗಡಿ ಗುರುತಿಸಲು ಸೂಚನೆ

ಸರ್ವೇ ಇಲಾಖೆಯಲ್ಲಿ ಕೆಲವು ಗೊಂದಲಗಳ ಕಾರಣಕ್ಕೆ ರೈತರು ಸಾಕಷ್ಟು ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಪಹಣಿಯ 3 ಮತ್ತು 9 ಕಾಲಂ ಹಾಗೂ ಆಕಾರಬಂದು ಆರ್‌ಟಿಸಿ ವ್ಯತ್ಯಾಸದ ಪ್ರಕರಣಗಳ ಕಾರಣಕ್ಕೆ ರೈತರು ದಿನಂಪ್ರತಿ ಸರ್ಕಾರಿ ಕಚೇರಿಗೆ ಅಲೆಯುವಂತಾಗಿದೆ. ಈ ಪ್ರಕರಣಗಳಿಗೆ ಶೀಘ್ರ ಮುಕ್ತಿ ನೀಡಿ ರೈತರಿಗೆ ತುಸು ನೆಮ್ಮದಿ ನೀಡಿ ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡ ಸೂಚಿಸಿದರು.

ಸರ್ವೇ ಇಲಾಖೆಯಲ್ಲಿನ ಸಮಸ್ಯೆಗಳು ಹಾಗೂ ಪಹಣಿ 3 ಮತ್ತು 9 ವ್ಯತ್ಯಾಸ (RTC Mismatch)ಗಳ ಬಗ್ಗೆ ಚರ್ಚಿಸುವ ಸಲುವಾಗಿ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಬುಧವಾರ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗಿತ್ತು.

ಸಭೆಯಲ್ಲಿ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ ಸಚಿವ ಕೃಷ್ಣಬೈರೇಗೌಡ, “ರಾಜ್ಯದಲ್ಲಿ ಪಹಣಿ 3 ಮತ್ತು 9 ವ್ಯತ್ಯಾಸವಿರುವ 54,175 ಪ್ರಕರಣಗಳು ದಾಖಲಾಗಿವೆ. ಇನ್ನು ಆಕಾರಬಂದು ಮತ್ತು ಆರ್‌ಟಿಸಿ ವ್ಯತ್ಯಾಸಕ್ಕೆ ಸಂಬಂಧಿಸಿದಂತೆ ಒಟ್ಟು 1,12,865 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ಇತ್ಯರ್ಥಕ್ಕಾಗಿ ರೈತರು ಸರ್ಕಾರಿ ಕಚೇರಿಗೆ ಅಲೆದು ಸುಸ್ತಾಗಿದ್ದಾರೆ. ಈ ಸಮಸ್ಯೆಗಳಿಗೆ ಮುಕ್ತಿಯೇ ಇಲ್ಲವೇ? ಜನಪ್ರತಿನಿಧಿಗಳಾಗಿ ನಾವು ಅವರಿಗೆ ಏನೆಂದು ಉತ್ತರಿಸಬೇಕು” ಎಂದು ಅಧಿಕಾರಿಗಳನ್ನು ಸಚಿವರು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರೆದು “ಈ ಎಲ್ಲ ತಿದ್ದುಪಡಿ ಪ್ರಕರಣಗಳಿಗೆ ಅಳತೆಯ ಅವಶ್ಯಕತೆ ಇದೆಯಾ ಎಂಬುದನ್ನು ಅಧಿಕಾರಿಗಳು ಖಾತ್ರಿಪಡಿಸಿಕೊಳ್ಳಬೇಕು ಮತ್ತು ಸರ್ವೇ ಇಲಾಖೆ ತಹಶೀಲ್ದಾರ್ ಗ್ರೇಡ್ ಅಧಿಕಾರಿಗಳಿಗೆ ತಿಂಗಳು ಅಥವಾ ವಾರಕ್ಕೆ ಇಂತಿಷ್ಟು ಪ್ರಕರಣ ಎಂದು ಗುರಿ ನಿಗದಿಪಡಿಸಿ ರೈತರ ಸಮಸ್ಯೆಗಳನ್ನು ಪರಿಹರಿಸಬೇಕು” ಎಂದು ಅವರು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬ್ರ್ಯಾಂಡ್ ಬೆಂಗಳೂರಿನಲ್ಲಿ ಬಡವರ ಪ್ರಾಣಕ್ಕೆ ಗ್ಯಾರಂಟಿಯಿಲ್ಲ

ಪೋಡಿ ಮುಕ್ತ ಗ್ರಾಮಕ್ಕೆ ಸೂಚನೆ

ಸಭೆಯಲ್ಲಿ ಪೋಡಿ ಮುಕ್ತ ಗ್ರಾಮದ ಬಗ್ಗೆಯೂ ಚರ್ಚಿಸಲಾಯಿತು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, “ ರಾಜ್ಯದಲ್ಲಿ ಈಗಾಗಲೇ 17,000 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳು ಎಂದು ಘೋಷಿಸಲಾಗಿದೆ. 14,000 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮ ಎಂದು ಘೋಷಿಸುವುದು ಬಾಕಿ ಇದೆ. ಈಗಾಗಲೇ ರಾಮನಗರ ಜಿಲ್ಲೆಯಲ್ಲಿ “ಡ್ರೋನ್ ತಂತ್ರಜ್ಞಾನ” ಆಧಾರಿತ ಭೂ ಮರು-ಮಾಪನಕ್ಕೆ (ರೀ ಸರ್ವೇ) ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿತ್ತು. ಈ ಪ್ರಯೋಗ ಯಶಸ್ವಿಯಾಗಿದ್ದು, ಇದನ್ನೇ ಆಧರಿಸಿ ರಾಜ್ಯಾದ್ಯಂತ ಮತ್ತೊಮ್ಮೆ ಭೂ ಮರು-ಮಾಪನ ಮಾಡಿ ಪೋಡಿ ಮರು ಅಭಿಯಾನಕ್ಕೆ ಚಾಲನೆ ನೀಡಿ” ಎಂದರು.

ನಮೂನೆ 57 ಅರ್ಜಿ ಇತ್ಯರ್ಥಕ್ಕೂ ಸೂಚನೆ

ನಮೂನೆ 57ರ ಅಡಿಯಲ್ಲಿ ಸಾಗುವಳಿ ಭೂಮಿ ಮಂಜೂರು ಮಾಡಲು ರಾಜ್ಯಾದ್ಯಂತ ಲಕ್ಷಾಂತರ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಎಲ್ಲಾ ಅರ್ಜಿಗಳನ್ನೂ ಕಾನೂನಿನ ಮಿತಿಯೊಳಗೆ ಯಾರ ಪ್ರಭಾವಕ್ಕೂ ಒಳಗಾಗದೆ, ಶೀಘ್ರವಾಗಿ ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿ ನೀಡಿ ಎಂದು ಸಚಿವ ಕೃಷ್ಣಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ಈ ನಮೂನೆ 57ರ ಅರ್ಜಿಯ ಅಡಿಯಲ್ಲಿ ಈ ಹಿಂದೆಯೇ ಭೂಮಿ ಮಂಜೂರಾಗಿದ್ದರೆ ಅಧಿಕಾರಿಗಳು ಪೋಡಿ ಮುಕ್ತ ಮಾಡುವ ಅಥವಾ ಏಕ ವ್ಯಕ್ತಿ ಅಡಿಯಲ್ಲಿ ಪೋಡಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಿ; ಮುಂದಿನ ದಿನಗಳಲ್ಲಿ ಫಾರಂ 57ರ ಅರ್ಜಿಗಳನ್ನು ಮಂಜೂರು ಮಾಡುವ ಮುನ್ನ ಭೂಮಿಯನ್ನು ಅಳತೆ ಮಾಡಿ ಮಂಜೂರು ನಕ್ಷೆ ತಯಾರಿಸಿದ ನಂತರ ಸಾಗುವಳಿ ಚೀಟಿ ನೀಡಿ ಪೋಡಿ ಪ್ರಕ್ರಿಯೆ ನಡೆಸಿ ನೋಂದಾಯಿಸಿ ಹಕ್ಕು ದಾಖಲೆಗಳನ್ನು ತಯಾರಿಸಿ ಎಂಬ ಸೂಚನೆಯನ್ನೂ ಅಧಿಕಾರಿಗಳಿಗೆ ರವಾನಿಸಿದರು.

ಕಂದಾಯ-ಅರಣ್ಯ ಗಡಿ ಗುರುತಿಸಿ

ಕಂದಾಯ ಹಾಗೂ ಅರಣ್ಯ ಜಮೀನುಗಳ ನಡುವಿನ ಗಡಿಯ ಬಗ್ಗೆ ಸಾಕಷ್ಟು ಸ್ಪಷ್ಟತೆ ಇಲ್ಲದ ಕಾರಣಕ್ಕೂ ಜನ ಸಾಕಷ್ಟು ತೊಂದರೆಗೆ ಒಳಗಾಗುತ್ತಿದ್ದಾರೆ. ಇಲಾಖೆಗೂ ಇದರಿಂದ ಸಾಕಷ್ಟು ನಷ್ಟ ಉಂಟಾಗುತ್ತಿದೆ. ಹೀಗಾಗಿ ಅಧಿಕಾರಿಗಳು ಶೀಘ್ರವಾಗಿ ಹಲವಾರು ಸರ್ವೇ ನಂಬರುಗಳಲ್ಲಿ ಹಂಚಿಹೋಗಿರುವ ಅರಣ್ಯ ಹಾಗೂ ಕಂದಾಯ ಭೂಮಿಗಳನ್ನು ಗುರುತಿಸಿ, ಸರ್ವೇ ನಂಬರುಗಳನ್ನು ಶೀಘ್ರವಾಗಿ ಅಳತೆ ಕೈಗೊಂಡು ಗಡಿ ಗುರುತಿಸಿ ದಾಖಲೆಗಳನ್ನು ತಯಾರಿಸಿ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...