ಬಸವಾದಿ ಶರಣರ ಕುರಿತ ಕೃತಿಗಳಿಗೆ 5 ಕೋಟಿ ರೂ. ದೇಣಿಗೆ: ಸಚಿವ ಎಂ‌ ಬಿ ಪಾಟೀಲ್‌ ಘೋಷಣೆ

Date:

ಬಸವಾದಿ ಶರಣರು ಮತ್ತು ಅನುಭವ ಮಂಟಪದಲ್ಲಿನ ಚಿಂತನೆಗಳನ್ನು ಕುರಿತು ಇಂಗ್ಲಿಷ್‌ನಲ್ಲಿ ಜಾಗತಿಕ ಮಟ್ಟದ ಪುಸ್ತಕಗಳು ಹೊರಬರಬೇಕಾಗಿದೆ. ಇದಕ್ಕಾಗಿ ತಾವು 5 ಕೋಟಿ ರೂಪಾಯಿ ದೇಣಿಗೆ ಕೊಡಲಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ‌ ಸೋಮವಾರ ಏರ್ಪಡಿಸಿದ್ದ ‘ರಮಣಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಉತ್ತರ ಕರ್ನಾಟಕದ ಸಾಧಕರಾದ ಫ.ಗು.ಹಳಕಟ್ಟಿ, ಸರ್ ಸಿದ್ದಪ್ಪ ಕಂಬಳಿ, ಲಿಂಗರಾಜ ದೇಸಾಯಿ, ಬಂತನಾಳದ ಸಿದ್ಧೇಶ್ವರ ಸ್ವಾಮೀಜಿ ಮುಂತಾದವರ ಬಗ್ಗೆ ಕೂಡ ನಮ್ಮಲ್ಲಿ ಪುಸ್ತಕಗಳು ಪ್ರಕಟವಾಗಬೇಕು. ಹಾಗೆಯೇ ಬೆಂಗಳೂರು ಭಾಗದ ಸರ್ ಪುಟ್ಟಣ್ಣ ಚೆಟ್ಟಿ ಅಂಥವರ ಬಗ್ಗೆಯೂ ತಿಳಿಯಬೇಕು. ಈ ಮೂಲಕ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಎನ್ನುವ ಭೇದ ಅಳಿಯಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಫ.ಗು.ಹಳಕಟ್ಟಿ ಅವರು ಇಲ್ಲದೆ ಹೋಗಿದ್ದರೆ ಬಸವ ಧರ್ಮವಾಗಲಿ, ವಚನ ಸಾಹಿತ್ಯವಾಗಲಿ, ನೂರಾರು ವಚನಕಾರರಾಗಲಿ ಬೆಳಕಿಗೆ ಬರುತ್ತಿರಲಿಲ್ಲ. ಅವರು ಮತ್ತು ಬಂತನಾಳದ ಪೂಜ್ಯರು ಸರ್ವಸ್ವವನ್ನೂ ತ್ಯಾಗ ಮಾಡಿ ವಚನ ಯುಗದ ಬಗ್ಗೆ ಬೆಳಕು ಚೆಲ್ಲುವ ಮಹಾನ್ ಕೆಲಸ ಮಾಡಿಹೋಗಿದ್ದಾರೆ. ಹಳಕಟ್ಟಿ ಅವರು ಆರಂಭಿಸಿದ್ದ ‘ಶಿವಾನುಭವ’ ಪತ್ರಿಕೆಯನ್ನು ಸದ್ಯದಲ್ಲೇ ಪುನಾರಂಭ ಮಾಡಲಾಗುವುದು” ಎಂದರು.

“ವಿಜಯಪುರದ ಬಿ ಎಲ್ ಡಿ ಇ ಸಂಸ್ಥೆಯಲ್ಲಿನ‌ ಹಳಕಟ್ಟಿ ಸಂಶೋಧನಾ ಕೇಂದ್ರದಿಂದ ವಚನ ಸಾಹಿತ್ಯ, ದಾಸ ಸಾಹಿತ್ಯ, ಆದಿಲ್ ಶಾಹಿ ಸಾಹಿತ್ಯ ಮತ್ತು ಎಂ ಎಂ‌ ಕಲ್ಬುರ್ಗಿ ಅವರ ಸಾಹಿತ್ಯ ಸಂಪುಟಗಳನ್ನು ಈಗಾಗಲೇ ಹೊರತರಲಾಗಿದೆ. ಇವುಗಳನ್ನು ನಮ್ಮ ಯುವಜನ ಓದಬೇಕು” ಎಂದು ತಿಳಿಸಿದರು.

ಲೇಖಕ ಎಸ್.ಷಡಕ್ಷರಿ ಅವರ ಕ್ಷಣ ಹೊತ್ತು ಆಣಿಮುತ್ತು- ಭಾಗ 15 ಪುಸಕ್ತ ಕೂಡ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು. ಸಾಹಿತಿ ಗೊ ರು ಚನ್ನಬಸಪ್ಪ ಸೇರಿದಂತೆ ಇತತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...