ಒಳಮೀಸಲಾತಿ: 101 ಜಾತಿ ಸಮೀಕ್ಷೆಗೆ ಸಚಿವ ಮುನಿಯಪ್ಪ ಸೂಚನೆ

Date:

ಒಳಮೀಸಲಾತಿ ಕಲ್ಪಿಸುವ ಸಂಬಂಧ ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ನಡೆಸಲು 54 ಸಾವಿರ ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಂಡು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಆಹಾರ ಸಚಿವ ಕೆ ಎಚ್‌ ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಈ ಸಂಬಂಧ ಸಭೆ ನಡೆಸಿದ ಅವರು, ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್ ಅವರನ್ನು ಈ ಕಾರ್ಯದ ಉಸ್ತುವಾರಿಯನ್ನಾಗಿ ಪ್ರಕಟಿಸಿದರು.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಮುನಿಯಪ್ಪ ಅವರು,101 ಜಾತಿಗಳಿಗೆ ಅನ್ಯಾಯ ಆಗದಂತೆ ಯಾವ ರೀತಿ ಒಳ ಮೀಸಲಾತಿ ನೀಡಬೇಕು ಎಂಬ ಕುರಿತು ಚರ್ಚಿಸಲಾಯಿತು. ಆದಿ ಕರ್ನಾಟಕ ಮತ್ತು ಆದಿ ದ್ರಾವಿಡ ಕುರಿತು ಇರುವ ಗೊಂದಲ ನಿವಾರಿಸಲು ಏನು ಮಾಡಬೇಕು ಎಂಬುದರ ಬಗ್ಗೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲಾಯಿತು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ತಿಂಗಳಲ್ಲಿ ವರದಿ ಪಡೆಯಲು ಸೂಚಿಸಿದ್ದು, ಈಗಾಗಲೇ 15 ದಿನಗಳು ಕಳೆದಿವೆ. ತ್ವರಿತಗತಿಯಲ್ಲಿ ಮತ್ತು ಕಾಲ ಮಿತಿಯಲ್ಲಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರ್ದು ನಮ್ಮದೇ ಸಂಸ್ಕೃತಿಯ ಭಾಗ; ಅನ್ಯ ಅಲ್ಲ- ಸುಪ್ರೀಮ್ ತೀರ್ಪು ಚೇತೋಹಾರಿ

ನಿವೃತ್ತ ನ್ಯಾಯಮೂರ್ತಿ ನಾಗ ಮೋಹನ್‌ದಾಸ್‌ ನೇತೃತ್ವದ ಆಯೋಗವು ಮಾರ್ಚ್‌ನಲ್ಲಿ ಮಧ್ಯಂತರ ವರದಿ ಸಲ್ಲಿಸಿ, ಒಳಮೀಸಲಾತಿ ನೀಡುವುದಕ್ಕಾಗಿ ಪರಿಶಿಷ್ಟ ಜಾತಿಯಲ್ಲಿನ 101 ಉಪಜಾತಿಗಳ ದತ್ತಾಂಶ ಸಂಗ್ರಹಿಸುವು ದಕ್ಕೆ ಹೊಸ ಸಮೀಕ್ಷೆ ನಡೆಸಬೇಕು ಎಂದು ಶಿಫಾರಸು ಮಾಡಿತ್ತು.

ಒಳಮೀಸಲಾತಿ ವರ್ಗೀಕರಣವನ್ನು ತ್ವರಿತವಾಗಿ ಮತ್ತು ವೈಜ್ಞಾನಿಕವಾಗಿ ಕೈಗೊಳ್ಳುವ ಸಂಬಂಧ, ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ನಾಗಮೋಹನ್‌ದಾಸ್‌ ಆಯೋಗಕ್ಕೇ ವಹಿಸಲು ಸಚಿವ ಸಂಪುಟ ಸಭೆ ನಿರ್ಣಯಿಸಿತ್ತು. ಸಮೀಕ್ಷಾ ಕಾರ್ಯವನ್ನು 60 ದಿನಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಆಯೋಗದ ಅವಧಿಯನ್ನು ಎರಡು ತಿಂಗಳವರೆಗೆ ವಿಸ್ತರಿಸಲಾಗಿತ್ತು.

ಸಭೆಯಲ್ಲಿ ಮಾಜಿ ಸಚಿವ ಎಚ್‌.ಆಂಜನೇಯ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಸಮಾಜಕಲ್ಯಾಣ ಇಲಾಖೆ ಪ್ರಧಾನಕಾರ್ಯದರ್ಶಿ ಪಿ. ಮಣಿವಣ್ಣನ್, ಆಯುಕ್ತ ರಾಕೇಶ್ ಕುಮಾರ್‌, ನಿವೃತ್ತ ಐಎಎಸ್ ಅಧಿಕಾರಿಗಳಾದ ಗೋನಾಳ ಭೀಮಪ್ಪ, ತೇಗನೂರು, ಭೀಮಾಶಂಕರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...