ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಟವೆಲ್?

Date:

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ನಡುವೆ ಬಹಳ ದಿನದಿಂದ ಮಡುಗಟ್ಟಿದ ಅಸಮಾಧಾನ ಕೊನೆಗೂ ಸ್ಫೋಟಗೊಂಡಿದೆ.

ಆದಷ್ಟು ಶೀಘ್ರವೇ ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ ಮಾಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಭೇಟಿ ಮಾಡಿ ಬೇಡಿಕೆ ಇಟ್ಟಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಸುರ್ಜೆವಾಲಾರನ್ನು ಭೇಟಿ ಮಾಡಿದ್ದೇನೆ. ಪಕ್ಷದ ಆಗು ಹೋಗುಗಳು ಹಾಗೂ ಸಂಘಟನೆ ಬಗ್ಗೆ ಚರ್ಚೆ ಮಾಡಿರುವೆ. ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕ ಆಗಬೇಕು ಎಂದು ಹೇಳಿದ್ದೇನೆ. ಡಿ ಕೆ ಶಿವಕಮಾರ್ ಅವರನ್ನೇ ಮುಂದುವರಿಸುವುದಾದರೆ ಅದನ್ನೂ ಸ್ಪಷ್ಟಪಡಿಸಿ ಅಂತ ಹೇಳಿದ್ದೇನೆ. ನಮಗೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು. ಮತ ಸೆಳೆಯುವವರನ್ನು ಹಾಗೂ ವರ್ಚಸ್ಸು ಇರುವವರನ್ನು ಅಧ್ಯಕ್ಷರನ್ನಾಗಿ ಮಾಡಿ ಅಂತ ಹೇಳಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನನ್ನು ಅಧ್ಯಕ್ಷ ಮಾಡಿ ಅಂತ ಕೇಳಿಲ್ಲ. ಆದರೆ ಪೂರ್ಣ ಪ್ರಮಾಣದ ಅಧ್ಯಕ್ಷರನ್ನು ಮಾಡಿ ಎಂದು ಹೇಳಿದ್ದೇನೆ. ಇವರು ಇರಬೇಕು ಬೇಡ ಎಂಬ ಬಗ್ಗೆ ಗೊಂದಲಗಳಿವೆ. ಹೀಗಾಗಿ ಎಲ್ಲ ಗೊಂದಲಗಳಿಗೆ ತೆರೆಎಳೆಯಿರಿ” ಎಂದು ಸುರ್ಜೆವಾಲಾಗೆ ಮನವಿ ಮಾಡಿರುವೆ” ಎಂದು ಹೇಳಿದರು.

ಒಂದು ಕಡೆ ತೆರೆಮರೆಯಲ್ಲೇ ಸಿಎಂ ಕುರ್ಚಿ ಫೈಟ್​ ನಡೆಯುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಎಬ್ಬಿಸಿರೋ ಸಚಿವ ಸತೀಶ್ ಜಾರಕಿಹೊಳಿ, ನೇರಾ ನೇರವಾಗಿಯೇ ಹೊಸ ಅಧ್ಯಕ್ಷರ ನೇಮಕಕ್ಕೆ ಪಟ್ಟು ಹಿಡಿದಿದ್ದಾರೆ. ಕೊನೆಯ ಎರಡ್ಮೂರು ವರ್ಷವದಾರೂ ಸಿಎಂ ಆಗಬೇಕೆಂದು ಡಿ ಕೆ ಶಿವಕುಮಾರ್ ಕಸರತ್ತು ನಡೆಸಿದ್ದಾರೆ. ಆದರೆ ಇತ್ತ ಸತೀಶ್ ಜಾರಕಿಹೊಳಿ ಡಿ ಕೆ ಶಿವಕುಮಾರ್ ಬಳಿ ಇರುವ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರಾ ಎನ್ನುವ ಅನುಮಾನ ಅವರ ಮಾತುಗಳಿಂದಲೇ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯವರು ಗಳಿಸಿದ ಡಿಗ್ರಿಗಳು ಮತ್ತು ಮಾಹಿತಿ ಹಕ್ಕು ಎಂಬ ತುಕ್ಕು ಹಿಡಿದ ಹತಾರು

ರಾಜ್ಯ ಕಾಂಗ್ರೆಸ್‌ನ ವಿವಿಧ ಬಣಗಳು ಮುಖ್ಯಮಂತ್ರಿ ಹುದ್ದೆ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ಮೇಲಾಟ ನಡೆಸುತ್ತಿದ್ದರೂ ದೆಹಲಿ ಚುನಾವಣೆಯ ಬ್ಯುಸಿಯಲ್ಲಿರುವ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಬಜೆಟ್ ಮುಗಿಯುವವರೆಗೂ ಇಂತಹ ಯಾವುದೇ ಬೆಳವಣಿಗೆ ಬಗ್ಗೆ ಚಿಂತಿಸುವ ಮನಸ್ಥಿತಿ ಹೊಂದಿಲ್ಲ ಎನ್ನಲಾಗಿದೆ.

ವಾಸ್ತವವಾಗಿ ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಮಾಡುವ ಸಂದರ್ಭ ಎದುರಾದರೆ ಆಗ ಲಿಂಗಾಯತ ಸಮುದಾಯಕ್ಕೆ ಹುದ್ದೆ ನೀಡಬೇಕು ಎಂಬ ಚಿಂತನೆ ಪಕ್ಷದಲ್ಲಿತ್ತು. ಹೀಗಾಗಿ ಲಿಂಗಾಯತ ಸಮುದಾಯದ ಈಶ್ವರ್ ಖಂಡ್ರೆ ಅವರ ಹೆಸರು ಪ್ರಧಾನವಾಗಿ ಕೇಳಿ ಬರುತ್ತಿತ್ತು. ಇದೀಗ ಹಠಾತ್ ಆಗಿ ಸತೀಶ್ ಜಾರಕಿಹೊಳಿ ಅವರು ನೇರವಾಗಿ ಹುದ್ದೆ ಆಕಾಂಕ್ಷೆಯನ್ನು ಹೈಕಮಾಂಡ್ ಮುಂದೆ ನೇರವಾಗಿ ವ್ಯಕ್ತಪಡಿಸಿರುವುದು ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...