‘ಸಿರಿಧಾನ್ಯ ಮೇಳ 2024’ ವ್ಯವಸ್ಥಿತ ಆಯೋಜನೆಗೆ ಸಚಿವರ ಸೂಚನೆ

Date:

ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಜ‌ನವರಿ 5, 6, 7ರಂದು ನಡೆಯುವ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದಲ್ಲಿ ಯಾವುದೇ ವ್ಯತ್ಯಾಸಗಳಾಗದಂತೆ ಅಚ್ಚುಕಟ್ಟಾಗಿ ಆಯೋಜಿಸುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಶೇಷಾದ್ರಿ ರಸ್ತೆಯಲ್ಲಿರುವ ಕೃಷಿ ಆಯುಕ್ತಾಲಯದ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳದ ಪೂರ್ವಭಾವಿ ಸಿದ್ದತೆ ಪರಿಶೀಲನಾ ಸಭೆ ನಡೆಸಿದ ಸಚಿವರು ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಮೇಳದ‌ ಉದ್ಘಾಟನೆ, ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ, ಕೇಂದ್ರ ಸರ್ಕಾರದ ಹಲವು ಸಚಿವರು ಹಾಗೂ ರಾಜ್ಯದ ಸಚಿವರು ಪಾಲ್ಗೊಳ್ಳಲಿದ್ದು ಶಿಷ್ಟಾಚಾರದಲ್ಲಿ ಯಾವುದೇ ಲೋಪ ಉಂಟಾಗದಂತೆ ಗಮನಹರಿಸುಲು ಎನ್ ಚಲುವರಾಯಸ್ವಾಮಿ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂಷಣೆ ಬಿಡಲಿ, ಆತ್ಮಹತ್ಯೆಯಿಂದ ರೈತರನ್ನು ದೂರ ಮಾಡಲಿ

ದೇಶ ವಿದೇಶದ ವಿಜ್ಞಾನಿಗಳು, ತಜ್ಞರು, ಗಣ್ಯರು ಇದರಲ್ಲಿ ಪಾಲ್ಗೊಳ್ಳುವುದರಿಂದ ಎಲ್ಲಾ ಕಾರ್ಯಕ್ರಮಗಳು ಗುಣಾತ್ಮಕವಾಗಿ ಹಾಗೂ ರಚನಾತ್ಮಕವಾಗಿರಲಿ. ರೈತ ಸ್ನೇಹಿ, ಗ್ರಾಹಕ ಸ್ನೇಹಿ ವಾತಾವರಣ ಸೃಷ್ಟಿ ಮಾಡಿ. ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಒದಗಿಸಿ ಎಂದು ಸಚಿವರು ನಿರ್ದೇಶನ‌ ನೀಡಿದರು.

ಸಿರಿಧಾನ್ಯಗಳ ಕೃಷಿ, ಅದರ ಉತ್ಪನ್ನಗಳ‌ ಮೌಲ್ಯವರ್ಧನೆ, ವಿಭಿನ್ನ ಖಾದ್ಯ ತಯಾರಿಕೆ ಬಗ್ಗೆ ರೈತರಿಗೆ, ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ದೊರೆಯುವಂತೆ ಮಾಡಿ ಪ್ರಾತ್ಯಕ್ಷಿಕೆ, ವಿಚಾರ ಸಂಕಿರಣಗಳನ್ನು ಏರ್ಪಡಿಸಿ ಎಂದು ಎನ್ ಚಲುವರಾಯಸ್ವಾಮಿ ಸೂಚಿಸಿದರು.

ಮೇಳದ ಯಶಸ್ವಿ ಸಂಘಟನೆಗೆ ರಚಿಸಲಾಗಿರುವ ಉಪ ಸಮಿತಿಗಳು ಹೆಚ್ಚಿನ ಜವಾಬ್ದಾರಿ ವಹಿಸಿ, ಬೆಂಗಳೂರಿಗೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಜಿಲ್ಲೆಗಳಲ್ಲಿಯೂ ಪ್ರಚಾರ ಕೈಗೊಳ್ಳಬೇಕು, ಗ್ರಾಮಿಣ ರೈತರಿಗೆ ಇದರಲ್ಲಿ ಭಾಗವಹಿಸಲು ಸೂಕ್ತ ವ್ಯವಸ್ಥೆ ಮಾಡಿ ಸೌಲಭ್ಯ ಕಲ್ಪಿಸಬೇಕು ಎಂದು ಅವರು ಹೇಳಿದರು.

ಕೃಷಿ ಇಲಾಖೆ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರೂ ಸಹ ಹಲವು ಸಲಹೆ ಸೂಚನೆಗಳನ್ನು ನೀಡಿದರು. ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್, ನಿರ್ದೇಶಕರಾದ ಡಾ ಜಿ.ಟಿ ಪುತ್ರ ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...