ವಿಡಿಯೊ ಕಾನ್ಫರೆನ್ಸ್‌ನಲ್ಲಿ ಅನುಚಿತ ವರ್ತನೆ: ಲೈವ್‌ ಸ್ಟ್ರೀಮಿಂಗ್‌ಗೆ ನಿರ್ಬಂಧ ಹೇರಿದ ಹೈಕೋರ್ಟ್‌

Date:

ಕೆಲವು ನ್ಯಾಯಾಲಯಗಳ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅನುಚಿತ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್‌, ಇನ್ನು ಮುಂದೆ ಲೈವ್‌ ಸ್ಟ್ರೀಮಿಂಗ್‌ಗೆ ನಿರ್ಬಂಧ ವಿಧಿಸಿದೆ.

ತಂತ್ರಜ್ಞಾನ ದುರುಪಯೋಗವಾಗುತ್ತಿದೆ. ಜೊತೆಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅನುಚಿತ ಪ್ರಕರಣಗಳು ವರದಿಯಾಗಿದೆ. ಹೀಗಾಗಿ ಲೈವ್‌ ಸ್ಟ್ರೀಮಿಂಗ್‌ ಮತ್ತು ವಿಡಿಯೋ ಕಾನ್ಫರೆನ್ಸ್‌ಗೆ ಇನ್ನು ಮುಂದೆ ನಿರ್ಬಂಧಿಸುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ತಿಳಿಸಿರುವುದಾಗಿ ‘ಲೈವ್ ಲಾ’ ವರದಿ ಮಾಡಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ, ಇದು ದುರದೃಷ್ಟಕರ ಸಂಗತಿ. ನಾವು ಲೈವ್ ಸ್ಟ್ರೀಮಿಂಗ್ ಮತ್ತು ವೀಡಿಯೊ ಕಾನ್ಫರೆನ್ಸಿಂಗ್ ಅನ್ನು ನಿಲ್ಲಿಸುತ್ತಿದ್ದೇವೆ. ಕೆಲವು ಕಿಡಿಗೇಡಿಗಳು ಇದನ್ನು ದುರುಪಯೋಗಪಡಿಸುತ್ತಿದ್ದಾರೆ. ಹಾಗಾಗಿ, ನಾವು ಇನ್ನು ಮುಂದೆ ಯಾವುದೇ ವೀಡಿಯೊ ಕಾನ್ಫರೆನ್ಸಿಂಗ್ ಸೌಲಭ್ಯವನ್ನು ಅನುಮತಿಸುತ್ತಿಲ್ಲ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಈ ರೀತಿಯ ಬೆಳವಣಿಗೆಗಳಾಗದಿದ್ದರೆ ಕರ್ನಾಟಕ ಹೈಕೋರ್ಟ್ ಈ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಿರಲಿಲ್ಲ. ನ್ಯಾಯಾಲಯವು ಯಾವಾಗಲೂ ಸಾರ್ವಜನಿಕರಿಗೆ ಮತ್ತು ವಕೀಲರು, ಸಲಹೆಗಾರರಿಗೆ ಉತ್ತಮ ಸೇವೆಗಳಿಗೆ ತಂತ್ರಜ್ಞಾನವನ್ನು ಬಳಸುವುದರ ಪರವಾಗಿಯೇ ನಿಂತಿದೆ. ಮಾಧ್ಯಮದವರಿಗೆ ನಮ್ಮ ಈ ನಿರ್ಧಾರದಿಂದ ತೊಂದರೆಯಾಗಬಹುದು. ಆದರೂ, ಇದೊಂದು ಅನಿರೀಕ್ಷಿತ ಬೆಳವಣಿಗೆ. ನ್ಯಾಯಾಲಯ ವ್ಯವಸ್ಥೆಯ ಹಿತಾಸಕ್ತಿಗಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇವೆ. ನಮ್ಮೊಂದಿಗೆ ಸಹಕರಿಸಬೇಕು’ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ವಿನಂತಿಸಿದರು.

ಸೈಬರ್‌ ಭದ್ರತಾ ಕಾರಣಗಳಿಗಾಗಿ ಕರ್ನಾಟಕ ಹೈಕೋರ್ಟ್‌ನ ಬೆಂಗಳುರು, ಧಾರವಾಡ, ಕಲಬುರ್ಗಿ ಪೀಠಗಳಲ್ಲಿ ಸದ್ಯಕ್ಕೆ ವಿಡಿಯೊ ಕಾನ್ಫರೆನ್ಸ್‌ ಅಮಾನತುಗೊಳಿಸಲಾಗಿದೆ ಎಂದು ರಿಜಿಸ್ಟ್ರಾರ್‌ ಜನರಲ್‌ ಭರತ್‌ ಕುಮಾರ್‌ ತಿಳಿಸಿದ್ದಾರೆ. ಹೀಗಾಗಿ, ವಿಡಿಯೊ ಕಾನ್ಫರೆನ್ಸ್‌ ಮತ್ತು ಲೈವ್‌ ಸ್ಟ್ರೀಮಿಂಗ್‌ ನಿಲ್ಲಿಸಲಾಗಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...